ಬ್ರೇಕಿಂಗ್ ನ್ಯೂಸ್
14-01-22 11:14 pm HK Desk news ಕ್ರೈಂ
ಪುತ್ತೂರು, ಜ.14 : ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ನಡೆಸಿ, ಆಕೆಯನ್ನು ಗರ್ಭಪಾತ ಮಾಡಿಸಿದ ಪ್ರಕರಣದಲ್ಲಿ ಆರೋಪಿ ಕಡಬ ಪೊಲೀಸ್ ಪೇದೆಗೆ ನ್ಯಾಯಾಲಯ ಜಾಮೀನು ನೀಡಲು ನಿರಾಕರಿಸಿದೆ.
ಪ್ರಕರಣದಲ್ಲಿ ಆರೋಪಿ ಕಡಬ ಪೊಲೀಸ್ ಪೇದೆ ಶಿವರಾಜ್ ನನ್ನು ಕಳೆದ ಸೆಪ್ಟೆಂಬರ್ 28 ರಂದು ಬಂಧಿಸಲಾಗಿತ್ತು. ಆಬಳಿಕ ಆರೋಪಿ ವಿರುದ್ದ ತನಿಖೆ ನಡೆಸಿ ಚಾರ್ಜ್ ಶೀಟ್ ಹಾಕಲಾಗಿದ್ದು ಈ ವೇಳೆ ಆರೋಪಿ ಜೈಲಿನಲ್ಲಿ 100 ದಿನಗಳನ್ನು ಪೂರೈಸಿದ್ದಾನೆ. ಈ ಹಿನ್ನೆಲೆಯಲ್ಲಿ ಜೈಲಿನಿಂದ ಬಿಡುಗಡೆಗಾಗಿ ಪುತ್ತೂರಿನ ಜಿಲ್ಲಾ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದ. ಆದರೆ ಪ್ರಕರಣ ಗಂಭೀರವಾಗಿದ್ದನ್ನು ಪರಿಗಣಿಸಿ ನ್ಯಾಯಾಧೀಶರು ಜಾಮೀನು ನೀಡಲು ನಿರಾಕರಿಸಿದ್ದಾರೆ.
ಎರಡು ವರ್ಷಗಳ ಹಿಂದೆ ಬಾಲಕಿ ತನ್ನ ಮೇಲೆ ಅತ್ಯಾಚಾರ ನಡೆಸಿರುವ ಬಗ್ಗೆ ದೂರು ನೀಡಲು ಕಡಬ ಠಾಣೆಗೆ ಬಂದಿದ್ದಳು. ಇದರಿಂದ ಪರಿಚಯ ಆಗಿದ್ದ ಬಾಲಕಿಯನ್ನು ಆರೋಪಿ ಶಿವರಾಜ್ ಪುಸಲಾಯಿಸಿ, ಆಕೆಯ ಮನೆಗೆ ತೆರಳಲು ಆರಂಭಿಸಿದ್ದ. ಸಮನ್ಸ್ ನೀಡಲು ಬರುತ್ತಿರುವುದಾಗಿ ಹೇಳಿ ಬಾಲಕಿ ಜೊತೆಗೆ ಸಂಬಂಧ ಬೆಳೆಸಿದ್ದ. ಆನಂತರ ಮದುವೆಯಾಗುತ್ತೇನೆಂದು ಹೇಳಿ ಲೈಂಗಿಕ ಸಂಬಂಧ ಮಾಡಿಕೊಂಡಿದ್ದ. ಆಬಳಿಕ ಬಾಲಕಿ ಗರ್ಭ ಧರಿಸಿದ್ದು ಮನೆಯವರು ಸಂಶಯದಿಂದ ತಪಾಸಣೆ ನಡೆಸಿದಾಗ ಐದೂವರೆ ತಿಂಗಳ ಗರ್ಭಿಣಿ ಎಂದು ತಿಳಿದುಬಂದಿತ್ತು. ಈ ಬಗ್ಗೆ ಬಾಲಕಿಯನ್ನು ಮದುವೆಯಾಗಲು ಮನೆಯವರು ಒತ್ತಾಯಿಸಿದ್ದಾರೆ. ಆದರೆ ಆರೋಪಿ ನಿರಾಕರಿಸಿದ್ದರಿಂದ ಆಕೆಯ ತಂದೆ ಕಡಬ ಠಾಣೆಯಲ್ಲಿ ಅತ್ಯಾಚಾರ ದೂರು ನೀಡಿದ್ದರು.
ಇದೇ ವೇಳೆ, ಆರೋಪಿ ಶಿವರಾಜ್ ಬಾಲಕಿಯ ತಾಯಿಗೆ 35 ಸಾವಿರ ಹಣ ಕೊಟ್ಟು ಮಂಗಳೂರಿಗೆ ಕರೆದೊಯ್ದು ಗರ್ಭಪಾತ ಮಾಡಿಸಿದ್ದಾನೆ. ಈ ವಿಷಯ ಮಾಧ್ಯಮದಲ್ಲಿ ಬರುತ್ತಿದ್ದಂತೆ ಆರೋಪಿ ಶಿವರಾಜ್ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಲಾಗಿತ್ತು. ಆಬಳಿಕ ಶಿವರಾಜ್ ನನ್ನು ಪೊಲೀಸ್ ಸೇವೆಯಿಂದ ವಜಾ ಮಾಡಲಾಗಿತ್ತು.
ಕಡಬ ಠಾಣೆಯಲ್ಲಿ ಆರೋಪಿ ವಿರುದ್ದ ಪ್ರಮುಖ ಸೆಕ್ಷನ್ ಹಾಕಲಾಗಿದ್ದು ಅಪರಾಧವನ್ನು ಎಸ್ಪಿ ಋಷಿಕುಮಾರ್ ಸೋನವಾಣೆ ಗಂಭೀರವಾಗಿ ಪರಿಗಣಿಸಿದ್ದರು. ಒಬ್ಬ ಪೊಲೀಸ್ ಅಧಿಕಾರಿಯಾಗಿ ದೂರುದಾರ ಯುವತಿಯ ಮುಗ್ಧತೆಯನ್ನು ದುರುಪಯೋಗ ಪಡಿಸಿ ಅತ್ಯಾಚಾರ ನಡೆಸಿದ್ದಕ್ಕಾಗಿ 376(2) ಅಡಿ ಮತ್ತು 506 ಎ ಹಾಗೂ ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಿಸಲಾಗಿತ್ತು.
The court has rejected the bail plea of a police constable who was arrested on charges of sexually exploiting a minor rape survivor. The Puttur Fifth District and Sessions Court gave the order on Thursday.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm