ಬ್ರೇಕಿಂಗ್ ನ್ಯೂಸ್
30-11-21 07:00 pm HK Desk news ಕ್ರೈಂ
Photo credits : Headline Karnataka
ಮಂಗಳೂರು, ನ.30: ಪಂಚಾಯತ್ ಅಭಿವೃದ್ಧಿ ಅಧಿಕಾರಿಯೊಬ್ಬ ಪಂಚಾಯತ್ ಅಧ್ಯಕ್ಷರ ಮೇಲೆಯೇ ಹಲ್ಲೆ ನಡೆಸಿದ ಘಟನೆ ಕಂದಾವರ ಪಂಚಾಯತ್ ಕಚೇರಿಯಲ್ಲಿ ನಡೆದಿದೆ.
ಕೈಕಂಬ ಬಳಿಯ ಕಂದಾವರ ಪಂಚಾಯತ್ ಅಧ್ಯಕ್ಷ ಉಮೇಶ್ ಮೂಲ್ಯ ಎಂಬವರ ಮೇಲೆ ಹಲ್ಲೆ ನಡೆಸಲಾಗಿದೆ. ಉಮೇಶ್ ಮೂಲ್ಯ ಇಂದು ಮಧ್ಯಾಹ್ನ ಪಿಡಿಓ ಯಶವಂತ ಕಚೇರಿಗೆ ತೆರಳಿ, ಪಂಚಾಯತ್ ನಿರ್ಣಯ ಪುಸ್ತಕವನ್ನು ಕೇಳಿದ್ದಾರೆ. ಆದರೆ, ಪಿಡಿಓ ಅಧಿಕಾರಿ ಪುಸ್ತಕವನ್ನು ನೀಡಲು ನಿರಾಕರಿಸಿದ್ದಾರೆ. ಅದಕ್ಕೆ ನಮಗೆ ಪಂಚಾಯತ್ ನಿರ್ಣಯ ಪುಸ್ತಕವನ್ನು ಪಡೆಯುವುದಕ್ಕೂ ಅಧಿಕಾರ ಇಲ್ಲವೇ ಎಂದು ಪಂಚಾಯತ್ ಅಧ್ಯಕ್ಷರು ಪ್ರಶ್ನೆ ಮಾಡಿದ್ದಾರೆ. ಈ ವಿಚಾರದಲ್ಲಿ ಮಾತಿಗೆ ಮಾತು ಬೆಳೆದಿದ್ದು, ಪಿಡಿಓ ಯಶವಂತ್, ಪಂಚಾಯತ್ ಅಧ್ಯಕ್ಷ ಉಮೇಶ್ ಮೂಲ್ಯರನ್ನು ದೂಡಿ ಹಾಕಿದ್ದು ಮುಖಕ್ಕೆ ಗುದ್ದಿದ್ದಾರೆ ಎನ್ನಲಾಗಿದೆ. ಇದರ ಪೆಟ್ಟಿಗೆ ಉಮೇಶ್ ಮೂಲ್ಯ ನೆಲಕ್ಕೆ ಬಿದ್ದಿದ್ದು, ಗಲ್ಲಕ್ಕೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಈ ಬಗ್ಗೆ ಬಜ್ಪೆ ಠಾಣೆಯಲ್ಲಿ ಪಂಚಾಯತ್ ಸದಸ್ಯರು ದೂರು ನೀಡಿದ್ದು ಪ್ರಕರಣ ದಾಖಲಾಗಿದೆ. ಪಿಡಿಓ ಯಶವಂತ್ ಹಿಂದಿನಿಂದಲೂ ಸಾರ್ವಜನಿಕರು ಮತ್ತು ಪಂಚಾಯತ್ ಸದಸ್ಯರ ಜೊತೆ ದುರ್ವರ್ತನೆ ತೋರುತ್ತಿದ್ದ ಬಗ್ಗೆ ಆರೋಪ ಕೇಳಿಬಂದಿತ್ತು. ಪಂಚಾಯತ್ ನಲ್ಲಿ ಯಾವುದೇ ವಿಚಾರದ ಬಗ್ಗೆ ಮಾಹಿತಿ ಕೇಳಿದರೂ, ಆತ ಸರಿಯಾಗಿ ಸ್ಪಂದಿಸುತ್ತಿರಲಿಲ್ಲ. ಈ ಬಗ್ಗೆ ಇತ್ತೀಚೆಗೆ ಕೆಲವು ಪಂಚಾಯತ್ ಸದಸ್ಯರು ಸೇರಿ ಜಿಲ್ಲಾ ಪಂಚಾಯತ್ ಸಿಇಓಗೆ ದೂರು ನೀಡಿದ್ದರು. ಒಂದು ವರ್ಷದ ಹಿಂದೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಫೋನ್ ಮಾಡಿದ್ದಾಗ, ಪಿಡಿಓ ಯಶವಂತ್ ಉಲ್ಟಾ ಮಾತನಾಡಿದ್ದ ಆಡಿಯೋ ವೈರಲ್ ಆಗಿತ್ತು. ಇದೀಗ ಬಿಜೆಪಿ ಆಡಳಿತದ ಪಂಚಾಯತ್ ಅಧ್ಯಕ್ಷರಿಗೆ ಹಲ್ಲೆ ನಡೆಸಿ ಪಿಡಿಓ ಮತ್ತೆ ಸುದ್ದಿಯಾಗಿದ್ದಾರೆ.
Mnagalore Kandavara panchayat President assaulted by PDO in office. President Umesh when asked of a record book from Pdo Yashwant. Pdo who refused to give the book started to fight and that landed to assault.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 07:06 pm
Mangaluru Staffer
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
Dr Meenakshi Jain at Mangaluru Lit Fest: ಉಪನಿ...
10-01-26 07:21 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm