ಬ್ರೇಕಿಂಗ್ ನ್ಯೂಸ್
07-02-22 11:02 pm Mangalore Correspondent ಕ್ರೈಂ
ಮಂಗಳೂರು, ಫೆ.7 : ಮನೆ ಬಳಿಯಲ್ಲೇ ತಗಡು ಶೀಟಿನ ಕೊಠಡಿ ನಿರ್ಮಿಸಿಕೊಂಡು ಗೃಹ ಬಳಕೆಯ ಎಲ್ ಪಿಜಿ ಗ್ಯಾಸ್ ಪಡೆದು ಅದನ್ನು ವಾಣಿಜ್ಯ ಬಳಕೆಯ ಸಿಲಿಂಡರ್ ಗಳಿಗೆ ತುಂಬಿಸಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ಮಂಗಳೂರು ಪೊಲೀಸರು ಪತ್ತೆ ಮಾಡಿದ್ದಾರೆ.
ಮಂಗಳೂರು ತಾಲೂಕಿನ ಪೆರ್ಮನ್ನೂರು ಗ್ರಾಮದ ಚೆಂಬುಗುಡ್ಡೆ ಎಂಬಲ್ಲಿನ ನಿವಾಸಿ ಫ್ರಾನ್ಸಿಸ್ ಎಂಬವರು ಮನೆಗೆ ತಾಗಿಕೊಂಡು ತಗಡು ಶೀಟಿನ ಕೊಠಡಿ ನಿರ್ಮಿಸಿಕೊಂಡು ಅದರಲ್ಲಿ ಅಡುಗೆ ಅನಿಲದ ಸಿಲಿಂಡರ್ ಗಳನ್ನು ತುಂಬಿಸಿಡಲಾಗಿತ್ತು. ಕಮರ್ಶಿಯಲ್ ಬಳಕೆಯ ವಿವಿಧ ಗಾತ್ರದ ಸಿಲಿಂಡರ್ ಗಳಿಗೆ ತಾನೇ ರೆಗ್ಯುಲೇಟರ್ ಬಳಸಿ ಗೃಹ ಬಳಕೆಯ ಸಿಲಿಂಡರ್ ಗಳಿಂದ ಗ್ಯಾಸ್ ತುಂಬಿಸುತ್ತಿದ್ದುದನ್ನು ಪತ್ತೆ ಮಾಡಲಾಗಿದೆ.

ಈ ಬಗ್ಗೆ ಖಚಿತ ಮಾಹಿತಿಯಂತೆ ಮಂಗಳೂರು ಉತ್ತರ ಉಪ ವಿಭಾಗದ ಎಸಿಪಿ ನೇತೃತ್ವದಲ್ಲಿ ಉಳ್ಳಾಲ ಪೊಲೀಸ್ ಇನ್ಸ್ ಪೆಕ್ಟರ್ ರಂಜಿತ್ ಮತ್ತವರ ತಂಡ ಹಾಗೂ ಉಳ್ಳಾಲ ವಲಯದ ಆಹಾರ ನಿರೀಕ್ಷಕರಾದ ಹ್ಯಾರಿಸ್, ಪ್ರಭಾರ ಆಹಾರ ನಿರೀಕ್ಷಕಿ ರೇಖಾ ಮತ್ತು ಸಿಬಂದಿ ಫೆ.5ರಂದು ಸ್ಥಳಕ್ಕೆ ದಾಳಿ ನಡೆಸಿದ್ದರು. ಈ ವೇಳೆ, ಆರೋಪಿ ಫ್ರಾನ್ಸಿಸ್ ಸದ್ರಿ ಕೋಣೆಯಲ್ಲಿ ಖಾಲಿ ಗ್ಯಾಸ್ ಸಿಲಿಂಡರನ್ನು ನೆಲದಲ್ಲಿಟ್ಟು ಅದರ ಮೇಲ್ಗಡೆ ತುಂಬಿದ ಗ್ಯಾಸ್ ಸಿಲಿಂಡರನ್ನು ಕವುಚಿ ಹಾಕಿ ಗ್ಯಾಸ್ ತುಂಬಿಸುತ್ತಿದ್ದ. ಪೊಲೀಸರು ದಾಳಿ ನಡೆಸಿದ್ದನ್ನು ನೋಡಿ ಸ್ಥಳದಿಂದ ಪರಾರಿಯಾಗಿದ್ದಾನೆ.

ಸ್ಥಳದಲ್ಲಿ ಎಚ್ ಪಿ, ಇಂಡೇನ್, ಭಾರತ್, ಪ್ಯೂರ್, ಟೋಟಲ್ ಕಂಪನಿಯ ದೊಡ್ಡ ಮತ್ತು ಸಣ್ಣ ಗಾತ್ರದ ವಿವಿಧ ಮಾದರಿಯ ಗ್ಯಾಸ್ ಸಿಲಿಂಡರ್ ಪತ್ತೆಯಾಗಿದೆ. ಗ್ಯಾಸ್ ತುಂಬಿದ ಸಿಲಿಂಡರ್ -15, ತುಂಬಿದ ಆಕ್ಸಿಜನ್ ದೊಡ್ಡ ಸಿಲಿಂಡರ್ – 1, ಖಾಲಿ ಗ್ಯಾಸ್ ಸಿಲಿಂಡರ್ – 112 ಹೀಗೆ ಒಟ್ಟು 128 ಸಿಲಿಂಡರ್ ಪತ್ತೆಯಾಗಿದೆ. ಇದರ ಒಟ್ಟು ಮೌಲ್ಯ 1.92 ಲಕ್ಷ ರೂಪಾಯಿ ಆಗಿದೆ. ಸ್ಥಳದಲ್ಲಿ ದೊರೆತ ವಿವಿಧ ಪರಿಕರಗಳನ್ನು ವಶಕ್ಕೆ ಪಡೆದಿದ್ದು, ಆಹಾರ ನಿರೀಕ್ಷಕರು ನೀಡಿದ ದೂರಿನಂತೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Ullal police raided the house of one Francis at Chembugudde of Permannur in the taluk on definite information that the accused is transferring liquefied petroleum gas (LPG) from domestic gas cylinders to commercial ones though artificial regulators without any safety. The accused absconded from the spot.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
ಗಣೇಶ ಹಬ್ಬದ ಮುಗಿಸಿ ಬೆಂಗಳೂರಿಗೆ ತೆರಳುತ್ತಿದ್ದ ವೇಳ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm