ಬ್ರೇಕಿಂಗ್ ನ್ಯೂಸ್
14-01-22 04:28 pm HK Desk news ಕ್ರೈಂ
ತಿರುವನಂತಪುರ, ಜ.14 : ಸಿಸ್ಟರ್ ಅತ್ಯಾಚಾರ ಪ್ರಕರಣದಲ್ಲಿ ರಾಷ್ಟ್ರದ ಗಮನ ಸೆಳೆದಿದ್ದ ಆರೋಪಿ ಕೆಥೋಲಿಕ್ ಬಿಷಪ್ ಫ್ರಾಂಕೋ ಮುಲ್ಲಕ್ಕಲ್ ಅವರನ್ನು ಕೊಟ್ಟಾಯಂ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಆರೋಪದಿಂದ ಮುಕ್ತಗೊಳಿಸಿ ತೀರ್ಪು ನೀಡಿದೆ.
105 ದಿನಗಳ ವಿಚಾರಣೆ, 39 ಮಂದಿ ಸಾಕ್ಷಿಗಳು, 122 ದಾಖಲೆ ಪತ್ರಗಳನ್ನು ಪರಿಶೀಲನೆ ನಡೆಸಿದ ಬಳಿಕ ನ್ಯಾಯಾಧೀಶ ಗೋಪಕುಮಾರ್, ಸೂಕ್ತ ಸಾಕ್ಷ್ಯಾಧಾರಗಳಿಲ್ಲದೆ ಆರೋಪಿಯನ್ನು ಖುಲಾಸೆಗೊಳಿಸಿದ್ದಾರೆ. ಫ್ರಾಂಕೋ ಮುಲ್ಲಕ್ಕಾಲ್ ಜಲಂಧರ್ ಡಯಾಸಿಸ್ ವಿಭಾಗದ ಬಿಷಪ್ ಆಗಿದ್ದಾಗ 2014-16ರಲ್ಲಿ ಕೇರಳದ 46 ವರ್ಷದ ನನ್ ಒಬ್ಬರನ್ನು ಅತ್ಯಾಚಾರ ನಡೆಸಿದ್ದಾರೆ ಎಂದು ಪ್ರಕರಣ ದಾಖಲಾಗಿತ್ತು.
ಕೇರಳಕ್ಕೆ ಭೇಟಿ ನೀಡುತ್ತಿದ್ದಾಗ ಎರಡು ವರ್ಷದ ಅವಧಿಯಲ್ಲಿ 13 ಬಾರಿ ತನ್ನ ಮೇಲೆ ಅತ್ಯಾಚಾರ ನಡೆಸಿದ್ದರು ಎಂದು ಸಿಸ್ಟರ್ ಆರೋಪಿಸಿದ್ದರು. 2018ರ ಜೂನ್ ನಲ್ಲಿ ಬಿಷಪ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಆನಂತರ ಜಲಂಧರ್ ಬಿಷಪ್ ಹುದ್ದೆಯಿಂದ ತೆರವು ಮಾಡಲಾಗಿತ್ತು. 2018ರ ಸೆಪ್ಟಂಬರ್ 21ರಂದು ಮುಲ್ಲಕ್ಕಾಲ್ ಅವರನ್ನು ಬಂಧಿಸಲಾಗಿತ್ತು. ಒಂದು ತಿಂಗಳ ನಂತರ ಅಕ್ಟೋಬರ್ 18ರಂದು ಫ್ರಾಂಕೋ ಮುಲ್ಲಕ್ಕಾಲ್ ಜಾಮೀನಿನಲ್ಲಿ ಬಿಡುಗಡೆಯಾಗಿದ್ದರು.

ಆನಂತರ ತನಿಖೆ ನಡೆಸಿದ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದು, 83 ಸಾಕ್ಷಿಗಳನ್ನು ಕಲೆಹಾಕಿದ್ದರು. ಸೀರೋ ಮಲಬಾರ್ ಕೆಥೋಲಿಕ್ ಚರ್ಚ್ ಕಾರ್ಡಿನಲ್ ಜಾರ್ಜ್ ಆಲಂಚೇರಿ, ಮೂರು ಬಿಷಪ್, 11 ಪಾದ್ರಿಗಳು, 22 ಸಿಸ್ಟರ್ ಗಳು ಪ್ರಕರಣದಲ್ಲಿ ಸಾಕ್ಷಿಯಾಗಿದ್ದರು. ಈ ಪೈಕಿ 39 ಮಂದಿ ಸಾಕ್ಷ್ಯ ಹೇಳಲು ಕೋರ್ಟಿಗೆ ಹಾಜರಾಗಿದ್ದರು. ಈ ನಡುವೆ, ತನ್ನ ಮೇಲೆ ದಾಖಲಾಗಿರುವ ಎಫ್ಐಆರ್ ರದ್ದುಪಡಿಸುವಂತೆ ಕೇರಳ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿಗೂ ಫ್ರಾಂಕೋ ಮುಲ್ಲಕ್ಕಲ್ ಅರ್ಜಿ ಸಲ್ಲಿಸಿದ್ದರು. ಆದರೆ ಮೇಲಿನ ಕೋರ್ಟ್ ಗಳು ಪ್ರಕರಣ ರದ್ದು ಪಡಿಸಲು ನಿರಾಕರಿಸಿದ್ದವು.
ಕೋರ್ಟಿನಲ್ಲಿ ಖುಲಾಸೆಗೊಳ್ಳುತ್ತಿದ್ದಂತೆ ಪ್ರತಿಕ್ರಿಯೆ ನೀಡಿರುವ ಫ್ರಾಂಕೋ ಮುಲ್ಲಕ್ಕಾಲ್, ದೇವರ ಮೇಲಿನ ಪ್ರಾರ್ಥನೆ ಫಲಿಸಿತು. ದೇವರು ಕೊನೆಗೂ ಸತ್ಯ ತೋರಿಸಿದ್ದಾನೆ ಎಂದು ಹೇಳಿದ್ದಾರೆ. ಆದರೆ, ತನಿಖೆ ನಡೆಸಿದ್ದ ಕೊಟ್ಟಾಯಂ ಎಸ್ಪಿ ಹರಿಸೇಖರನ್ ನ್ಯಾಯಾಧೀಶರ ತೀರ್ಪಿನ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದು, ಮೇಲಿನ ಕೋರ್ಟಿನಲ್ಲಿ ಪ್ರಶ್ನೆ ಮಾಡುವುದಾಗಿ ತಿಳಿಸಿದ್ದಾರೆ.
Thiruvananthapuram, A special court in Kottayam is set to deliver its verdict in the 2018 rape case against former Bishop of Jalandhar Franco Mulakkal, officials familiar with developments said on Thursday. In June 2018, a nun had accused Mulakkal of sexually abusing her several times between 2014 and 2016.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm