ಬ್ರೇಕಿಂಗ್ ನ್ಯೂಸ್
14-01-22 03:43 pm Mangalore Correspondent ಕ್ರೈಂ
ಮಂಗಳೂರು, ಜ.14 : ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿ ಸುರತ್ಕಲ್ ಮತ್ತು ಮಂಗಳೂರು ಸಿಸಿಬಿ ಪೊಲೀಸರು ಕುಖ್ಯಾತ ರೌಡಿ ಆಕಾಶಭವನ ಶರಣ್ (38) ಮತ್ತು ಆತನ ಸಹಚರರನ್ನು ಬಂಧಿಸಿದ್ದಾರೆ.
ಸುರತ್ಕಲ್ ಠಾಣೆ ವ್ಯಾಪ್ತಿಯ ಚೇಳಾರು ನಂದಿನಿ ಬ್ರಿಡ್ಜ್ ಬಳಿ ಜ.8ರಂದು ರಾತ್ರಿ 11.30ರ ಸುಮಾರಿಗೆ ವ್ಯಕ್ತಿಯೊಬ್ಬರು ಸ್ಕೂಟರಿನಲ್ಲಿ ತೆರಳುತ್ತಿದ್ದಾಗ ಕಾರಿನಲ್ಲಿ ಬಂದಿದ್ದ ತಂಡವೊಂದು ಹಿಂಬಾಲಿಸಿ, ಅಡ್ಡಹಾಕಿದ್ದು ಆತನಲ್ಲಿದ್ದ ಮೊಬೈಲ್ ಫೋನ್, 3 ಸಾವಿರ ನಗದು ಹಾಗೂ ಸ್ಕೂಟರನ್ನು ಸುಲಿಗೆ ಮಾಡಿತ್ತು. ಈ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಘಟನೆ ಸಂಬಂಧಿಸಿ ಇತ್ತೀಚೆಗೆ ಬೆಂಗಳೂರಿನ ಜೈಲಿನಿಂದ ಬಿಡುಗಡೆಯಾಗಿ ಬಂದಿದ್ದ ರೋಹಿದಾಸ್ ಯಾನೆ ಆಕಾಶಭವನ ಶರಣ್ (38) ಮತ್ತು ಆತನಿಗೆ ಸಹಕರಿಸಿದ ಅನಿಲ್ ಕುಮಾರ್ ಸಾಲ್ಯಾನ್ ಯಾನೆ ಅನಿಲ್ ಪಂಪ್ವೆಲ್(40), ಸೈನಾಲ್ ಡಿಸೋಜ ಬಜ್ಪೆ(22), ಪ್ರಸಾದ್ ಫರಂಗಿಪೇಟೆ(39), ಚೇತನ್ ಕೊಟ್ಟಾರಿ ಜೆಪ್ಪಿನಮೊಗರು(35) ಎಂಬವರನ್ನು ಬಂಧಿಸಲಾಗಿದೆ.
ವಿಚಾರಣೆ ವೇಳೆ ಆಕಾಶಭವನ ಶರಣ್, ವಿರೋಧಿ ತಂಡದ ವ್ಯಕ್ತಿಯನ್ನು ಕೊಲೆ ಮಾಡಲು ಸಂಚು ರೂಪಿಸಿರುವುದು ಪತ್ತೆಯಾಗಿರುತ್ತದೆ. ಸುಲಿಗೆ ಪ್ರಕರಣದಲ್ಲಿ ವ್ಯಕ್ತಿಯಿಂದ ಪಡೆದಿದ್ದ ಮೊಬೈಲಿನಲ್ಲಿ ರೌಡಿ ಶರಣ್, ಬೇರೊಬ್ಬನಿಗೆ ಬೆದರಿಕೆ ಹಾಕಿರುವುದು ವಿಚಾರಣೆಯಲ್ಲಿ ತಿಳಿದುಬಂದಿದೆ. ಈ ಬಗ್ಗೆ ಹೆಚ್ಚುವರಿ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ.
ಆಕಾಶಭವನ್ ಶರಣ್ ಮಂಗಳೂರಿನಲ್ಲಿ ಕುಖ್ಯಾತ ರೌಡಿಯಾಗಿದ್ದು, ಮಂಗಳೂರು ಮತ್ತು ಉಡುಪಿ ಸೇರಿ 22 ಪ್ರಕರಣಗಳನ್ನು ಎದುರಿಸುತ್ತಿದ್ದಾನೆ. ಆರು ಕೊಲೆ, ಎರಡು ಅತ್ಯಾಚಾರ, ಎರಡು ಕೊಲೆಯತ್ನ, ಎರಡು ದರೋಡೆ ಯತ್ನ, ನಾಲ್ಕು ಹಲ್ಲೆ, ಒಂದು ದರೋಡೆ ಮತ್ತು ಎನ್ ಡಿಪಿಪಿಎಸ್ ಕಾಯ್ದೆಯಡಿ ಕೇಸು ದಾಖಲಾಗಿದೆ. ಕಾವೂರು ಠಾಣೆಯಲ್ಲಿ ರೌಡಿಶೀಟ್ ಇರುತ್ತದೆ. 2020ರಲ್ಲಿ ಬಂಟ್ವಾಳದಲ್ಲಿ ಫೈನಾನ್ಸರ್ ಸುರೇಂದ್ರ ಬಂಟ್ವಾಳ ಕೊಲೆಗೆ ಬೆಂಗಳೂರಿನ ಜೈಲಿನಲ್ಲಿದ್ದೇ ಸ್ಕೆಚ್ ಹಾಕಿದ್ದು ಸೇರಿ ಹಲವು ಕೊಲೆ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ. ವಿವಿಧ ಪ್ರಕರಣಗಳಲ್ಲಿ ಜೈಲು ಸೇರಿದ್ದ ಶರಣ್ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ. ಕಳೆದ ನವೆಂಬರ್ 12ರಂದು ಜಾಮೀನಿನಲ್ಲಿ ಬಿಡುಗಡೆಯಾಗಿದ್ದ.
ಅನಿಲ್ ಪಂಪ್ವೆಲ್ ಎಂಬಾತ ಸುರೇಂದ್ರ ಬಂಟ್ವಾಳ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ. ಅಲ್ಲದೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಕೊಲೆ ಪ್ರಕರಣ, ಕಂಕನಾಡಿ ನಗರ ಠಾಣೆಯಲ್ಲಿ ಎರಡು ಕೊಲೆಯತ್ನ, ಬರ್ಕೆ ಠಾಣೆ ವ್ಯಾಪ್ತಿಯಲ್ಲಿ ಉದ್ಯಮಿಗೆ ಶೂಟೌಟ್ ಮಾಡಿ ಕೊಲೆಗೆ ಯತ್ನಿಸಿದ ಪ್ರಕರಣ ದಾಖಲಾಗಿದ್ದು, ಕಂಕನಾಡಿ ನಗರ ಠಾಣೆಯಲ್ಲಿ ರೌಡಿಶೀಟ್ ಇರುತ್ತದೆ. ಜೈಲಿನಿಂದ ಹೊರಬಂದಿದ್ದ ತಂಡ ಮಂಗಳೂರಿನಲ್ಲಿ ಮತ್ತೆ ತಮ್ಮ ಪ್ರಭಾವ ಬೆಳೆಸಿಕೊಳ್ಳುವ ಉದ್ದೇಶದಿಂದ ಸಕ್ರಿಯವಾಗಿತ್ತು. ಇವರು ಭೂಗತ ಜಗತ್ತಿನಲ್ಲಿ ಕೆಲವರ ಜೊತೆ ಸಂಪರ್ಕ ಹೊಂದಿದ್ದು, ಅದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಈತನಿಗೆ ಜೈಲಿನಿಂದ ಹೊರಬಂದ ಕೂಡಲೇ ವಾಹನ, ಹಣದ ನೆರವನ್ನು ಯಾರು ನೀಡುತ್ತಿದ್ದಾರೆ ಎನ್ನುವ ಬಗ್ಗೆಯೂ ತನಿಖೆ ನಡೆಸಲಾಗುವುದು ಎಂದು ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ.
Surathkal and crime branch police arrested five persons in a case related to robbery and for plotting murder. The arrested are identified as Rohidas alias Akash Bhavan Sharan (38) from Akashbhavan, Anil Kumar Salian alias Anil Pumpwell (40) from Kankanady, Sainal D’Souza (22) from Bajpe, Prasad (39) from Farangipete and Chethan Kottary (35) from Jeppinamogaru.
18-09-25 05:34 pm
Bangalore Correspondent
Ksrtc Bus, Driver, Heart Attack: ಬಸ್ ಓಡಿಸುವಾಗ...
17-09-25 06:02 pm
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
18-09-25 08:14 pm
HK News Desk
ಎರಡು ಬಾರಿ ಕಚ್ಚಿದ್ರೆ ಬೀದಿ ನಾಯಿಗೆ ಜೀವಾವಧಿ ಶಿಕ್ಷ...
16-09-25 10:11 pm
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
18-09-25 09:12 pm
Mangalore Correspondent
ಮಾಜಿ ಸೈನಿಕರಿಗೆ ಸರ್ಕಾರಿ ಸವಲತ್ತು ನೀಡದೆ ನಿರ್ಲಕ್ಷ...
18-09-25 09:09 pm
Banglegudde, Dharmasthala, SIT: ಬಂಗ್ಲೆಗುಡ್ಡೆ...
18-09-25 07:40 pm
Ajith Kumar Rai, Mangalore: ಬಂಟ- ನಾಡವರು ಒಂದೇ,...
18-09-25 06:11 pm
ಪೊಲೀಸರಿಂದ ಅಧಿಕಾರ ದುರುಪಯೋಗ, ದಬ್ಬಾಳಿಕೆ ; ಬೆನ್ನು...
18-09-25 04:31 pm
18-09-25 11:44 am
HK News Desk
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm