ಬ್ರೇಕಿಂಗ್ ನ್ಯೂಸ್
11-12-21 12:16 pm HK Desk news ಕ್ರೈಂ
ಬೆಂಗಳೂರು, ಡಿ.11 : ಪೊಲೀಸರ ಮೇಲೆ ಮಚ್ಚಿನಿಂದ ಹಲ್ಲೆ ಮಾಡಲು ಮುಂದಾದ ಜೆ.ಬಿ.ನಗರ ಠಾಣೆ ವ್ಯಾಪ್ತಿಯ ರೌಡಿಶೀಟರ್ ಚಲ್ಲಘಟ್ಟ ಲೋಹಿತ್ @ ರೋಹಿತ್ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ.
ಎಚ್ಎಸ್ಆರ್ ಲೇಔಟ್ ಮತ್ತು ಬನ್ನೇರುಘಟ್ಟ ಠಾಣೆಯ ರೌಡಿಶೀಟರ್ ಆಗಿರುವ ಲೋಹಿತ್ @ ರೋಹಿತ್ ವಿರುದ್ಧ ರಾಬರಿ, ಅಪಹರಣ, ಕೊಲೆ, ಹಲ್ಲೆ ಸೇರಿದಂತೆ ಹಲವು ಪ್ರಕರಣ ದಾಖಲಾಗಿದೆ. ಕೋಲಾರ ಮಾಜಿ ಶಾಸಕ ವರ್ತೂರು ಪ್ರಕಾಶ್ ಕಿಡ್ನಾಪ್ ಪ್ರಕರಣದ ಪ್ರಮುಖ ಆರೋಪಿಯಾಗಿದ್ದು, ಈ ಹಿಂದೆ ಪ್ರಕರಣದಲ್ಲಿ ಮತ್ತೊಬ್ಬ ಪ್ರಮುಖ ಆರೋಪಿಯಾಗಿದ್ದ ಕವಿರಾಜ್ ನನ್ನ ಪೊಲೀಸರು ಬಂಧಿಸಿದ್ದರು.
ಇಂದಿರಾನಗರ ಠಾಣೆ ಕೊಲೆ, ಅಪಹರಣ ಪ್ರಕರಣದಲ್ಲಿ ಹಾಗೂ ಇತರೆ 17 ಪ್ರಕರಣ ಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಆರೋಪಿ ರೋಹಿತ್ ನನ್ನು ಬಂಧಿಸಲು ತೆರಳಿದ್ದ ಸಂದರ್ಭದಲ್ಲಿ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದ.
ಜೆಬಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಚಲ್ಲಘಟ್ಟದಲ್ಲಿ ಆರೋಪಿ ಇರುವ ಬಗ್ಗೆ ಮಾಹಿತಿ ಪಡೆದು ಇಂದಿರಾನಗರ ಠಾಣೆ ಪೊಲೀಸರು ತೆರಳಿದ್ದರು. ಈ ವೇಳೆ ಹೆಡ್ ಕಾನ್ಸ್ ಸ್ಟೇಬಲ್ ಸೈಯದ್ ಮೊಯೀನುಲ್ಲಾ ಮೇಲೆ ಆರೋಪಿ ಮಚ್ಚಿನಿಂದ ಹಲ್ಲೆಗೆ ಮುಂದಾಗಿದ್ದು, ಪಿಐ ಹರೀಶ್ ಆರೋಪಿಗೆ ಶರಣಾಗುವಂತೆ ಹೇಳಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆರೋಪಿ ಹಲ್ಲೆಗೆ ಮುಂದಾಗಿದ್ದು ಇಂದಿರಾನಗರ ಠಾಣೆ ಪಿಎಸ್‌ಐ ಅಮರೇಶ್ ಜೇಗರಕಲ್ ಅವರು ರೌಡಿ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆದಿದ್ದಾರೆ.
Bangalore Police open fire at main accused of Varthur Prakash kidnap case.
24-10-25 09:35 pm
Bangalore Correspondent
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
ಧರ್ಮಸ್ಥಳ ಪ್ರಕರಣಕ್ಕೆ ಕ್ಲೈಮ್ಯಾಕ್ಸ್ ; ಇದೇ ತಿಂಗಳಾ...
24-10-25 01:11 pm
ಪ್ರಿಯಾಂಕ ಖರ್ಗೆ ಹೊಸ ಸಂಪುಟದಲ್ಲಿ ಉಪ ಮುಖ್ಯಮಂತ್ರಿ...
23-10-25 03:42 pm
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
25-10-25 02:28 pm
HK News Desk
Kurnool Bus Fire, Accident, Latest News: ಹೈದರ...
24-10-25 05:43 pm
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
25-10-25 08:08 pm
Mangalore Correspondent
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
Mangalore Land Fraud, Lawyer, Mohiuddin Bava:...
24-10-25 07:57 pm
Police Commissioner Sudheer Reddy, Mangalore:...
24-10-25 11:57 am
25-10-25 02:14 pm
Mangaluru Correspondent
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm