ಬ್ರೇಕಿಂಗ್ ನ್ಯೂಸ್
19-09-20 01:27 pm Mangalore Reporter ಕ್ರೈಂ
ಮಂಗಳೂರು, ಸೆಪ್ಟಂಬರ್ 19: ಸ್ಯಾಂಡಲ್ವುಡ್ ಡ್ರಗ್ ಲಿಂಕ್ ಹಿನ್ನೆಲೆಯಲ್ಲಿ ಮಂಗಳೂರು ಮೂಲದ ಡ್ಯಾನ್ಸರ್ ಕಂ ಕೊರಿಯೋಗ್ರಾಫರ್ ಕಿಶೋರ್ ಶೆಟ್ಟಿಯನ್ನು ಪೊಲೀಸರು ಬಂಧಿಸಿರುವುದು ಖಚಿತವಾಗಿದೆ. ಈತನ ಜೊತೆಗೆ ಸುರತ್ಕಲ್ ಕಾಟಿಪಳ್ಳ ನಿವಾಸಿ ಅಕೀಲ್ ನೌಶೀಲ್ (28) ಎಂಬಾತನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಈ ಬಗ್ಗೆ ಮಂಗಳೂರು ಪೊಲೀಸ್ ಕಮಿಷನರ್ ಮಾಧ್ಯಮಕ್ಕೆ ಮಾಹಿತಿ ನೀಡಿದ್ದು, ಇವರಿಬ್ಬರು ಆಪ್ತರಾಗಿದ್ದು ಎಂಡಿಎಂಎ ಮತ್ತಿತರ ಸಿಂಥೆಟಿಕ್ ಡ್ರಗ್ ಅನ್ನು ವಿವಿಧೆಡೆ ಪೂರೈಕೆ ಮಾಡುತ್ತಿದ್ದರು. ಇವರ ಬಳಿಯಿಂದ ಒಂದು ಲಕ್ಷ ರೂಪಾಯಿ ಮೌಲ್ಯದ ಎಂಡಿಎಂಎ ಡ್ರಗ್ಸನ್ನು ವಶಕ್ಕೆ ಪಡೆಯಲಾಗಿದೆ. ಆತ ಮಂಗಳೂರು, ಬೆಂಗಳೂರಿನಲ್ಲಿ ಪಾರ್ಟಿ ಮಾಡಿರುವ ಬಗ್ಗೆ ಮಾಹಿತಿಗಳಿವೆ. ಅದರ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಇವರಿಗೆ ಮುಂಬೈನಿಂದ ಡ್ರಗ್ ಪೂರೈಕೆ ಆಗ್ತಾ ಇತ್ತೆಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಮುಂಬೈನಿಂದ ತರಿಸಿಕೊಂಡು ಮಂಗಳೂರಿನಲ್ಲಿ ಯುವಜನರು, ವಿದ್ಯಾರ್ಥಿಗಳಿಗೆ ಪೂರೈಕೆ ಮಾಡುತ್ತಿದ್ದರು. ಇವರ ಜಾಲದಲ್ಲಿ ಇನ್ನಷ್ಟು ಮಂದಿಯಿದ್ದು, ತನಿಖೆ ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ.
ಆರೋಪಿ ಕಿಶೋರ್ ಅಲಿಯಾಸ್ ಅಮನ್ ಶೆಟ್ಟಿ 2011-12ರಲ್ಲಿ ಝೀಟಿವಿಯಲ್ಲಿ ಪ್ರಸಾರಗೊಂಡಿದ್ದ ಡ್ಯಾನ್ಸ್ ಇಂಡಿಯಾ ಡ್ಯಾನ್ಸ್ ಸೀಸನ್ ಎರಡರ ಸ್ಪರ್ಧೆಯಲ್ಲಿ ಬಹುಮಾನ ಪಡೆದಿದ್ದ. ಅಲ್ಲದೆ, ಎಬಿಸಿಡಿ ಎನ್ನುವ ಹಿಂದಿ ಸಿನೆಮಾದಲ್ಲಿ ಅಭಿನಯಿಸಿದ್ದ. ಆಬಳಿಕ ಡ್ಯಾನ್ಸರ್, ಕೊರಿಯೊಗ್ರಾಫರ್ ಆಗಿ ಹೆಸರು ಮಾಡಿದ್ದ. ಬಾಲಿವುಡ್ ಮತ್ತು ಕನ್ನಡ ಚಿತ್ರರಂಗದ ನಂಟು ಹೊಂದಿದ್ದರಿಂದ ಆ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ. ನೌಶೀಲ್ ಈ ಹಿಂದೆ ವಿದೇಶದಲ್ಲಿ ಕೆಲಸ ಮಾಡಿಕೊಂಡಿದ್ದು, ವರ್ಷದ ಹಿಂದೆ ಊರಿಗೆ ಬಂದಿದ್ದ. ಬಳಿಕ ಕೆಲಸ ಇಲ್ಲದೆ ಮುಂಬೈ ನಂಟು ಬೆಳೆಸಿಕೊಂಡು ಮಾದಕ ದ್ರವ್ಯಗಳನ್ನು ತಂದು ಮಾರಾಟ ಮಾಡುತ್ತಿದ್ದ ಎಂದು ಕಮಿಷನರ್ ವಿಕಾಸ್ ಕುಮಾರ್ ಮಾಹಿತಿ ನೀಡಿದ್ದಾರೆ.
25-09-26 04:49 pm
HK News Staffer
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
27-09-26 10:59 am
HK News Desk
ಸರ್ವಕಾಲೇಜು ವಿದ್ಯಾರ್ಥಿ ಸಂಘದ ಪದಗ್ರಹಣ ; ವಿದ್ಯಾರ್...
26-09-26 08:05 pm
ಸೌಜನ್ಯ ಪ್ರಕರಣದ ಮರು ತನಿಖೆ ; ಹಿಂದಿನ ತನಿಖಾ ಲೋಪಗಳ...
26-09-26 03:35 pm
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ವಿಚಾರಣೆ ; ಪ...
26-09-26 11:04 am
ಮೈಸೂರು ದಸರಾಕ್ಕೆ ಕರಾವಳಿಯ ಕಂಬಳದ ಮೆರುಗು ; ಅ.18-1...
25-09-26 07:31 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm