ಬ್ರೇಕಿಂಗ್ ನ್ಯೂಸ್
25-01-22 09:42 pm HK Desk news ಕ್ರೈಂ
ಹಾಸನ, ಜ 25 : ತರಬೇತಿ ನಿರತ ವೈದ್ಯೆಗೆ ಲಿಫ್ಟ್ನಲ್ಲಿ ಬಲವಂತವಾಗಿ ಮುತ್ತುಕೊಟ್ಟು ಲೈಂಗಿಕ ಕಿರುಕುಳ ಕೊಟ್ಟಿದ್ದಾರೆ ಎಂದು ಹಿಮ್ಸ್ ಆಸ್ಪತ್ರೆಯ ವೈದ್ಯಶಾಸ್ತ್ರ ವಿಭಾಗದ ಸಹ ಪ್ರಾಧ್ಯಪಕ ಡಾ. ಲೋಕೇಶ್ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಸಂತ್ರಸ್ತೆ ಕೊಟ್ಟ ದೂರಿನ ಮೇರೆಗೆ ಡಾ.ಲೋಕೇಶ್ ಅವರನ್ನ ಅಮಾನತು ಮಾಡಲಾಗಿದೆ.
ಜ.12ರಂದು ಲಿಫ್ಟ್ನಲ್ಲಿ ತೆರಳುತ್ತಿದ್ದ ತರಬೇತಿ ನಿರತ ವೈದ್ಯೆಗೆ ಡಾ.ಲೋಕೇಶ್ ಏಕಾಏಕಿ ಮುತ್ತು ಕೊಟ್ಟಿದ್ದಾಗಿ ಸಂತ್ರಸ್ತೆಯು ಹಾಸನ ವೈದ್ಯಕೀಯ ಸಂಸ್ಥೆಗೆ ಜ.14ರಂದು ದೂರು ನೀಡಿದ್ದರು. ಅಪರ ಜಿಲ್ಲಾಧಿಕಾರಿ ನೇತೃತ್ವದಲ್ಲಿ ತನಿಖೆ ನಡೆಸಿ ಮೂರು ವಾರದೊಳಗೆ ವರದಿ ನೀಡುವಂತೆ ಉನ್ನತ ಶಿಕ್ಷಣ ಇಲಾಖೆ ಆದೇಶಿಸಿದೆ. ಈ ಆರೋಪವನ್ನು ತಳ್ಳಿ ಹಾಕಿರುವ ವೈದ್ಯ ಡಾ.ಲೋಕೇಶ್, ತನಿಖೆ ನಡೆಯುತ್ತಿದೆ. ನಾನು ನಿರಪರಾಧಿ ಅಂತ ಸಾಬೀತಾಗುತ್ತೆ. ನಾನು ಬೈದೆ ಅಂತ ಎಚ್ಒಡಿ ಜತೆ ಸೇರಿ ಇಲ್ಲಸಲ್ಲದ ಕತೆ ಕಟ್ಟಿದಾರೆ ಎಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು.
ಈ ಪ್ರಕರಣದ ತನಿಖಾಧಿಕಾರಿಯೂ ಆದ ಅಪರ ಜಿಲ್ಲಾಧಿಕಾರಿ ಕವಿತಾರಾಜಾರಾಂ ಮಾತನಾಡಿ, ಪಿಜಿ ವೈದ್ಯೆಗೆ ಲೈಂಗಿಕ ಕಿರುಕುಳ ಕೊಟ್ಟಿದ್ದಾರೆ ಎಂದು ಡಾ.ಲೋಕೇಶ್ ಎಂಬುವವರ ವಿರುದ್ಧ ದೂರು ಬಂದಿದೆ. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಕಾರ್ಯದರ್ಶಿ ಅವರು ಲೋಕೇಶ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಆಂತರಿಕ ದೂರು ಮಹಿಳಾ ಸಮಿತಿಯಲ್ಲೂ ತನಿಖೆ ನಡೆಯುತ್ತೆ. ಅಪರ ಜಿಲ್ಲಾಧಿಕಾರಿ ನೇತೃತ್ವದಲ್ಲಿ ತನಿಖೆಗೆ ಆದೇಶ ಮಾಡಿದ್ದಾರೆ. ಮೂರು ವಾರದೊಳಗೆ ತನಿಖೆ ನಡೆಸಿ ವರದಿ ನೀಡಲು ಸೂಚಿಸಿದ್ದಾರೆ. ತನಿಖೆ ನಡೆಸಿ ವರದಿ ಸಲ್ಲಿಸುತ್ತೇವೆ ಎಂದರು.
Associate Professor attached to the Hassan Institute of Medical Sciences (HIMS) was on Tuesday suspended after a junior doctor accused him of sexual harassment in Karnataka’s Hassan district. The victim junior doctor has been under training after completion of the MBBS course. She has alleged in her complaint to HIMS that while going in a lift, the accused senior doctor had suddenly kissed her. Following the complaint, the accused doctor working in the Medicine department has been suspended.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm