ಬ್ರೇಕಿಂಗ್ ನ್ಯೂಸ್
09-02-22 12:59 pm Mangalore Correspondent ಕ್ರೈಂ
ಮಂಗಳೂರು, ಫೆ.9 : ಕಾನೂನು ವಿದ್ಯಾರ್ಥಿನಿ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಂಧಿತನಾಗಿದ್ದ ವಕೀಲ ಕೆ.ಎಸ್.ಎನ್ ರಾಜೇಶ್ ಒಂದೂವರೆ ತಿಂಗಳ ಜೈಲು ವಾಸದ ಬಳಿಕ ಷರತ್ತು ಬದ್ಧ ಜಾಮೀನಿನಲ್ಲಿ ಬಿಡುಗಡೆಯಾಗಿದ್ದಾನೆ.
ಎರಡು ತಿಂಗಳ ಕಾಲ ತಲೆಮರೆಸಿಕೊಂಡಿದ್ದ ರಾಜೇಶ್, ಡಿ.20ರಂದು ಮಂಗಳೂರಿನ ಜೆಎಂಎಫ್ ಕೋರ್ಟಿಗೆ ಶರಣಾಗಿದ್ದ. ಆನಂತರ ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಈ ನಡುವೆ, ಹಿರಿಯ ವಕೀಲ ಎಸ್.ಪಿ.ಚೆಂಗಪ್ಪ ಮತ್ತು ಆನಂತರ ವಿಕ್ರಮ್ ಹೆಗ್ಡೆ ಆರೋಪಿ ಪರವಾಗಿ ಜಾಮೀನು ಅರ್ಜಿ ಸಲ್ಲಿಸಿದ್ದರು. ಜೆಎಂಎಫ್ ಕೋರ್ಟ್, ಆಬಳಿಕ ಜಿಲ್ಲಾ ನ್ಯಾಯಾಲಯದಲ್ಲಿಯೂ ಜಾಮೀನು ಅರ್ಜಿ ತಿರಸ್ಕೃತವಾಗಿದ್ದರಿಂದ ಹೈಕೋರ್ಟಿನಲ್ಲಿ ಪ್ರಶ್ನೆ ಮಾಡಲಾಗಿತ್ತು.
ಹೈಕೋರ್ಟ್ ಸೋಮವಾರ ಆರೋಪಿ ವಕೀಲನಿಗೆ ಷರತ್ತಿನ ಜಾಮೀನು ನೀಡಿದೆ. ಮಂಗಳೂರು ಬಿಟ್ಟು ಹೊರಗೆ ತೆರಳುವಂತಿಲ್ಲ. ಹೊರಗಡೆ ತೆರಳಬೇಕಿದ್ದರೆ, ಪೊಲೀಸ್ ಠಾಣೆಯಲ್ಲಿ ಮಾಹಿತಿ ನೀಡಬೇಕು. ಸಾಕ್ಷ್ಯ ನಾಶ, ಸಂತ್ರಸ್ತರಿಗೆ ಬೆದರಿಕೆ ಇತ್ಯಾದಿ ಮಾಡುವಂತಿಲ್ಲ ಎಂಬ ಅಂಶಗಳನ್ನು ಸೂಚಿಸಿ ಜಾಮೀನು ನೀಡಲಾಗಿದೆ. ವೃತ್ತಿಯಲ್ಲಿ ಪ್ರಸಿದ್ಧ ವಕೀಲನಾಗಿ ಒಂದೂವರೆ ತಿಂಗಳ ಕಾಲ ಜೈಲು ವಾಸ ಅನುಭವಿಸಿದ್ದು ಮಂಗಳೂರಿನ ಮಟ್ಟಿಗೆ ಇದೇ ಮೊದಲು.
ವಕೀಲ ಕೆಎಸ್ಎನ್ ರಾಜೇಶ್, ತನ್ನ ಕರಂಗಲ್ಪಾಡಿಯ ಕಚೇರಿಯಲ್ಲಿ ಇಂಟರ್ನ್ ಶಿಪ್ ಮಾಡುತ್ತಿದ್ದ ಮುಂಬೈ ಮೂಲದ ಕಾನೂನು ವಿದ್ಯಾರ್ಥಿನಿ ಜೊತೆ ಅಸಭ್ಯವಾಗಿ ನಡೆದುಕೊಂಡಿದ್ದರು. ಈ ಬಗ್ಗೆ ಅಕ್ಟೋಬರ್ 18ರಂದು ಮಂಗಳೂರಿನ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರತ್ಯೇಕ ಎರಡು ಎಫ್ಐಆರ್ ದಾಖಲಾಗಿದ್ದಲ್ಲದೆ, ಈ ನಡುವೆ ಉರ್ವಾ ಠಾಣೆ ಪೊಲೀಸರ ಮೂಲಕ ಸಂತ್ರಸ್ತ ಯುವತಿಗೆ ದೂರು ನೀಡದಂತೆ ಒತ್ತಡ ಹಾಕಿದ್ದೂ ನಡೆದಿತ್ತು. ಈ ವಿಚಾರದಲ್ಲಿ ಉರ್ವಾ ಠಾಣೆಯ ಇಬ್ಬರು ಪೊಲೀಸರು ಕರ್ತವ್ಯದಿಂದ ಅಮಾನತುಗೊಂಡಿದ್ದರು. ಇದರಿಂದಾಗಿ ವಕೀಲನ ಲೈಂಗಿಕ ಕಿರುಕುಳ ಪ್ರಕರಣ ರಾಜ್ಯದಲ್ಲಿ ಭಾರೀ ಸುದ್ದಿಗೆ ಗ್ರಾಸವಾಗಿತ್ತು.
ಆನಂತರ ಜೈಲು ವಾಸದಿಂದ ತಪ್ಪಿಸಿಕೊಳ್ಳುವ ಸಲುವಾಗಿ ಎರಡು ತಿಂಗಳ ಕಾಲ ತಲೆಮರೆಸಿಕೊಂಡಿದ್ದ ರಾಜೇಶ್, ನಿರೀಕ್ಷಣಾ ಜಾಮೀನು ಪಡೆಯಲು ಭಾರೀ ಕಸರತ್ತು ನಡೆಸಿದ್ದರು. ಹೈಕೋರ್ಟಿನಲ್ಲಿ ಜಾಮೀನು ಸಿಗದೆ, ಆನಂತರ ಸುಪ್ರೀಂ ಕೋರ್ಟಿನಲ್ಲಿಯೂ ಜಾಮೀನು ಅರ್ಜಿ ಸಲ್ಲಿಕೆಯಾಗಿತ್ತು. ಈ ನಡುವೆ, ಆರೋಪಿಗೆ ಹಣಕಾಸು ನೀಡಿ ಸಹಕಾರ ನೀಡಿದ್ದಾರೆಂದು ಆತನ ಇಬ್ಬರು ಸಂಬಂಧಿಗಳನ್ನು ಪೊಲೀಸರು ಬಂಧಿಸಿದ್ದರು.
Advocate K S N Rajesh, who was in judicial custody relating to the allegation of sexually harassing a law intern, succeeded in getting interim bail from the high court on Monday February 7. It was said that Rajesh had sexually harassed a law student of Maharashtra origin at his office. The aggrieved intern had filed a case. The women's police station personnel here had registered case against him on October 18. Rajesh had become untraceable thereafter.
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 06:49 pm
HK News Desk
India Pak War: ಭಾರತ ವಾಯುಪಡೆಯಿಂದ ಭೀಕರ ಪ್ರತಿದಾಳ...
09-05-25 12:33 pm
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
09-05-25 06:22 pm
Giridhar Shetty, Mangaluru
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
Ullal accident, Mangalore: ರಸ್ತೆ ದಾಟುತ್ತಿದ್ದ...
08-05-25 10:54 pm
Satish Kumapla, Mangalore, U T Khader: ಮೂಡಾ ಅ...
08-05-25 09:06 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm