ಬ್ರೇಕಿಂಗ್ ನ್ಯೂಸ್
18-09-20 12:53 pm Udupi Correspondent ಕ್ರೈಂ
ಗಂಗೊಳ್ಳಿ, ಸೆಪ್ಟಂಬರ್ 18: ಗಂಗೊಳ್ಳಿಯ ಮಹಾಮ್ಮಾಯಿ ಮಹಾಸತಿ ದೇವಸ್ಥಾನದಲ್ಲಿ ಗುರುವಾರ ಮಧ್ಯಾಹ್ನ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಆತ್ಮಹತ್ಯೆ ಯತ್ನಿಸಿದ್ದ ಯುವಕ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ.
ಗಂಗೊಳ್ಳಿ ದಾಕುಹಿತ್ಲು ನಿವಾಸಿ ರಾಘವೇಂದ್ರ ಖಾರ್ವಿ (35) ಮೃತರು. ಈ ಸಂದರ್ಭ ರಕ್ಷಿಸಲು ಹೋಗಿ ಗಾಯಗೊಂಡಿದ್ದ ಲಕ್ಷ್ಮಣ ಖಾರ್ವಿ ಹಾಗೂ ಜನಾರ್ದನ ಖಾರ್ವಿ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ದೇವಸ್ಥಾನದಲ್ಲಿ ಮಹಾಲಯ ಅಮಾವಾಸೆ ಪ್ರಯುಕ್ತ ವಿಶೇಷ ಪೂಜೆ ನಡೆಯುತಿತ್ತು. ಈ ವೇಳೆ ಏಕಾಏಕಿ ಪೆಟ್ರೋಲ್ ಕ್ಯಾನ್ ಹಿಡಿದು ದೇವಸ್ಥಾನದೊಳಗೆ ಬಂದಿದ್ದ ರಾಘವೇಂದ್ರ ಖಾರ್ವಿ ಮೈಮೇಲೆ ಪೆಟ್ರೋಲ್ ಸುರಿದುಕೊಂಡಿದ್ದ. ಆಗ ದೇವಳದಲ್ಲಿ ಉರಿಸಿಟ್ಟ ಕಾಲುದೀಪದ ಬೆಂಕಿ ಇವರಿಗೆ ತಗಲಿತು ಎನ್ನಲಾಗಿದೆ. ಕೂಡಲೇ ಅಲ್ಲೇ ಇದ್ದ ಕೆಲವರು ಬೆಂಕಿ ನಂದಿಸಲು ಯತ್ನಿಸಿದ್ದಾರೆ.
ಪಾತ್ರಿಯಾಗಲು ಅವಕಾಶ ನೀಡದ್ದಕ್ಕೆ ಆತ್ಮಹತ್ಯೆ ?
ದೇವರು ಮೈಮೇಲೆ ಬರುತ್ತಿದ್ದರೂ ಸಮುದಾಯದ ದೇವಸ್ಥಾನದಲ್ಲಿ ಪಾತ್ರಿಯಾಗಲು ಅವಕಾಶ ನೀಡುತ್ತಿಲ್ಲ ಎಂದು ಆರೋಪಿಸಿ ರಾಘವೇಂದ್ರ ಖಾರ್ವಿ, ಮಾನಸಿಕ ಸ್ಥಿಮಿತ ಕಳೆದುಕೊಂಡು ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ರಾಘವೇಂದ್ರ ವೆಲ್ಡಿಂಗ್ ಕೆಲಸ ಮಾಡುತ್ತಿದ್ದರು. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
25-09-26 04:49 pm
HK News Staffer
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
27-09-26 10:59 am
HK News Desk
ಸರ್ವಕಾಲೇಜು ವಿದ್ಯಾರ್ಥಿ ಸಂಘದ ಪದಗ್ರಹಣ ; ವಿದ್ಯಾರ್...
26-09-26 08:05 pm
ಸೌಜನ್ಯ ಪ್ರಕರಣದ ಮರು ತನಿಖೆ ; ಹಿಂದಿನ ತನಿಖಾ ಲೋಪಗಳ...
26-09-26 03:35 pm
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ವಿಚಾರಣೆ ; ಪ...
26-09-26 11:04 am
ಮೈಸೂರು ದಸರಾಕ್ಕೆ ಕರಾವಳಿಯ ಕಂಬಳದ ಮೆರುಗು ; ಅ.18-1...
25-09-26 07:31 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm