ಬ್ರೇಕಿಂಗ್ ನ್ಯೂಸ್
01-12-21 11:18 am HK Desk news ಕ್ರೈಂ
ಉಳ್ಳಾಲ, ಡಿ.1: ತಲಪಾಡಿ ಚೆಕ್ ಪೋಸ್ಟ್ ಕಡೆಯಿಂದ ತಂಗಿಯೊಂದಿಗೆ ಕಾಲ್ನಡಿಗೆಯಲ್ಲಿ ಶಾಲೆಗೆ ತೆರಳುತ್ತಿದ್ದ ಅಪ್ರಾಪ್ತ ಬಾಲಕಿಯನ್ನ ಸ್ಕೂಟರ್ ಸವಾರನೋರ್ವ ಕೈಹಿಡಿದೆಳೆದು ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ನಡೆದಿದ್ದು ಸಿಸಿಟಿವಿ ಆಧಾರದಲ್ಲಿ ಪೊಲೀಸರು ಆರೋಪಿಯ ಶೋಧ ಕಾರ್ಯ ನಡೆಸುತ್ತಿದ್ದಾರೆ.
ತಲಪಾಡಿ ಅಲಂಕಾರ ಗುಡ್ಡೆಯಿಂದ ಸಂತ್ರಸ್ತೆ 14 ವರ್ಷದ ಬಾಲಕಿ ತನ್ನ ತಂಗಿಯೊಂದಿಗೆ ಇಂದು ಬೆಳಗ್ಗೆ ತಲಪಾಡಿ ಚೆಕ್ ಪೋಸ್ಟ್ ದಾರಿಯಾಗಿ ಕಾಲ್ನಡಿಗೆಯಲ್ಲಿ ಶಾಲೆಗೆ ತೆರಳುತ್ತಿದ್ದ ವೇಳೆ ಸ್ಕೂಟರಲ್ಲಿ ಬಂದಿದ್ದ ಬರ್ಮುಡಾ ಧರಿಸಿದ ಯುಬಕನೊಬ್ಬ ಬಾಲಕಿಯ ಕೈಯನ್ನ ಎಳೆದು ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ವೇಳೆ ಅಕ್ಕ, ತಂಗಿ ಜೊತೆಯಾಗಿ ಆರೋಪಿಯನ್ನ ತಲ್ಲಿದ್ದು, ಆಗಂತುಕನು ಅಲ್ಲಿಂದ ಸ್ಕೂಟರ್ ಸಮೇತ ಪರಾರಿಯಾಗಿದ್ದಾನೆ. ಘಟನೆಯಿಂದ ಹೆದರಿದ ಬಾಲಕಿ ಸ್ಥಳೀಯರಲ್ಲಿ ವಿಚಾರ ತಿಳಿಸಿದ್ದಾಳೆ. ರಸ್ತೆಯಲ್ಲಿದ್ದ ಸಿಸಿಟಿವಿ ಫೂಟೇಜಲ್ಲಿ ಆರೋಪಿ ಸ್ಕೂಟರಲ್ಲಿ ತೆರಳುತ್ತಿರುವ ದೃಶ್ಯ ದಾಖಲಾಗಿದೆ. ಉಳ್ಳಾಲ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಸಂದೀಪ್ ಅವರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು ಸಿಸಿಟಿವಿ ಫೂಟೇಜ್ ಆಧಾರದಲ್ಲಿ ಆರೋಪಿಯ ಶೋಧ ಕಾರ್ಯ ನಡೆಸುತ್ತಿದ್ದಾರೆ.


ಅಕ್ರಮ ವಲಸೆ ಕಾರ್ಮಿಕರ ಕಿರಿಕ್ಕು
ಗಡಿ ಪ್ರದೇಶ ತಲಪಾಡಿಯಲ್ಲಿ ಅಕ್ರಮ ಮರಳುಗಾರಿಕೆ ಅಲ್ಲದೆ ಅನೇಕ ಅಕ್ರಮ, ಸಕ್ರಮ ಕೈಗಾರಿಕಾ ಕಾರ್ಖಾನೆಗಳಿದ್ದು ಇಲ್ಲಿ ಕೆಲಸ ಮಾಡುವ ವಲಸೆ ಕಾರ್ಮಿಕರು ಎಲ್ಲೆಂದರಲ್ಲಿ ಬಾಡಿಗೆ ಮನೆಗಳನ್ನ ಪಡೆದು ನೆಲೆಸಿದ್ದಾರೆ. ಈ ಪ್ರದೇಶದಲ್ಲಿ ವಿಧ್ವಂಸಕ ಕೃತ್ಯ ನಡೆಸುತ್ತಿದ್ದಾರೆಂದು ಸ್ಥಳೀಯ ಸಾಮಾಜಿಕ ಕಾರ್ಯಕರ್ತರಾದ ಯಶು ಪಕ್ಕಳ ಆರೋಪಿಸಿದ್ದಾರೆ. ಈ ಹಿಂದೆಯೂ ಕೊಂಡಾಣದ ನಡು ಕುಮೇರಿನಲ್ಲಿ ಅಪ್ರಾಪ್ತ ಬಾಲಕಿಯೋರ್ವಳನ್ನು ಅತ್ಯಾಚಾರಕ್ಕೆ ಯತ್ನಿಸಿದ್ದ ಹೊರ ರಾಜ್ಯದ ವಲಸೆ ಕಾರ್ಮಿಕನನ್ನು ಸ್ಥಳೀಯರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು. ಸ್ಥಳೀಯ ತಲಪಾಡಿ ಪಂಚಾಯತ್ ಸದಸ್ಯರೊಬ್ಬರು ಹೊರ ರಾಜ್ಯದ ವಲಸೆ ಕಾರ್ಮಿಕರಿಗೆ ಮೂರು ಮನೆಗಳನ್ನ ಕಾನೂನು ಬಾಹಿರವಾಗಿ ಬಾಡಿಗೆ ನೀಡಿರುವುದು ಸಮಾಜ ದ್ರೋಹಿ ಕೃತ್ಯಗಳಿಗೆ ಕುಮ್ಮಕ್ಕು ನೀಡಿದಂತಾಗಿದೆ ಎಂದು ಯಶು ಪಕ್ಕಳ ಹೇಳಿದ್ದಾರೆ.
A mischief monger riding a scooter sexually harassed a minor girl student who was on her way to school. The incident happened near Talapady Alankarugudde in Mangalore. The police are now on search for the accused after verifying cctv footage.
23-09-26 11:02 pm
HK News Desk
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
ಸೆ.26ರಿಂದ ಸತತ 5 ದಿನ ಬ್ಯಾಂಕ್ಗಳು ಬಂದ್ ; ATM, U...
23-09-26 09:28 am
ತೀವ್ರ ಆರ್ಥಿಕ ಮುಗ್ಗಟ್ಟಿನಲ್ಲಿ ಡಿಕೆಶಿ ಸರ್ಕಾರ ! ಹ...
22-09-26 08:58 pm
23-09-26 04:21 pm
HK News Staffer
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
24-09-26 06:26 pm
HK News Staffer
ಬಂಗಾಳ ವಾಯುಭಾರ ಕುಸಿತ ; ಕರಾವಳಿ, ಮಲೆನಾಡು, ದಕ್ಷಿಣ...
24-09-26 05:55 pm
ಕುಕ್ಕೆ ಸುಬ್ರಹ್ಮಣ್ಯಕ್ಕೆ ಮಾಜಿ ಕ್ರಿಕೆಟಿಗ ರವಿ ಶಾಸ...
23-09-26 10:47 pm
ಉತ್ತರಾಖಂಡದ ಯಮುನೋತ್ರಿಯಲ್ಲಿ ಕುಂಪಲದ ವ್ಯಕ್ತಿ ಹೃದಯ...
23-09-26 09:55 am
ಚಾರ್ಮಾಡಿ ಘಾಟ್ಗೆ ಅಭಿವೃದ್ಧಿಯ ಹೆಸರಿನಲ್ಲಿ ಕುತ್ತು...
23-09-26 09:30 am
24-09-26 05:10 pm
HK News Staffer
ಸೈಬರ್ ಖದೀಮರ ಹೊಸ ಹೊಸ ತಂತ್ರ: ಒಂದೇ ದಿನ ಮಂಗಳೂರಿನಲ...
24-09-26 11:10 am
bus fire, Greater Noida: ಚಲಿಸುತ್ತಿದ್ದ ಸ್ಲೀಪರ್...
24-09-26 10:09 am
ಶಿರ್ವದಲ್ಲಿ ಭಾರೀ ಪ್ರಮಾಣದ ಗಾಂಜಾ, ಡ್ರಗ್ಸ್ ವಶಕ್ಕೆ...
23-09-26 09:28 pm
ಕರ್ತವ್ಯ ಲೋಪ, ಲಂಚಬಾಕತನ, ಅನುಚಿತ ವರ್ತನೆ ಬಗ್ಗೆ ದೂ...
23-09-26 09:24 pm