ಬ್ರೇಕಿಂಗ್ ನ್ಯೂಸ್
22-01-22 03:47 pm HK Desk news ಕ್ರೈಂ
ಪುಣೆ, ಜ.22 : ವಿಧವೆ ಮೇಲೆ ಅತ್ಯಾಚಾರ ಮಾಡಿದ್ದ ಎಂಟು ಮಂದಿ ಆರೋಪಿಗಳ ಪೈಕಿ 5 ಮಂದಿಯನ್ನು ಬಂಧನ ಮಾಡಲಾಗಿದೆ ಪೊಲೀಸರು ತಿಳಿಸಿದ್ದಾರೆ.
ಶಿರೂರಿನಲ್ಲಿ ವಿಧವೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆ ಗ್ರಾಮಾಂತರ ಪೊಲೀಸರು ಐವರನ್ನು ಬಂಧಿಸಿದ್ದು, ಮೂರು ಮಂದಿ ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಬಂಧಿತರು ಮೌಲಿ ಪವಾರ್, ಕಾಲು ವಾಲುಂಜ್, ವಿಠ್ಠಲ್ ಕಾಳೆ, ರಜಾಕ್ ಪಠಾಣ್, ಪಪ್ಪು ಗಾಯಕ್ವಾಡ್, ಆಕಾಶ್ ಗಾಯಕ್ವಾಡ್, ನವನಾಥ್ ವಾಲುಂಜ್ ಮತ್ತು ಸಂದೀಪ್ ವಾಲುಂಜ್ ಎಂದು ಗುರುತಿಸಲಾಗಿದೆ. ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 323, 376 (2), 376 (ಡಿ) ಮತ್ತು 506ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಇನ್ಸ್‌ಪೆಕ್ಟರ್ ಸುರೇಶಕುಮಾರ್ ರಾವುತ್, ಸಂತ್ರಸ್ತೆ ವಿಧವೆಯಾಗಿದ್ದಾಳೆ. ಅವಳ ಪರಿಸ್ಥಿತಿಯ ದುರುಪಯೋಗಪಡಿಸಿಕೊಂಡು ಕೆಲವರು ಮೇ 2021ರಲ್ಲಿ ಆಕೆಯ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ್ದಾರೆ. ಸಂತ್ರಸ್ತೆ ದೂರು ನೀಡಲು ಬಯಸಿದ್ದರು. ಆದರೆ ಆಕೆಗೆ ಈ ಕುರಿತಾಗಿ ಸರಿಯಾದ ತಿಳಿವಳಿಕೆ ಇರಲಿಲ್ಲ. ಯಾರ ಸಹಾಯವೂ ಇಲ್ಲದ ಕಾರಣ ಆಕೆ ಯಾವುದೇ ದೂರು ನೀಡಲು ಮುಂದೆ ಬಂದಿರಲಿಲ್ಲ. ಆರೋಪಿಗಳು ಮಹಿಳೆಯನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ. ಬಲವಂತವಾಗಿ ದೈಹಿಕ ಸಂಪರ್ಕ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.
ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎನ್ನುವ ಮಾಹಿತಿ ನಮಗೆ ಸಿಕ್ಕಿತು. ಸಂತ್ರಸ್ತೆಯನ್ನು ಭೇಟಿ ಮಾಡಲು ನಿರ್ಭಯಾ ಘಟಕದ ತಂಡವನ್ನು ಕಳುಹಿಸಿ ತನಿಖೆ ಮಾಡಿದ್ದೇವೆ. ಇದುವರೆಗೆ ಐದು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ನ್ಯಾಯಾಧೀಶರು ಅವರನ್ನು ಏಳು ದಿನಗಳ ಕಾಲ ಪೊಲೀಸ್‍ಗೆ ವಹಿಸಿದ್ದಾರೆ. ಇನ್ನೂ ಮೂವರು ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದೇವೆ. ಈ ಸಂಬಂಧ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಇನ್ಸ್‌ಪೆಕ್ಟರ್ ಮಾಹಿತಿ ನೀಡಿದ್ದಾರೆ.
In yet another tragic incident, a woman was allegedly raped by eight people in different locations and at different times. Pune Rural police have detained five persons in connection with the alleged rape of the widow in Shirur and are looking for three additional suspects.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm