ಬ್ರೇಕಿಂಗ್ ನ್ಯೂಸ್
15-01-22 11:41 am HK Desk news ಕ್ರೈಂ
Photo credits : Headline Karnataka
ಹಾಸನ, ಜ.15 : ಬ್ರಿಟಿಷರ ಕಾಲದ ಪುರಾತನ ಬೆಳ್ಳಿ ನಾಣ್ಯಗಳನ್ನು ಸಕಲೇಶಪುರ ಗ್ರಾಮಾಂತರ ಠಾಣೆಯ ಪೋಲಿಸರು ವಶಪಡಿಸಿಕೊಂಡಿದ್ದಾರೆ.
ಸಕಲೇಶಪುರ ತಾಲೂಕಿನ ಹಾಲೇಬೇಲೂರು ಗ್ರಾಮದ ಶ್ಯಾಮ್ ಎಂಬವರ ಕಾಫಿ ತೋಟದಲ್ಲಿ ಕೋಗರವಳ್ಳಿ ಗ್ರಾಮದ ಹರೀಶ್ ಹಾಗೂ ಇತರರು 15 ದಿನಗಳ ಹಿಂದೆ ಕೆಲಸ ಮಾಡುತ್ತಿದ್ದಾಗ ಬ್ರಿಟಿಷರ ಕಾಲದ ನಾಣ್ಯಗಳು ದೊರಕಿದ್ದವು. ಅದನ್ನು ತೋಟದ ಮಾಲೀಕರಿಗೆ ತಿಳಿಸದೆ ಕೆಲಸಗಾರರು ತೆಗೆದುಕೊಂಡು ಹೋಗಿದ್ದರು. ಆನಂತರ ಕೆಲಸಗಾರರಿಗೆ ನಿಧಿ ಸಿಕ್ಕಿದೆ ಎಂಬ ಸುದ್ದಿ ಗ್ರಾಮದಲ್ಲಿ ಹರಡಿದ್ದು ತೋಟದ ಮಾಲೀಕರು ವಿಷಯ ತಿಳಿದು ವಿಚಾರಿಸಿದ್ದರು. ನನಗೆ ಒಂದು ನಾಣ್ಯ ಸಿಕ್ಕಿದೆ ಎಂದು ಹೇಳಿ ಹರೀಶ್, ಮಾಲೀಕರಿಗೆ ಒಂದು ನಾಣ್ಯ ಒಪ್ಪಿಸಿದ್ದ.

ತೋಟದ ಮಾಲಿಕ ಶ್ಯಾಮ್ ಪೋಲಿಸರಿಗೆ ದೂರು ನೀಡಿದ್ದು ಗ್ರಾಮಾಂತರ ಠಾಣೆಯ ಪೊಲೀಸರು ಹರೀಶ್‌ನನ್ನು ಬಂಧಿಸಿ ಬ್ರಿಟಿಷರ ಕಾಲದ 25 ಬೆಳ್ಳಿ ನಾಣ್ಯಗಳನ್ನು ವಶಕ್ಕೆ ಪಡೆದಿದ್ದಾರೆ. ಈ ನಾಣ್ಯಗಳಿಗೆ ಮಾರುಕಟ್ಟೆಯಲ್ಲಿ ಕೋಟ್ಯಾಂತರ ಮೌಲ್ಯದ ಬೆಲೆ ಇದೆ ಎನ್ನಲಾಗಿದೆ. ವಶಕ್ಕೆ ಪಡೆದ ನಾಣ್ಯಗಳನ್ನು ಪುರಾತತ್ವ ಇಲಾಖೆಗೆ ನೀಡಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.
British time silver coins stolen coins recovered by Police in Sakleshpur. A team of workers working in coffee estate had stolen these coins from the owners house which the police have now recovered.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm