ಬ್ರೇಕಿಂಗ್ ನ್ಯೂಸ್
11-12-21 05:15 pm HK Desk news ಕ್ರೈಂ
ಹಾಸನ, ಡಿ.11 : ಅನಾರೋಗ್ಯ ಪೀಡಿತ ಮಹಿಳೆಯನ್ನು ಗುಣಪಡಿಸುವ ನೆಪದಲ್ಲಿ ಪೂಜೆ ಮಾಡಿ, ಪೂಜಾರಿ ಬೆತ್ತದ ಏಟು ನೀಡಿದ ಪರಿಣಾಮ ಮಹಿಳೆ ಸಾವನ್ನಪ್ಪಿದ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣದ ಬೆಕ್ಕ ಗ್ರಾಮದಲ್ಲಿ ನಡೆದಿದೆ.
ದೇವರು ಹೆಸರಿನಲ್ಲಿ ವಂಚನೆ ಮಾಡುವುದನ್ನು ನೋಡಿದ್ದೀವಿ, ದೇವರ ಹೆಸರಿನಲ್ಲಿ ಶಿಕ್ಷೆ ನೀಡುವುದನ್ನು ನೋಡಿದ್ದೀವಿ, ಆದರೆ ಇಲ್ಲೊಬ್ಬ ಪೂಜಾರಿ ಪೂಜೆ ವೇಳೆ ನನಗೆ ದೇವರು ಬಂದಿದೆ, ನಾನು ನಿನ್ನನ್ನು ಕಾಯಿಲೆಯಿಂದ ಗುಣಪಡಿಸುತ್ತೇನೆಂದು ಹೇಳಿ ಬೆತ್ತದ ಕೋಲಿನಲ್ಲಿ ತಲೆಗೆ ಬಲವಾಗಿ ಹೊಡೆದು ಮಹಿಳೆಯೇ ಸಾಯುವಂತಾಗಿದೆ.
ಪೂಜಾರಿ ನೀಡಿದ ಬೆತ್ತದ ಏಟಿಗೆ 47 ವರ್ಷದ ಪಾರ್ವತಿ ಮೃತಪಟ್ಟಿದ್ದಾಳೆ. ಕಳೆದ ಕೆಲ ದಿನಗಳಿಂದ ತಲೆ ನೋವಿನಿಂದ ಬಳಲುತ್ತಿದ್ದ ಪಾರ್ವತಿ, ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದರೂ ಗುಣಮುಖವಾಗಿರಲಿಲ್ಲ. ಹೀಗಾಗಿ ಕುಟುಂಬಸ್ಥರು ದೇವರ ಮೊರೆ ಹೋಗಿದ್ದರು.
ನೀವು ಗುಣಮುಖರಾಗಲು ಪೂಜೆ ಮಾಡಿಸಬೇಕು ಎಂದು ಮಹಿಳೆಗೆ ದೇವಸ್ಥಾನದ ಪೂಜಾರಿ ತಿಳಿಸಿದ್ದು ಅದರಂತೆ ಪೂಜೆ ಮಾಡುವುದಾಗಿ ಹೇಳಿ ಮಹಿಳೆ ತಲೆಗೆ ಪೂಜಾರಿ ಬೆತ್ತದಿಂದ ಹೊಡೆದಿದ್ದಾರೆ. ಹಿರಿಯಾಪಟ್ಟಣದ ದೇವಸ್ಥಾನದ ಪೂಜಾರಿಯು ಬೆತ್ತದಿಂದ ತಲೆಗೆ ಹೊಡೆದ ಪರಿಣಾಮ ಮಹಿಳೆ ಅಸ್ವಸ್ಥಗೊಂಡಿದ್ದಾರೆ. ತೀವ್ರ ಅಸ್ವಸ್ಥಗೊಂಡ ಆಕೆ ಚಿಕಿತ್ಸೆ ಫಲಕಾರಿಯಾಗದೇ ಹಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಘಟನೆ ನಂತರ ಪೂಜಾರಿ ಮಧು ನಾಪತ್ತೆಯಾಗಿದ್ದು, ಈ ಸಂಬಂಧ ಶ್ರವಣಬೆಳಗೊಳ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ. ಆರೋಪಿ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
A woman who was beaten up by a priest in the guise of removing evil spirits bothering her health died at Hassan Institute of Medical Sciences in Hassan on Wednesday. Parvathi, 37, of Gowdarahalli in Channarayapatna was allegedly beaten up by Manu, a priest at Bekka village in Channarayapatna taluk, on Tuesday.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm