ರಾಗಿಣಿ ಮತ್ತು ಸಂಜನಾಗೆ 14 ದಿನಗಳ ನ್ಯಾಯಾಂಗ ಬಂಧನ

14-09-20 05:32 pm       Headline Karnataka News Network   ಕ್ರೈಂ

ನಟಿ ರಾಗಿಣಿ ಹಾಗೂ ನಟಿ ಸಂಜನಾ ಅವರನ್ನು ವೀಡಿಯೋ ಕಾನ್ಫೆರೆನ್ಸ್ ಮೂಲಕ ನ್ಯಾಯಾಧೀಶರ ಮುಂದೆ ಸಿಸಿಬಿ ಪೊಲೀಸರು ಹಾಜರು ಪಡಿಸಲಾಯಿತು. ಸಂಜನಾ ಹಾಗೂ ರಾಗಿಣಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಬೆಂಗಳೂರು, ಸೆಪ್ಟಂಬರ್ 14: ಕಳೆದ 12 ದಿನಗಳಿಂದ ಡ್ರಗ್ಸ್ ಪ್ರಕರಣದಲ್ಲಿ ಸಿಸಿಬಿ ಬಂಧನದಲ್ಲಿರುವಂತ ನಟಿ ರಾಗಿಣಿ ಅವರ ಸಿಸಿಬಿ ಕಸ್ಟಡಿ ಇಂದು ಅಂತ್ಯವಾಗಿತ್ತು. ಹೀಗಾಗಿ ನಟಿ ರಾಗಿಣಿ ಹಾಗೂ ನಟಿ ಸಂಜನಾ ಅವರನ್ನು ವೀಡಿಯೋ ಕಾನ್ಫೆರೆನ್ಸ್ ಮೂಲಕ 33ನೇ ಎಸಿಎಂಎಂ ಕೋರ್ಟ್ ನ ನ್ಯಾಯಾಧೀಶರ ಮುಂದೆ ಸಿಸಿಬಿ ಪೊಲೀಸರು ಹಾಜರು ಪಡಿಸಿದರು. ನಟಿ ಸಂಜನಾ ಹಾಗೂ ನಟಿ ರಾಗಿಣಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ತೀರ್ಪು ನೀಡಿ ಆದೇಶಿಸಿದ್ದಾರೆ.

ಸಿಸಿಬಿಯಿಂದ ಕೊನೆಯ ಹಂತದ ವಿಚಾರಣೆಯನ್ನು ನಡೆಸಿದ ಬಳಿಕ ಇಂದು ನಟಿ ರಾಗಿಣಿ ಹಾಗೂ ನಟಿ ಸಂಜನಾ ಅವರನ್ನು ಕೆಸಿ ಜನರಲ್ ಆಸ್ಪತ್ರೆಗೆ ಕರೆದೊಯ್ದು, ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು.

Join our WhatsApp group for latest news updates