ಬ್ರೇಕಿಂಗ್ ನ್ಯೂಸ್
23-02-22 11:00 am Mangalore Correspondent ಕ್ರೈಂ
ಉಳ್ಳಾಲ, ಫೆ.23 : ತಲಪಾಡಿಯ ಸಾಮಾಜಿಕ ಕಾರ್ಯಕರ್ತ ಯಶು ಪಕ್ಕಳ ಎಂಬವರ ಮೇಲೆ ತಲಪಾಡಿ ಗ್ರಾಮ ಪಂಚಾಯತ್ ಸದಸ್ಯ ಶೈಲೇಶ್ ಮತ್ತು ತಂಡ ಮಾರಣಾಂತಿಕ ಹಲ್ಲೆ ನಡೆಸಿದ್ದು ಕೇಸು ಕೊಟ್ಟರೆ ಬಿಜೆಪಿ ಪವರ್ ಬಳಸಿ ತಾನೂ ಅಡ್ಮಿಟ್ ಆಗುತ್ತೇನೆಂದು ಹಲ್ಲೆಕೋರ ವ್ಯಕ್ತಿ ಧಮ್ಕಿ ಹಾಕಿದ ಘಟನೆ ನಡೆದಿದೆ.
ಮಂಗಳವಾರ ಸಂಜೆ ತಲಪಾಡಿ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದ ಮುಂಭಾಗದ ಪ್ರದೇಶದಲ್ಲಿ ಯಶು ಪಕ್ಕಳ ಮೇಲೆ ಬಿಜೆಪಿ ಬೆಂಬಲಿತ ಗ್ರಾ.ಪಂ. ಸದಸ್ಯ ಶೈಲೇಶ್ ಮತ್ತು ಗ್ಯಾಂಗ್ ಆಕ್ರಮಣ ನಡೆಸಿದ್ದು ಸೋಂಟೆಯಿಂದ ತಲೆಗೆ ಹಲ್ಲೆ ನಡೆಸಿದೆ. ದುರ್ಗಾಪರಮೇಶ್ವರಿ ಕ್ಷೇತ್ರದ ಮುಂಭಾಗದಲ್ಲಿ ಪಂಚಾಯತ್ ಅನುದಾನದಲ್ಲಿ ನಡೆಯುತ್ತಿದ್ದ ಮೋರಿ ಕಾಮಗಾರಿಯನ್ನ ನೋಡಲು ತೆರಳಿದ್ದ ಯಶು ಪಕ್ಕಳ ಅವರಿಗೆ ಹಲ್ಲೆ ನಡೆದಿದ್ದು ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಾಯಾಳು ಯಶು ಅವರು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗ್ರಾ.ಪಂ ಸದಸ್ಯ ಶೈಲೇಶ್ ಮತ್ತು ಇತರ ನಾಲ್ಕೈದು ಮಂದಿ ಸೇರಿ ತನ್ನ ಜಮೀನಿಗೆ ಅಕ್ರಮ ಪ್ರವೇಶಿಸಿ ನನ್ನನ್ನು ಹಿಡಿದಿಟ್ಟು ಸೋಂಟೆಯಿಂದ ಹಲ್ಲೆ ನಡೆಸಿರುವುದಾಗಿ ಯಶು ಆರೋಪಿಸಿದ್ದಾರೆ. ಅಲ್ಲದೆ, ಈ ಬಗ್ಗೆ ಕೇಸು ಕೊಟ್ಟರೆ ಬಿಜೆಪಿಯ ಪವರ್ ಬಳಸಿ ನಿನಗಿಂತ ಮೊದಲು ತಾನು ಆಸ್ಪತ್ರೆಗೆ ದಾಖಲಾಗುವುದಾಗಿ ಶೈಲೇಶ್ ಹೇಳಿದ್ದಾಗಿ ಯಶು ಪಕ್ಕಳ ಆರೋಪಿಸಿದ್ದಾರೆ. ಹಲ್ಲೆ ಘಟನೆಯು ದೇವಸ್ಥಾನಕ್ಕೆ ಅಳವಡಿಸಿರುವ ಸಿಸಿ ಕ್ಯಾಮೆರಾದಲ್ಲಿ ದಾಖಲಾಗಿರುವುದಾಗಿ ಯಶು ತಿಳಿಸಿದ್ದು ಉಳ್ಳಾಲ ಪೊಲೀಸರು ಇದನ್ನ ಪರಿಶೀಲಿಸಬೇಕಿದೆ.

ಆಸ್ಪತ್ರೆಗೆ ಎಸಿಪಿ ದಿನಕರ ಶೆಟ್ಟಿ ಭೇಟಿ ನೀಡಿ ವರದಿ ಪಡೆದಿದ್ದಾರೆ. ಯಶು ಪಕ್ಕಳ ಅವರು ತಲಪಾಡಿ ಗಡಿಯಲ್ಲಿ ನಿರಂತರವಾಗಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆ, ಸ್ಥಳೀಯ ಗ್ರಾಮ ಪಂಚಾಯತ್ ಮತ್ತು ಪುರಾಣ ಪ್ರಸಿದ್ಧ ದುರ್ಗಾಪರಮೇಶ್ವರಿ ಕ್ಷೇತ್ರದಲ್ಲಿ ನಡೆಯುತ್ತಿರುವ ಅವ್ಯವಹಾರಗಳ ಬಗ್ಗೆ ನಿರಂತರ ಧ್ವನಿ ಎತ್ತುತ್ತಿರುವುದು ಕೆಲವರ ಕಣ್ಣು ಕೆಂಪು ಮಾಡಿತ್ತು. ಗ್ರಾಮ ಸದಸ್ಯ ಶೈಲೇಶ್ ಕೂಡ ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಯಶು ಪಕ್ಕಳ ವಿರುದ್ಧ ದೂರು ದಾಖಲಿಸಿದ್ದಾರೆ.
In an incident reported from near Talapady Devinagara, a social activist, Yashu Pakala, came under savagely attack. Talapady gram panchayat member Shylesh, and eight others reportedly formed a gang and attacked Yashu Pakala. Pakala is now being treated in a private hospital in Natekal.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
ಗಣೇಶ ಹಬ್ಬದ ಮುಗಿಸಿ ಬೆಂಗಳೂರಿಗೆ ತೆರಳುತ್ತಿದ್ದ ವೇಳ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm