ಬ್ರೇಕಿಂಗ್ ನ್ಯೂಸ್
29-11-21 10:54 pm Mangaluru Correspondent ಕ್ರೈಂ
ಮಂಗಳೂರು, ನ.29: ಸುರತ್ಕಲ್ ಬಳಿಯ ಎನ್ಐಟಿಕೆ ಟೋಲ್ ಗೇಟ್ ನಲ್ಲಿ ಸಿಬಂದಿಯೊಬ್ಬ ರೌಡಿಸಂ ತೋರಿಸಿದ್ದು, ಕಾರು ಚಲಾಯಿಸುತ್ತಿದ್ದ ಮಹಿಳೆಯ ಮೇಲೆ ಕೈಮಾಡಲು ಯತ್ನಿಸಿದ ಘಟನೆ ನಡೆದಿದೆ. ಈ ಬಗ್ಗೆ ಸೀಮಾ ರಂಜಿತ್ ಶೆಟ್ಟಿ ಎಂಬವರು ಸುರತ್ಕಲ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಟೋಲ್ ಗೇಟ್ ನಲ್ಲಿ ದುರ್ವರ್ತನೆ ತೋರಿದ ವ್ಯಕ್ತಿಯನ್ನು ಬಂಧಿಸಿದ್ದಾರೆ.
ಸೀಮಾ ರಂಜಿತ್ ಶೆಟ್ಟಿ ದಂಪತಿ ಮಂಗಳೂರಿನಿಂದ ಕಾರಿನಲ್ಲಿ ಉಡುಪಿಗೆ ತೆರಳಿ, ರಾತ್ರಿ 9 ಗಂಟೆ ವೇಳೆಗೆ ಹಿಂತಿರುಗಿ ಬರುತ್ತಿದ್ದಾಗ ಎಡಬದಿಯ ರಸ್ತೆಯಿಂದ ಸಾಗಿದಾಗ, ಟೋಲ್ ಗೇಟ್ ನಲ್ಲಿದ್ದ ಯೋಗೀಶ್ ಎಂಬಾತ ಅವಾಚ್ಯವಾಗಿ ಬೈದು ನಿಂದಿಸಿದ್ದಲ್ಲದೆ, ಚಾಲಕನ ಮೇಲೆ ಕೈಮಾಡಲು ಯತ್ನಿಸಿದ್ದಾನೆ. ರಸ್ತೆಗೆ ಅಡ್ಡಲಾಗಿ ಬ್ಯಾರಿಕೇಡ್ ಇಟ್ಟು ಮಧ್ಯದ ಟೋಲ್ ಗೇಟ್ ರಸ್ತೆಯಲ್ಲಿ ಚಲಾಯಿಸುವಂತೆ ಬಲವಂತ ಮಾಡಿದ್ದಾನೆ.
ಈ ಬಗ್ಗೆ ಕೂಡಲೇ ದಂಪತಿ ಸುರತ್ಕಲ್ ಠಾಣೆಗೆ ಕರೆ ಮಾಡಿದ್ದು, ಅಲ್ಲಿಂದ ನಾವು ಈಗ ಲಭ್ಯರಿಲ್ಲ ಎಂದು ಉತ್ತರಿಸಿದ್ದರು ಎನ್ನಲಾಗಿದೆ. ಆನಂತರ ಮಹಿಳೆ ನೇರವಾಗಿ ಪೊಲೀಸ್ ಕಮಿಷನರ್ ಶಶಿಕುಮಾರ್ ನಂಬರಿಗೆ ಕರೆ ಮಾಡಿದ್ದು, ಕೂಡಲೇ ಕಮಿಷನರ್ ಸ್ಪಂದಿಸಿದ್ದಾರೆ. ಅಲ್ಲದೆ ಸುರತ್ಕಲ್ ಪೊಲೀಸರನ್ನು ಅಲ್ಲಿಗೆ ಕಳಿಸಿಕೊಟ್ಟು ಆರೋಪಿಯನ್ನು ಬಂಧಿಸುವಂತೆ ಮಾಡಿದ್ದಾರೆ. ಪೊಲೀಸರು ಆರೋಪಿ ಯೋಗೀಶ್ ನನ್ನು ಬಂಧಿಸಿದ್ದಾರೆ. ತನ್ನ ಮೇಲೆ ಕೈಮಾಡಿ ಮಾನಹಾನಿಗೆ ಯತ್ನಿಸಿದ್ದಾಗಿ ಮಹಿಳೆ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.
ಎನ್ಐಟಿಕೆ ಟೋಲ್ ಗೇಟ್ ನಲ್ಲಿ ಹಿಂದಿನಿಂದಲೂ ರೌಡಿಗಳನ್ನು ಇಟ್ಟುಕೊಂಡು ಸಾರ್ವಜನಿಕರನ್ನು ಸುಲಿಗೆ ಮಾಡಲಾಗುತ್ತಿದೆ. ಅಲ್ಲದೆ, ನಿಗದಿಗಿಂತ ಹೆಚ್ಚುವರಿಯಾಗಿ ಶುಲ್ಕವನ್ನು ತೆಗೆದು ಜನರಿಂದ ಹಣ ಸುಲಿಗೆ ಮಾಡುತ್ತಿದ್ದಾರೆ ಎಂದು ಈ ಬಗ್ಗೆ ಹಲವಾರು ಮಂದಿ ದೂರಿದ್ದಾರೆ.
One person was arrested for abusing and attempting to assault a married couple at Surathkal toll gate. The incident took place on November 27. The arrested is identified as Yogesh (23) from Tadambail.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm