ಬ್ರೇಕಿಂಗ್ ನ್ಯೂಸ್
28-02-22 09:59 pm Bengaluru Correspondent ಕ್ರೈಂ
ಬೆಂಗಳೂರು, ಫೆ 28: ಇಲ್ಲೊಬ್ಬ ಭೂಪ, ವಿಚ್ಛೇದನಕ್ಕಾಗಿ ಪತ್ನಿಯ ನಗ್ನ ಫೋಟೋ ಇಟ್ಟುಕೊಂಡು ಆಕೆಗೆ ಕೊಟ್ಟ ಕಾಟ ಅಷ್ಟಿಷ್ಟಲ್ಲ. ಮನನೊಂದ ಪತ್ನಿ, ಗಂಡನ ವಿರುದ್ಧ ಕ್ರಮ ಕೈಗೊಳ್ಳುವಂತೆ ಪತ್ನಿ ಬಸವನಗುಡಿ ಮಹಿಳಾ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ.
ಲಕ್ಕಸಂದ್ರದ ನಿವಾಸಿ 26 ವರ್ಷದ ಮಹಿಳೆ ಕೊಟ್ಟ ದೂರಿನ ಆಧಾರದ ಮೇರೆಗೆ ಬಸವನಗುಡಿ ಮಹಿಳಾ ಠಾಣೆ ಪೊಲೀಸರು ಉದ್ಯಮಿ ಹನುಮಂತನಗರದ ನಿವಾಸಿ ಪ್ರಗತ್ ಪುರುಷೋತ್ತಮ್ (32) ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. 2015ರಲ್ಲಿ ಮಹಿಳೆ ಜತೆ ಪ್ರಗತ್ ವಿವಾಹವಾಗಿದ್ದ.
ವಿವಾಹವಾಗುವ ವೇಳೆ ಅರ್ಧ ಕೆ.ಜಿ. ಚಿನ್ನಾಭರಣ, 15 ಕೆ.ಜಿ. ಬೆಳ್ಳಿ ಸೇರಿ ಲಕ್ಷಾಂತರ ರೂ. ಮೌಲ್ಯದ ವಸ್ತುಗಳನ್ನು ವರದಕ್ಷಿಣೆಯಾಗಿ ಪಡೆದಿದ್ದ. ಆರಂಭದಲ್ಲಿ ದಂಪತಿ ಅನ್ಯೋನ್ಯವಾಗಿದ್ದರು. ಬಳಿಕ ವರದಣೆ ತರುವಂತೆ ಆರೋಪಿ ಪ್ರಗತ್ ಪೀಡಿಸುತ್ತಿದ್ದ. ಈ ವಿಚಾರ ಮಹಿಳೆಯ ಪಾಲಕರಿಗೆ ತಿಳಿದು, ಅವರು ಮತ್ತೆ 40 ಲಕ್ಷ ರೂ. ವರದಕ್ಷಿಣೆ ಕೊಟ್ಟಿದ್ದರು. ಇಷ್ಟಕ್ಕೆ ಸುಮ್ಮನಾಗದ ಪ್ರಗತ್, ಮದ್ಯಪಾನ ಮಾಡಿಕೊಂಡು ಬಂದು ಬಲವಂತವಾಗಿ ಪತ್ನಿಯ ನಗ್ನ ಫೋಟೊಗಳನ್ನು ಆಗಾಗ ಮೊಬೈಲ್ನಲ್ಲಿ ಸೆರೆಹಿಡಿಯುತ್ತಿದ್ದ. ಈ ವಿಚಾರವನ್ನು ಬೇರೆ ಯಾರಿಗಾದರೂ ತಿಳಿಸಿದರೆ, ಜೀವಸಹಿತ ಬಿಡುವುದಿಲ್ಲ ಎಂದು ಪ್ರಾಣ ಬೆದರಿಕೆ ಹಾಕಿದ್ದ.
'ತವರುಮನೆಯಿಂದ ನಿನ್ನ ತಂದೆಯ ಅರ್ಧ ಆಸ್ತಿಯನ್ನು ವರದಕ್ಷಿಣೆ ರೂಪದಲ್ಲಿ ತನ್ನ ಹೆಸರಿಗೆ ಬರೆಸಬೇಕು. ನಂತರ ವಿಚ್ಛೇದನ ಕೊಡಬೇಕು. ಇಲ್ಲದಿದ್ದರೆ ನಗ್ನ ಫೋಟೊಗಳನ್ನು ಜಾಲತಾಣಗಳಲ್ಲಿ ಅಪ್ಲೋಡ್ ಮಾಡುತ್ತೇನೆ' ಎಂದು ಪತ್ನಿಗೆ ಧಮಕಿ ಹಾಕಿದ್ದ. ಇದರಿಂದ ಆತಂಕಗೊಂಡ ಪತ್ನಿ ನ್ಯಾಯಕ್ಕಾಗಿ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾಳೆ.
A 26-year-old woman went to the police seeking action against her husband who allegedly was threatening her of posting her nude pictures to his friends and blackmailed her for dowry.
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm