ಬ್ರೇಕಿಂಗ್ ನ್ಯೂಸ್
26-02-22 09:49 pm HK Desk news ಕ್ರೈಂ
ಬೆಳ್ತಂಗಡಿ, ಫೆ.26 : ಧರ್ಮಸ್ಥಳ ಸಮೀಪದ ಕನ್ಯಾಡಿ ಎಂಬಲ್ಲಿ ದಲಿತ ವ್ಯಕ್ತಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಬಿಜೆಪಿ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.
ದಿನೇಶ್ ನಾಯ್ಕ ಎಂಬ ಕಾಂಗ್ರೆಸ್ ಕಾರ್ಯಕರ್ತನನ್ನು ಸ್ಥಳೀಯ ಬಿಜೆಪಿ ಕಾರ್ಯಕರ್ತ ಕಿಟ್ಟ ಅಲಿಯಾಸ್ ಕೃಷ್ಣ ಎಂಬಾತ ಫೆ.23ರಂದು ಬೆಳಗ್ಗೆ ದೊಣ್ಣೆಯಿಂದ ಹೊಡೆದು ಹಲ್ಲೆಗೈದಿದ್ದ. ಗಾಯಗೊಂಡಿದ್ದ ದಿನೇಶ್ ನಾಯ್ಕ ಎರಡು ದಿನಗಳ ಬಳಿಕ ಮಂಗಳೂರಿನ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದ.
ಘಟನೆ ಸಂಬಂಧಿಸಿ ದಿನೇಶ್ ನಾಯ್ಕನ ತಾಯಿ ಪದ್ಮಾವತಿ ಧರ್ಮಸ್ಥಳ ಠಾಣೆಯಲ್ಲಿ ದೂರು ನೀಡಿದ್ದು, ಕೊಲೆ ಪ್ರಕರಣ ದಾಖಲಾಗಿತ್ತು. ಆಸ್ಪತ್ರೆಯಲ್ಲಿ ದಿನೇಶ್ ಸಾವನ್ನಪ್ಪಿರುವುದು ತಿಳಿಯುತ್ತಿದ್ದಂತೆ ಕೃಷ್ಣ ನಾಪತ್ತೆಯಾಗಿದ್ದ. ಪೊಲೀಸರು ಆರೋಪಿಯನ್ನು ಬಂಧಿಸಿರುವುದಾಗಿ ಎಸ್ಪಿ ಋಷಿಕುಮಾರ್ ಸೋನವಾಣೆ ತಿಳಿಸಿದ್ದಾರೆ.
ಕ್ಷುಲ್ಲಕ ವಿಚಾರದಲ್ಲಿ ದಿನೇಶ್ ನಾಯ್ಕನ ಮೇಲೆ ಹಲ್ಲೆಗೈದು ಕೊಲೆ ಮಾಡಿದ್ದಾನೆಂದು ದಿನೇಶನ ತಾಯಿ ಆರೋಪಿಸಿದ್ದು, ಪ್ರಕರಣ ಬೆಳ್ತಂಗಡಿಯಲ್ಲಿ ರಾಜಕೀಯ ತಿಕ್ಕಾಟಕ್ಕೆ ಕಾರಣವಾಗಿದೆ. ದಿನೇಶ್ ನಾಯ್ಕ ಕಾಂಗ್ರೆಸ್ ಪರವಾಗಿ ಕೆಲಸ ಮಾಡುತ್ತಿದ್ದುದರಿಂದ ಮಾಜಿ ಶಾಸಕ ವಸಂತ ಬಂಗೇರ ಆತನ ಕುಟುಂಬದ ಪರವಾಗಿ ಬ್ಯಾಟಿಂಗ್ ಮಾಡಿದ್ದಾರೆ.
Congress dalit man murdered by BJP member, arrested by Dharmasthala police. The arrested has been identified as Krishna.
10-01-25 02:44 pm
Bangalore Correspondent
Car Accident, Chamarajanagar: ಶಬರಿಮಲೆ ಯಾತ್ರಿಕ...
10-01-25 02:06 pm
Ramnagara Accident, KSRTC: KSRTC ಬಸ್ - ಬೈಕ್ ನ...
09-01-25 07:04 pm
S T Somashekar, Yatnal, DK Shivakumar temple:...
09-01-25 04:54 pm
Hassan, Lokayukta Arrest: ಹಾಸನಾಂಬ ಜಾತ್ರಾ ಮಹೋತ...
09-01-25 04:21 pm
09-01-25 12:11 pm
HK News Desk
ತಿರುಪತಿಯಲ್ಲಿ ಕಾಲ್ತುಳಿತಕ್ಕೆ ಏಳು ಸಾವು ; ವೈಕುಂಠ...
09-01-25 11:22 am
StalinCM, Lipi: ಸಿಂಧೂ ನಾಗರಿಕತೆಯ ಲಿಪಿಗಳನ್ನು ಅರ...
08-01-25 11:07 pm
Crime News, Nagpur Couple: ಮಧ್ಯರಾತ್ರಿವರೆಗೆ 26...
08-01-25 10:53 pm
ಹೊಸವರ್ಷದ ಆರಂಭದಲ್ಲೇ ಟಿಬೆಟ್ ಮಂದಿಗೆ ಭಾರಿ ಆಘಾತ ;...
07-01-25 06:32 pm
09-01-25 07:50 pm
Mangalore Correspondent
ಜನವರಿ 11-12 ; 'ಮಂಗಳೂರು ಲಿಟ್ ಫೆಸ್ಟ್' ಏಳನೇ ಆವೃತ...
08-01-25 09:51 pm
Surathkal Beach, Drowning, Mangalore; ಸುರತ್ಕಲ...
08-01-25 06:13 pm
Naxal, Vikram Gowda, Surrender: ಶರಣಾಗುವವರಿಗೆ...
08-01-25 11:53 am
MCC Bank Anil Lobo, Bail Reject, Mangalore; ಎ...
07-01-25 11:13 pm
10-01-25 10:11 am
Mangalore Correspondent
Share Market Scam, Mangalore: ಷೇರು ಮಾರುಕಟ್ಟೆ...
09-01-25 10:43 pm
Drugs, Mangalore Crime: ಗೋವಾದಿಂದ ಮಂಗಳೂರಿಗೆ ಹೈ...
09-01-25 10:32 pm
Old Coin Scam, Mangalore Fraud: ಎಲ್ಲ ಆಯ್ತು.....
09-01-25 01:26 pm
Vamanjoor Misfire, Mangalore Crime, Police; ಪ...
09-01-25 11:27 am