ಬ್ರೇಕಿಂಗ್ ನ್ಯೂಸ್
10-12-21 11:39 pm HK Desk news ಕ್ರೈಂ
ಮಂಗಳೂರು, ಡಿ.10 : ನಗರ ಹೊರವಲಯದ ನೀರುಮಾರ್ಗ ಬಳಿಯ ಪಡು ಎಂಬಲ್ಲಿ ಹಿಂದು ಯುವತಿಯ ಜೊತೆ ಕಾರಿನಲ್ಲಿ ತೆರಳುತ್ತಿದ್ದ ಮುಸ್ಲಿಂ ಯುವಕನನ್ನು ತಂಡವೊಂದು ಅಡ್ಡಗಟ್ಟಿ ಹಲ್ಲೆ ನಡೆಸಿದ ಘಟನೆ ನಡೆದಿದೆ.
ಅಡ್ಯಾರು ಪದವು ನಿವಾಸಿ ಅಬ್ದುಲ್ ರಜಾಕ್ ಯಾನೆ ರಿಯಾಜ್ ಹಲ್ಲೆಗೊಳಗಾಗಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಿಂದು ಯುವತಿ ಜೊತೆಗೆ ಕಾರಿನಲ್ಲಿ ತೆರಳುತ್ತಿದ್ದಾಗ ನೀರುಮಾರ್ಗದ ಬಳಿ ಯುವಕರ ತಂಡ ತಡೆದು ನಿಲ್ಲಿಸಿದೆ.


ಯುವಕ, ಯುವತಿಯನ್ನು ಕಾರಿನಲ್ಲಿ ಮಲ್ಲೂರು ಕಡೆಗೆ ಕರೆದೊಯ್ಯುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಮೊದಲೇ ಮಾಹಿತಿ ಇದ್ದ ಯುವಕರ ತಂಡ, ಪಡು ಅಂಚೆ ಕಚೇರಿ ಬಳಿ ಕಾರನ್ನು ತಡೆದು ಯುವತಿ ಮತ್ತು ಯುವಕನನ್ನು ಪ್ರಶ್ನೆ ಮಾಡಿದ್ದಾರೆ. ಇದೇ ವೇಳೆ ಮಾತಿಗೆ ಮಾತು ಬೆಳೆದಿದ್ದು ಅಬ್ದುಲ್ ರಜಾಕ್ ಮೇಲೆ ಐದಾರು ಮಂದಿಯ ತಂಡ ಹಲ್ಲೆ ನಡೆಸಿದೆ. ಯುವಕನ ತಲೆಗೆ ಬೀಯರ್ ಬಾಟಲಿಯಿಂದ ಹಲ್ಲೆ ನಡೆಸಿದ್ದು ತಲೆಗೆ ಏಟು ಬಿದ್ದು ಗಾಯಗಳಾಗಿವೆ. ಸ್ಥಳೀಯರು ಕೂಡಲೇ ಆತನನ್ನು ಅಂಬುಲೆನ್ಸ್‌ನಲ್ಲಿ ನಗರದ ಖಾಸಗಿ ಆಸ್ಪತ್ರೆಗೆ ಕರೆತಂದಿದ್ದಾರೆ. ಯುವತಿ ಮೇಲೂ ಏಟು ಬಿದ್ದಿದ್ದು ಆಕೆ ಓಡಿ ತಪ್ಪಿಸಿಕೊಂಡಿದ್ದಾಳೆ.


ಮಂಗಳೂರು ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಪೊಲೀಸ್ ಕಮಿಷನರ್ ಶಶಿಕುಮಾರ್ ಕೂಡ ಸ್ಥಳಕ್ಕೆ ತೆರಳಿದ್ದು ಕ್ರಮಕ್ಕೆ ಸೂಚಿಸಿದ್ದಾರೆ. ಗ್ರಾಮಾಂತರ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದೆ. ಹಲ್ಲೆಯಾದ ಯುವಕ ಅಪಾಯದಿಂದ ಪಾರಾಗಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ.
Mangalore Hindu activists assault Muslim youth with beer bottle as Hindu girl was in the car in Adyarpadavu. He has been admitted to the private hospital in city and is said to be out of danger. A case has been registered at the Rural Police Station.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm