ಬ್ರೇಕಿಂಗ್ ನ್ಯೂಸ್
14-09-20 02:07 pm Bangalore Correspondent ಕ್ರೈಂ
ಬೆಂಗಳೂರು, ಸೆಪ್ಟೆಂಬರ್ 14: ನಟಿ ರಾಗಿಣಿಗೆ ಇಂದು ಕೂಡ ಜಾಮೀನು ಭಾಗ್ಯ ಸಿಕ್ಕಿಲ್ಲ. ಡ್ರಗ್ಸ್ ದಂಧೆ ಪ್ರಕರಣದ ಆರೋಪಕ್ಕೆ ಸಂಬಂಧಿಸಿದಂತೆ ಸಿಸಿಬಿ ವಶದಲ್ಲಿರುವ ನಟಿ ರಾಗಿಣಿ ಸೇರಿದಂತೆ 5 ಆರೋಪಿಗಳ ಜಾಮೀನು ಅರ್ಜಿಯ ವಿಚಾರಣೆ ಸೆ.16ಕ್ಕೆ ಮುಂದೂಡಲಾಗಿದೆ.
ಸರ್ಕಾರಿ ವಕೀಲರು ಜಾಮೀನು ಅರ್ಜಿಯ ಆಕ್ಷೇಪಣೆ ಸಲ್ಲಿಕೆಗೆ ಕಾಲಾವಕಾಶ ಕೇಳಿದ ಹಿನ್ನೆಲೆಯಲ್ಲಿ ವಿಶೇಷ ಕೋರ್ಟ್ ಬುಧವಾರಕ್ಕೆ ಜಾಮೀನು ಅರ್ಜಿಯನ್ನು ಮುಂದೂಡಿದೆ.
ರಾಜ್ಯ ಸರ್ಕಾರ ಕಳೆದ ವಾರ ಅಭಿಯೋಜಕರನ್ನು ನೇಮಕ ಮಾಡಿದೆ. ಅವರು ಬಂದು ಆಕ್ಷೇಪಣೆ ಸಲ್ಲಿಸಬೇಕಾಗುತ್ತದೆ. ಈಗಾಗಲೇ ಪ್ರಕರಣ ತನಿಖಾ ಹಂತದಲ್ಲಿದೆ. ತನಿಖಾ ಹಂತದಲ್ಲಿ ಇರುವ ಕಾರಣ ಸಿಸಿಬಿ ಪರ ವಕೀಲರು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ ಕೇಳಿದರು. ಸಿಸಿಬಿ ಪರ ವಕೀಲರ ವಾದವನ್ನು ಪುರಸ್ಕರಿಸಿದ ಕೋರ್ಟ್ ಜಾಮೀನು ಅರ್ಜಿಯನ್ನು ಸೆ.16ಕ್ಕೆ ಮುಂದೂಡಿತು.
ರಾಗಿಣಿ ಸೇರಿದಂತೆ 14 ಆರೋಪಿಗಳ ವಿರುದ್ಧ ನಾರ್ಕೊಟಿಕ್ ಡ್ರಗ್ಸ್ ಆ್ಯಂಡ್ ಸೈಕೊಟ್ರಾಫಿಕ್ ಸಬ್ಸ್ಟೆನ್ಸಸ್ (ಎನ್ಡಿಪಿಎಸ್) ಆ್ಯಕ್ಟ್ ಸೆಕ್ಷನ್ 21, 21ಸಿ, 27ಎ, 27ಬಿ, 29, ಐಪಿಸಿ 120ಬಿ ಅಡಿ ಕೇಸ್ ದಾಖಲಾಗಿದೆ. ಈ ಸೆಕ್ಷನ್ಗಳ ಅಡಿ ಪ್ರಕರಣ ದಾಖಲಾಗಿರುವ ಕಾರಣ ಜಾಮೀನು ಕಷ್ಟ ಎಂಬ ಮಾತು ಕೇಳಿ ಬಂದಿದೆ.
Join our WhatsApp group for latest news updates
25-09-26 04:49 pm
HK News Staffer
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
27-09-26 10:59 am
HK News Desk
ಸರ್ವಕಾಲೇಜು ವಿದ್ಯಾರ್ಥಿ ಸಂಘದ ಪದಗ್ರಹಣ ; ವಿದ್ಯಾರ್...
26-09-26 08:05 pm
ಸೌಜನ್ಯ ಪ್ರಕರಣದ ಮರು ತನಿಖೆ ; ಹಿಂದಿನ ತನಿಖಾ ಲೋಪಗಳ...
26-09-26 03:35 pm
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ವಿಚಾರಣೆ ; ಪ...
26-09-26 11:04 am
ಮೈಸೂರು ದಸರಾಕ್ಕೆ ಕರಾವಳಿಯ ಕಂಬಳದ ಮೆರುಗು ; ಅ.18-1...
25-09-26 07:31 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm