ಬ್ರೇಕಿಂಗ್ ನ್ಯೂಸ್
03-01-22 03:50 pm Mangaluru correspondent ಕ್ರೈಂ
ಮಂಗಳೂರು, ಜ.3: ಉಳ್ಳಾಲದ ಮಾಜಿ ಶಾಸಕ ಬಿ.ಎಂ. ಇದಿನಬ್ಬ ಅವರ ಪುತ್ರ, ಬಿ.ಎಂ. ಬಾಷಾ ಮನೆಗೆ ಎನ್ಐಎ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದು ಬಾಷಾ ಅವರ ಸೊಸೆ ದೀಪ್ತಿ ಮರಿಯಂಳನ್ನು ಬಂಧಿಸಿದ್ದಾರೆ.
ದೆಹಲಿ ವಿಭಾಗದ ಎನ್ಐಎ ಅಧಿಕಾರಿಗಳ ತಂಡವು ಇಂದು ಬೆಳಗ್ಗೆ ಬಾಷಾ ಮನೆಗೆ ಆಗಮಿಸಿ, ಬಾಷಾ ಅವರ ಸೊಸೆ ದೀಪ್ತಿ ಅಲಿಯಾಸ್ ಮರಿಯಂ ಳನ್ನು ವಿಚಾರಣೆ ನಡೆಸಿದ್ದರು. ಖಚಿತ ಮಾಹಿತಿಗಳ ಜೊತೆಗೇ ಬಂದಿದ್ದ ಅಧಿಕಾರಿಗಳು ಮೂರು ಗಂಟೆ ವೇಳೆಗೆ ವಶಕ್ಕೆ ಪಡೆದಿದ್ದು ಮಂಗಳೂರಿನಲ್ಲಿ ಕೋರ್ಟಿಗೆ ಹಾಜರು ಪಡಿಸಿ ದೆಹಲಿಗೆ ಕರೆದೊಯ್ಯಲಿದ್ದಾರೆ. ಇದಕ್ಕೂ ಮುನ್ನ ವೆನ್ಲಾಕ್ ಆಸ್ಪತ್ರೆಯಲ್ಲಿ ಆಕೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ.
ಉಳ್ಳಾಲದ ಮಾಸ್ತಿಕಟ್ಟೆಯಲ್ಲಿರುವ ಬಿ.ಎಂ. ಬಾಷಾ ಅವರ ಮನೆಗೆ ಕಳೆದ ಆಗಸ್ಟ್ ತಿಂಗಳ ಮೊದಲ ವಾರದಲ್ಲಿ ಎನ್ಐಎ ಅಧಿಕಾರಿಗಳ ತಂಡ ದಾಳಿ ನಡೆಸಿತ್ತು. ಎರಡು ದಿನಗಳ ಕಾಲ ವಿಚಾರಣೆ ನಡೆಸಿದ ಬಳಿಕ, ಬಾಷಾ ಅವರ ಕಿರಿಯ ಪುತ್ರ ಅಮರ್ ಅಬ್ದುಲ್ ರೆಹಮಾನ್ ಎಂಬಾತನನ್ನು ಅಧಿಕಾರಿಗಳು ಬಂಧಿಸಿದ್ದರು. ಆ ಸಂದರ್ಭದಲ್ಲಿ ಬಾಷಾ ಅವರ ಇನ್ನೊಬ್ಬ ಪುತ್ರ ಅನಾಸ್ ಪತ್ನಿ ದೀಪ್ತಿ ಮರಿಯಂ ಎಂಬವಳ ಬಗೆಗೂ ಸಂಶಯ ಕಂಡುಬಂದಿತ್ತು.
ಮರಿಯಂಳನ್ನು ಎರಡು ದಿನಗಳ ಕಾಲ ವಿಚಾರಣೆ ನಡೆಸಿದ್ದ ಅಧಿಕಾರಿಗಳು ಬೆಚ್ಚಿಬೀಳುವ ಮಾಹಿತಿಯನ್ನು ಆಕೆಯಿಂದ ಹೊರಗೆಡವಿದ್ದರು. ಆದರೆ ಕೊನೆಗೆ ಮರಿಯಂಳನ್ನು ಬಂಧಿಸದೆ ತೆರಳಿದ್ದು ಅನುಮಾನ ಮೂಡಿಸಿತ್ತು. ಆದರೆ ಆನಂತರವೂ ಎನ್ಐಎ ಅಧಿಕಾರಿಗಳಲ್ಲಿ ಕೆಲವರು ಮಂಗಳೂರಿನಲ್ಲಿದ್ದುಕೊಂಡೇ ಆಕೆಯ ಬಗ್ಗೆ ನಿಗಾ ಇಟ್ಟಿದ್ದರು ಎನ್ನಲಾಗಿದೆ. ಇದೀಗ ಮತ್ತೆ ಬಾಷಾ ಮನೆಗೆ ದಾಳಿ ನಡೆಸಿರುವ ಎನ್ಐಎ ತಂಡ ದೀಪ್ತಿ ಮರಿಯಂಳನ್ನು ಬಂಧಿಸಿ ಕರೆದೊಯ್ದಿದ್ದಾರೆ.
ಮೂಲತಃ ಕೊಡಗು ಮೂಲದ ಹಿಂದು ಹುಡುಗಿ ದೀಪ್ತಿ ಮಾರ್ಲ ಹತ್ತು ವರ್ಷಗಳ ಹಿಂದೆ ದೇರಳಕಟ್ಟೆಯಲ್ಲಿ ಬಿಡಿಎಸ್ ಕಲಿಯುತ್ತಿದ್ದಾಗ ಬಿಎಂ ಬಾಷಾ ಪುತ್ರ ಅನಾಸ್ ಪರಿಚಯವಾಗಿ ಮದುವೆಯಾಗಿದ್ದಳು. ಆನಂತರ ಕಟ್ಟರ್ ಮುಸ್ಲಿಂ ಆಗಿ ಪರಿವರ್ತನೆಯಾಗಿದ್ದ ದೀಪ್ತಿ ತನ್ನ ಹೆಸರನ್ನು ಮರಿಯಂ ಎಂದು ಬದಲಿಸಿಕೊಂಡಿದ್ದಳು. ಅಲ್ಲದೆ, ಸಿರಿಯಾ ಮೂಲದ ಉಗ್ರವಾದಿ ಗುಂಪು ಐಸಿಸ್ ಸಂಪರ್ಕ ಪಡೆದಿದ್ದು ಮಂಗಳೂರಿನಲ್ಲಿದ್ದೇ ಜಮ್ಮು ಕಾಶ್ಮೀರದ ಲಿಂಕ್ ಹೊಂದಿದ್ದಳು ಎನ್ನಲಾಗಿತ್ತು. ಐಸಿಸ್ ನೆಟ್ವರ್ಕ್ ಗೆ ಯುವಕರನ್ನು ಸೇರಿಸುವ ಜಾಲದಲ್ಲಿ ಈಕೆಯೂ ಇದ್ದಾಳೆ ಎನ್ನುವ ಶಂಕೆಯಲ್ಲಿ ಎನ್ಐಎ ಅಧಿಕಾರಿಗಳು ಕಳೆದ ಬಾರಿ ತೀವ್ರ ತನಿಖೆ ನಡೆಸಿದ್ದರು.
ದೆಹಲಿ ವಿಭಾಗದ ಎನ್ಐಎ ತಂಡದಲ್ಲಿ ಡಿಎಸ್ಪಿ ಕೃಷ್ಣ ಕುಮಾರ್, ಇನ್ ಸ್ಪೆಕ್ಟರ್ ಅಜಯ್ ಸಿಂಗ್, ಅಧಿಕಾರಿ ಮೋನಿಕಾ ಧಿಕ್ವಾಲ್ ಇತರರಿದ್ದರು.
Mangalore Deepthi Marla arrested for links with ISIS after NIA raids her residence at Ullal. This is the second time NIA Officers are raiding her residence. The grandson of the late Congress MLA B M Idinabba was arrested from Ullal in Mangaluru few months ago. Ammar Abdul Rahman, 35, was picked up in connection with the case of a Kerala module of the Islamic State registered in March this year. Rahman’s niece is believed to have been among the 13 residents of Kasaragod, Kerala, who left the country to join the IS in 2016.
01-04-25 10:45 pm
HK News Desk
Karnataka diesel price hike: ಹಾಲು, ಟೋಲ್, ಕರೆಂ...
01-04-25 09:35 pm
ರಾಜ್ಯ ಸರ್ಕಾರದಿಂದ ಯುಗಾದಿಗೆ ಬೆಲೆ ಏರಿಕೆ ಕೊಡುಗೆ ;...
01-04-25 03:49 pm
Karnataka toll hike, Milk: ರಾಜ್ಯದ ಜನತೆಗೆ ಎಪ್ರ...
01-04-25 12:26 pm
ಕಳೆದ 11 ವರ್ಷಗಳಿಂದ ನೀವೇ ಅಧಿಕಾರದಲ್ಲಿ ಮೊಳೆ ಹೊಡೆ...
31-03-25 07:41 pm
31-03-25 09:34 pm
HK News Desk
Munambam Waqf Row: ಮುನಾಂಬಮ್ ವಕ್ಫ್ ಆಸ್ತಿ ವಿವಾದ...
31-03-25 04:07 pm
BR Ambedkar birth anniversary, Holiday: ಏ.14ರ...
29-03-25 04:40 pm
ಥೈಲ್ಯಾಂಡ್ ಬೆನ್ನಲ್ಲೇ ಅಫ್ಘಾನಿಸ್ತಾನದಲ್ಲೂ ಭಾರೀ ಭ...
29-03-25 01:27 pm
ನಡುಗಿದ ಮ್ಯಾನ್ಮಾರ್, ಥೈಲ್ಯಾಂಡ್ ; ಭೀಕರ ಭೂಕಂಪಕ್ಕೆ...
28-03-25 04:15 pm
01-04-25 09:38 pm
Mangalore Correspondent
Mangalore, MLA Vedavyas Kamath: ಜೈಲಿನ ಅಧಿಕಾರಿ...
01-04-25 09:12 pm
ರಾಜ್ಯದಲ್ಲಿ ಬೆಲೆ ಏರಿಕೆ ಗಗನಕ್ಕೆ ; ರೇಷನ್ ಅಂಗಡಿಗಳ...
01-04-25 07:12 pm
Belthangady Accident, Mangalore: ಯಕ್ಷಗಾನ ಮುಗಿ...
31-03-25 12:26 pm
CCB Police, CM Medal, Mangalore: ಮಂಗಳೂರು ಪೊಲೀ...
30-03-25 11:02 pm
01-04-25 11:07 pm
Mangalore Correspondent
Bangalore Honeytrap, Businessman, Sridevi: ಒಂ...
01-04-25 10:42 pm
Davangere Bank Robbery, Police; ಉದ್ಯಮ ವಿಸ್ತರಣ...
01-04-25 05:32 pm
Mangalore Muda Commissioner, FIR, Noor Zahara...
31-03-25 09:29 pm
Mangalore Derlakatte Robbery attempt; ದೇರಳಕಟ್...
30-03-25 08:59 am