ಬ್ರೇಕಿಂಗ್ ನ್ಯೂಸ್
23-12-21 09:55 pm HK Desk news ಕ್ರೈಂ
ಬೆಂಗಳೂರು, ಡಿ.23 : ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣದಲ್ಲಿ ಆರೋಪಿ ಪತ್ನಿ ರಾಜೇಶ್ವರಿ ಶೆಟ್ಟಿಗೆ ಜೀವಾವಧಿ ಶಿಕ್ಷೆ ನೀಡಿದ್ದ ಸೆಷನ್ಸ್ ಕೋರ್ಟ್ ತೀರ್ಪನ್ನು ಹೈಕೋರ್ಟ್ ತಡೆ ಹೇರಿದ್ದು, ಆರೋಪಿಯನ್ನು ಜಾಮೀನಿನಲ್ಲಿ ಬಿಡುಗಡೆ ಮಾಡಲು ಆದೇಶಿಸಿದೆ.
ಈ ಕುರಿತು ಶಿಕ್ಷೆಗೊಳಗಾಗಿದ್ದ ರಾಜೇಶ್ವರಿ ಶೆಟ್ಟಿ ಪರ ವಕೀಲರು ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾ.ಜಿ.ನರೇಂದರ್ ಮತ್ತು ನ್ಯಾ.ಇ.ಸ್.ಇಂದಿರೇಶ್ ಅವರಿದ್ದ ಹೈಕೋರ್ಟ್ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಅರ್ಜಿದಾರರ ಪರ ಹಾಜರಾಗಿದ್ದ ಹಿರಿಯ ವಕೀಲ ಹಷ್ಮತ್ ಪಾಷ, ಇದೊಂದು ಸಾಂದರ್ಭಿಕ ಘಟನೆಯಾಗಿದ್ದು, ಪ್ರಕರಣದಲ್ಲಿ ಹತ್ಯೆಗೀಡಾಗಿರುವ ಭಾಸ್ಕರ ಶೆಟ್ಟಿಯ ಪತ್ನಿಗೆ ಶಿಕ್ಷೆ ನೀಡಲಾಗಿದೆ. ಮೇಲ್ನೋಟಕ್ಕೆ ಇವರ ವಿರುದ್ಧ ಸಾಕ್ಷ್ಯಗಳೇ ಇಲ್ಲ. ಹೋಮಕುಂಡದಲ್ಲಿ ಶವ ಸುಟ್ಟಿರುವುದಕ್ಕೆ ಯಾವುದೇ ಸಾಕ್ಷ್ಯ ಇಲ್ಲ. ಡಿಎನ್ಎಗೆ ಸಂಬಂಧಿಸಿ ವಿಧಿವಿಜ್ಞಾನ ಪ್ರಯೋಗಾಲಯ ನೀಡಿರುವ ವರದಿಯನ್ನು ನಂಬಲು ಸಾಧ್ಯವಿಲ್ಲ. ಇಂತಹ ಅಂಶಗಳನ್ನೆಲ್ಲಾ ವಿಚಾರಣಾ ನ್ಯಾಯಾಲಯ ಪರಿಶೀಲನೆ ಮಾಡದೆ ಶಿಕ್ಷೆ ವಿಧಿಸಿದ್ದು ಸರಿಯಲ್ಲ ಎಂದು ವಾದಿಸಿದ್ದಾರೆ.
ಆದ್ದರಿಂದ ಸೆಷನ್ಸ್ ಕೋರ್ಟ್ ನೀಡಿರುವ ತೀರ್ಪನ್ನು ಅಮಾನತ್ತಿನಲ್ಲಿರಿಸಿ, ಶಿಕ್ಷೆಗೊಳಗಾದ ರಾಜೇಶ್ವರಿ ಶೆಟ್ಟಿಗೆ ಜಾಮೀನು ನೀಡಬೇಕು ಎಂದು ಕೇಳಿಕೊಂಡರು. ವಕೀಲರ ವಾದವನ್ನು ಪುರಸ್ಕರಿಸಿದ ನ್ಯಾಯಾಲಯ, ಷರತ್ತು ಬದ್ಧ ಜಾಮೀನು ನೀಡಿ ಆದೇಶ ಮಾಡಿದೆ.
ಉದ್ಯಮಿ ಭಾಸ್ಕರ ಶೆಟ್ಟಿ ಅವರನ್ನು 2016ರ ಜುಲೈ 28ರಂದು ಉಡುಪಿಯ ಇಂದ್ರಾಳಿಯಲ್ಲಿರುವ ಮನೆಯಿಂದ ನಾಪತ್ತೆಯಾಗಿದ್ದರು. ಎಂಟು ದಿನಗಳ ಬಳಿಕ ಪೊಲೀಸರು ರಾಜೇಶ್ವರಿ ಶೆಟ್ಟಿ ಮತ್ತು ಮಗನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಆನಂತರ ಭಾಸ್ಕರ ಶೆಟ್ಟಿ ಕೊಲೆಯಾಗಿದ್ದು ತಿಳಿದುಬಂದಿತ್ತು. ಪ್ರಕರಣದಲ್ಲಿ ಕೊಲೆ ಮತ್ತು ಕೊಲೆಗೆ ಸಂಚು ರೂಪಿಸಿದ್ದ ಆರೋಪದಲ್ಲಿ ರಾಜೇಶ್ವರಿ ಶೆಟ್ಟಿ ಅವರನ್ನು ತಪ್ಪಿತಸ್ಥರು ಎಂದು ತೀರ್ಮಾನಿಸಿದ್ದ ಉಡುಪಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು. 2021ರ ಜೂನ್ 8ರಂದು ಈ ಶಿಕ್ಷೆ ವಿಧಿಸಲಾಗಿತ್ತು. ಇದನ್ನು ಪ್ರಶ್ನಿಸಿ ಹೈಕೋರ್ಟಿನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲಾಗಿತ್ತು.
Rajeshwari Shetty, the main accused in the murder of entrepreneur Bhaskar Shetty, was granted bail by the high court (HC) on Thursday December 23. It may be recalled, the district and sessions court here pronounced its judgement in the case in June earlier this year. The court held three persons including the wife and son of the deceased as guilty of murder and awarded them life imprisonment. Rajeshwari had knocked the doors of the high court questioning the sentence of the district and sessions court.
28-07-25 11:07 am
HK News Desk
Raichur Building Fall: ರಾಯಚೂರಿನಲ್ಲಿ ಚರಂಡಿ ಬ್ಲ...
27-07-25 01:09 pm
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
28-07-25 11:07 pm
HK News Desk
ಮತಾಂತರ ಇಲ್ಲದೆ ಅಂತರ್ ಧರ್ಮೀಯ ವಿವಾಹ ಕಾನೂನು ಬಾಹಿರ...
28-07-25 12:28 pm
Israel, Arabic Language: ಇಸ್ರೇಲ್ ಸೈನಿಕರಿಗೆ ಇಸ...
26-07-25 03:31 pm
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
28-07-25 10:41 pm
Mangalore Correspondent
Mangalore Remona Pereira, Golden Book of Wor...
28-07-25 09:40 pm
ಪಡ್ರೆ ಧೂಮಾವತಿ ಕ್ಷೇತ್ರಕ್ಕೆ ಅಪಪ್ರಚಾರ ಮಾಡುತ್ತಿರು...
28-07-25 05:39 pm
Dharmasthala Case, SIT Witness at Netravati R...
28-07-25 03:53 pm
ಕಾಸಿಲ್ಲದೇ ಕನ್ಯಾಕುಮಾರಿ ಯಾತ್ರೆ ; ಜನಮನ ಸೆಳೆದ ಮಂಗ...
28-07-25 01:14 pm
28-07-25 11:20 pm
Mangalore Correspondent
Mangalore Roshan Saldanha; Fraud Case, High c...
27-07-25 08:39 pm
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm