ಬ್ರೇಕಿಂಗ್ ನ್ಯೂಸ್
21-01-22 11:00 pm Mangalore Correspondent ಕ್ರೈಂ
ಮಂಗಳೂರು, ಜ.21 : ನಗರದ ಕುದ್ರೋಳಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಅಸ್ಸಾಂ ಮೂಲದ ಯುವತಿ ಅನುಮಾನಾಸ್ಪದ ಸಾವನ್ನಪ್ಪಿದ್ದು, ಆಕೆಯ ಗಂಡ ಪತ್ನಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಗಿ ಪೊಲೀಸರಿಗೆ ದೂರು ನೀಡಿದ್ದಾನೆ.
ಅಸ್ಸಾಮ್ ಮೂಲದ ಸ್ವಹೀದುಲ್ ಅಸ್ಲಾಮ್ ಲಷ್ಕರ್ (30) ಎಂಬ ಯುವಕ ಮತ್ತು ಆತನ ಪತ್ನಿ ಎನ್ನಲಾದ ಸೂಫಿಯಾ ಬೇಗಂ ಆರು ತಿಂಗಳ ಹಿಂದೆ ಮಂಗಳೂರಿಗೆ ಬಂದಿದ್ದು, ಕುದ್ರೋಳಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಸ್ವಹೀದುಲ್ ಮಂಗಳೂರಿನಲ್ಲಿ ಪೈಂಟಿಂಗ್ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ.
ಶುಕ್ರವಾರ ಮುಂಜಾನೆ ನಾಲ್ಕು ಗಂಟೆಗೆ ಎದ್ದು ಅಡುಗೆ ಕೆಲಸ ಮಾಡಿ ಮಲಗಿದ್ದು, ಬೆಳಗ್ಗೆ 7.45ಕ್ಕೆ ಎದ್ದು ನೋಡಿದಾಗ ಸೂಫಿಯಾ ಬೇಗಂ ತನ್ನ ಮಲಗಿದ ಕೋಣೆಯಲ್ಲಿ ಕಿಟಕಿಯ ಸರಳಿಗೆ ಚೂಡಿದಾರದ ಶಾಲು ಬಿಗಿದು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಬಳಿಕ ಆಕೆಯನ್ನು ಶಾಲಿನಿಂದ ಬಿಡಿಸಿ ನೆಲದಲ್ಲಿ ಮಲಗಿಸಿದ್ದೇನೆ. ನೆರೆಹೊರೆಯವರಿಗೆ ಈ ಬಗ್ಗೆ ತಿಳಿಸಿದ್ದು ಸೂಫಿಯಾ ಮೃತಪಟ್ಟಿದ್ದು ಕಂಡುಬಂದಿರುತ್ತದೆ ಎಂದು ದೂರಿನಲ್ಲಿ ಲಷ್ಕರ್ ಹೇಳಿದ್ದಾನೆ.
ಈ ಬಗ್ಗೆ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಬ್ಬರು ಕೂಡ ಅಸ್ಸಾಂ ಮೂಲದ ನಿವಾಸಿಗಳಾಗಿದ್ದು ಪೊಲೀಸರು ಲಷ್ಕರ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಯುವತಿಯ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದು, ಅವರು ಮಂಗಳೂರಿಗೆ ಬರುತ್ತಿದ್ದಾರೆ ಅನ್ನುವ ಮಾಹಿತಿಯಿದೆ. ಆಕೆಯ ಹೆತ್ತವರ ಮಾಹಿತಿ ಪ್ರಕಾರ, ಯುವತಿಗೆ 17 ವರ್ಷ ಆಗಿದ್ದು, ಹತ್ತನೇ ಕ್ಲಾಸ್ ಓದುತ್ತಿರುವಾಗಲೇ ಆಕೆಯನ್ನು ಪ್ರೀತಿಸಿ ಅಲ್ಲಿಂದ ಮಂಗಳೂರಿಗೆ ಕರೆದುಕೊಂಡು ಬಂದಿದ್ದ. ಈಗ ಯಾವುದೋ ವಿಚಾರದಲ್ಲಿ ಕಲಹ ಏರ್ಪಟ್ಟು ಹುಡುಗಿ ಸಾವಿಗೆ ಶರಣಾಗಿದ್ದಾಳೆಯೇ ಅಥವಾ ಈತನೇ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆಯೇ ಎಂಬ ಶಂಕೆಯಿದ್ದು ಈ ಬಗ್ಗೆ ತನಿಖೆ ನಡೆಯುತ್ತಿದೆ.
A painter has filed a complaint with the Bunder police that his wife committed suicide on Friday, January 21. According to the complaint, the deceased Sufia Begam was living with the painter Shohidul in a rented house in Kudroli for the past five months. Sufia Begam was a homemaker.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm