ಬ್ರೇಕಿಂಗ್ ನ್ಯೂಸ್
16-01-22 02:21 pm Mangalore Correspondent ಕ್ರೈಂ
ಮಂಗಳೂರು, ಜ.16 : ಎಂಬಿಬಿಎಸ್ ಕಲಿಯುತ್ತಿರುವ ಹಿಂದು ವಿದ್ಯಾರ್ಥಿನಿಗೆ ಮುಸ್ಲಿಂ ಹುಡುಗನ ಜೊತೆ ಸಂಬಂಧ ಇದೆಯೆಂದು ಆಕೆಯ ಫೋಟೋ ಎಡಿಟ್ ಮಾಡಿ, ಜಾಲತಾಣದಲ್ಲಿ ವೈರಲ್ ಮಾಡಿದ ಘಟನೆ ನಡೆದಿದ್ದು ಈ ಬಗ್ಗೆ ಮಂಗಳೂರಿನ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರಿನ ಪ್ರತಿಷ್ಠಿತ ಮೆಡಿಕಲ್ ಕಾಲೇಜಿನಲ್ಲಿ 3ನೇ ವರ್ಷದ ಎಂಬಿಬಿಎಸ್ ಓದುತ್ತಿರುವ ಹಿಂದು ಹುಡುಗಿಯೊಬ್ಬಳ ಫೋಟೋವನ್ನು ಆಕೆಯ ಇನ್ ಸ್ಟಾಗ್ರಾಮ್ ಪೇಜ್ ನಿಂದ ಕದ್ದು ಎಡಿಟ್ ಮಾಡಲಾಗಿತ್ತು. ಈಕೆಗೆ ಮುಲ್ಲಾ ರಹಿಮಾನ್ ಜೊತೆಗೆ ಕುಚಿಕು ಇದೆಯೆಂದು ಬರೆದು ಮುಸ್ಲಿಂ ಹುಡುಗನ ಫೋಟೋ ಜೊತೆಗಿಟ್ಟು ಎಡಿಟ್ ಮಾಡಲಾಗಿತ್ತು. ಈ ಫೋಟೋವನ್ನು ಕೆಲವು ಪೇಜ್ ಗಳಲ್ಲಿ ವೈರಲ್ ಮಾಡಿದ್ದು, ಎಡಿಟೆಡ್ ಫೋಟೋ ವಿದ್ಯಾರ್ಥಿನಿಗೂ ಲಭಿಸಿತ್ತು.
ಇದೇ ವೇಳೆ, ಮುಸ್ಲಿಂ ಹುಡುಗನ ಜೊತೆಗೆ ಹಿಂದು ವಿದ್ಯಾರ್ಥಿನಿಯ ಕುಚಿಕು ಅನ್ನುವ ವಿಚಾರ ಹಿಂದು ಸಂಘಟನೆಗಳ ಕಾರ್ಯಕರ್ತರ ವಿರೋಧಕ್ಕೂ ಕಾರಣವಾಗಿತ್ತು. ಆನಂತರ, ಫೋಟೋಗೂ ಆಕೆಗೂ ಯಾವುದೇ ಸಂಬಂಧ ಇಲ್ಲ ಅನ್ನುವುದು ಕುಟುಂಬಸ್ಥರಿಗೂ ಗೊತ್ತಾಗಿತ್ತು. ಆದರೆ ಎಡಿಟೆಡ್ ಫೋಟೋ ವೈರಲ್ ಆಗುತ್ತಿದ್ದುದರಿಂದ ಪರ – ವಿರೋಧವೂ ಕೇಳಿಬಂದಿತ್ತು. ವಿದ್ಯಾರ್ಥಿನಿ ಕುಟುಂಬಸ್ಥರು ಘಟನೆ ಬಗ್ಗೆ ತನಿಖೆ ನಡೆಸುವಂತೆ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದಾರೆ. ಇದರ ಹಿಂದೆ ಯಾರೋ ದುಷ್ಕರ್ಮಿಗಳಿದ್ದು, ಉದ್ದೇಶ ಪೂರ್ವಕವಾಗಿ ಈ ರೀತಿಯ ಕೃತ್ಯ ಎಸಗಿದ್ದಾರೆ ಎನ್ನಲಾಗುತ್ತಿದೆ.
Mangalore Mbbs student photo Morphed with Muslim Youth on Instagram, girl files case at women police station. Her photo was edited and stated as Mulla Rahimans Kuchiku with Muslim guy.
27-10-25 10:52 pm
Bangalore Correspondent
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
ಡಿಕೆಶಿ ದಿಢೀರ್ ದೆಹಲಿಗೆ ದೌಡು ; ವಿಶೇಷ ಏನೂ ಇಲ್ಲ,...
26-10-25 07:33 pm
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
27-10-25 11:01 pm
Mangalore Correspondent
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
RSS Leader Kalladka Prabhakar Bhat: ಕಲ್ಲಡ್ಕ ಪ...
27-10-25 07:24 pm
ಹೈಕಮಾಂಡ್ ತೀರ್ಮಾನ ಮಾಡಿದ್ರೆ ಐದು ವರ್ಷ ಸಿಎಂ ಆಗಿರು...
27-10-25 05:56 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm