ಬ್ರೇಕಿಂಗ್ ನ್ಯೂಸ್
10-02-22 05:56 pm Mangalore Correspondent ಕ್ರೈಂ
ಮಂಗಳೂರು, ಫೆ.10 : ಮಂಗಳೂರಿನ ರೌಡಿಸಂನಲ್ಲಿ ಕುಖ್ಯಾತಿ ಪಡೆದಿರುವ ಪಿಂಕಿ ನವಾಜ್ ಮತ್ತು ಆಕಾಶಭವನ್ ಶರಣ್ ಮೇಲೆ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಗೂಂಡಾ ಕಾಯ್ದೆ ಪ್ರಯೋಗ ಮಾಡಿದ್ದು ಇಬ್ಬರನ್ನೂ ಬಂಧಿಸಲು ಆದೇಶ ಮಾಡಿದ್ದಾರೆ.
ಆಕಾಶಭವನ್ ಶರಣ್ ಈಗಾಗ್ಲೇ ದರೋಡೆ ಪ್ರಕರಣ ಒಂದರಲ್ಲಿ ತಿಂಗಳ ಹಿಂದೆ ಬಂಧಿತನಾಗಿ ಸದ್ಯ ಮೈಸೂರು ಜೈಲಿನಲ್ಲಿದ್ದು ಆತನನ್ನು ಬಿಜಾಪುರ ಜೈಲಿನಲ್ಲಿ ಬಂಧಿಸಿಡಲು ಆದೇಶ ಮಾಡಿದ್ದಾರೆ. ಸುರತ್ಕಲ್ ಠಾಣೆಯಲ್ಲಿ ರೌಡಿಶೀಟರ್ ಆಗಿರುವ ಪಿಂಕಿ ನವಾಜ್ 15ಕ್ಕೂ ಹೆಚ್ಚು ಪ್ರಕರಣಗಳನ್ನು ಎದುರಿಸುತ್ತಿದ್ದು, ಎರಡು ದಿನಗಳ ಹಿಂದೆಯಷ್ಟೇ ಮೈಸೂರು ಜೈಲಿನಿಂದ ಬಿಡುಗಡೆಯಾಗಿ ಬಂದಿದ್ದ. ಆತನನ್ನು ಬುಧವಾರ ಕಾಟಿಪಳ್ಳದ ಮನೆಯಿಂದಲೇ ಮತ್ತೆ ಪೊಲೀಸರು ಬಂಧಿಸಿದ್ದಾರೆ.
ಕಾವೂರು ಠಾಣೆ ವ್ಯಾಪ್ತಿಯ ಆಕಾಶಭವನದ ನಿವಾಸಿಯಾಗಿರುವ ರೋಹಿದಾಸ್ ಅಲಿಯಾಸ್ ಆಕಾಶಭವನ್ ಶರಣ್ (37) ವಿರುದ್ಧ ಕೊಲೆ, ಕೊಲೆಯತ್ನ, ಕೊಲೆಸಂಚು, ಅತ್ಯಾಚಾರ, ಸುಲಿಗೆ, ಅಟ್ರಾಸಿಟಿ ಕೇಸ್ ಸೇರಿದಂತೆ 19 ಪ್ರಕರಣಗಳಿವೆ. ಮಂಗಳೂರು ನಗರ ವ್ಯಾಪ್ತಿಯಲ್ಲಿ 15 ಕೇಸು ಇದ್ದು, ಉಡುಪಿ ಜಿಲ್ಲೆಯಲ್ಲಿ ಎರಡು ಮತ್ತು ದಕ್ಷಿಣ ಕನ್ನಡ ಗ್ರಾಮಾಂತರ ವ್ಯಾಪ್ತಿಯಲ್ಲಿ ಎರಡು ಕೇಸ್ ಇದೆ. 19 ಪ್ರಕರಣಗಳ ಪೈಕಿ ಆರು ಪ್ರಕರಣ ಹೊರತುಪಡಿಸಿ ಉಳಿದೆಲ್ಲದರಲ್ಲೂ ಆರೋಪಿ ಶರಣ್ ಖುಲಾಸೆಗೊಂಡಿದ್ದಾನೆ. ಎರಡು ಪ್ರಕರಣ ತನಿಖಾ ಹಂತದಲ್ಲಿದ್ದರೆ, ನಾಲ್ಕು ಕೇಸ್ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದೆ.
2017ರಲ್ಲಿ ಬಿಜೆಪಿ ಕಾರ್ಯಕರ್ತ ದೀಪಕ್ ರಾವ್ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಪಿಂಕಿ ನವಾಜ್(27) ವಿರುದ್ಧ ಮಂಗಳೂರು ನಗರದ ವಿವಿಧ ಠಾಣೆಗಳಲ್ಲಿ 15 ಪ್ರಕರಣ ದಾಖಲಾಗಿದೆ. ಈ ಪೈಕಿ ಮೂರು ಪ್ರಕರಣಗಳಲ್ಲಿ ಆರೋಪಿ ಖುಲಾಸೆಗೊಂಡಿದ್ದರೆ, ಉಳಿದೆಲ್ಲ ಪ್ರಕರಣಗಳು ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿದೆ. ಇತ್ತೀಚೆಗೆ ಸುರತ್ಕಲ್ ಠಾಣೆ ವ್ಯಾಪ್ತಿಯ ಕಾಟಿಪಳ್ಳದಲ್ಲಿ ದೀಪಕ್ ರಾವ್ ಸ್ಮರಣಾರ್ಥ ಬಸ್ ನಿಲ್ದಾಣ ಉದ್ಘಾಟನೆ ನಡೆದಿತ್ತು. ಇದಕ್ಕೆ ಪ್ರತಿಯಾಗಿ ಯಾರನ್ನಾದರೂ ಕೊಲೆ ನಡೆಸಬೇಕೆಂದು ಸಂಚು ನಡೆಸಿದ್ದ ಪ್ರಕರಣದಲ್ಲಿ ಪಿಂಕಿ ನವಾಜ್ ಸೇರಿ ನಾಲ್ವರನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದರು. ಸದ್ರಿ ಪ್ರಕರಣದಲ್ಲಿ ಜಾಮೀನಿನಲ್ಲಿ ಬಿಡುಗಡೆಯಾಗಿ ಹೊರಬಂದ ಕೂಡಲೇ ಗೂಂಡಾ ಕಾಯ್ದೆ ವಿಧಿಸಲಾಗಿದೆ. ಈತನನ್ನು ಮಂಗಳೂರಿನ ಜಿಲ್ಲಾ ಕಾರಾಗೃಹದಲ್ಲಿ ಬಂಧಿಸಿಡಲು ಕಮಿಷನರ್ ಆದೇಶ ಮಾಡಿದ್ದಾರೆ.
The Police Commissioner N Shashi Kumar IPS, using the power to invoke the Goonda act, arrested notorious criminal rowdy sheeter Pinki Nawaz and issued a detention order against Akashbhavan Sharan on February 10.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm