ಬ್ರೇಕಿಂಗ್ ನ್ಯೂಸ್
01-03-22 12:25 pm Udupi Correspondent ಕ್ರೈಂ
ಉಡುಪಿ, ಮಾ.1 : ಯುವತಿಯ ಮುಖಕ್ಕೆ ಉರಿಯುವ ಸಿಗರೇಟನ್ನು ಇಟ್ಟು ಅವಾಚ್ಯವಾಗಿ ನಿಂದಿಸುವ ವಿಡಿಯೋ ವೈರಲ್ ಆಗಿದ್ದು, ವರದಕ್ಷಿಣೆ ಕಿರುಕುಳ ಅನ್ನುವ ದೂರು ಕೇಳಿಬಂದಿದೆ.
ಕುಂದಾಪುರ ಕನ್ನಡ ಭಾಷೆಯಲ್ಲಿ ಮಾತನಾಡುತ್ತಿದ್ದು, ಪತಿರಾಯನೇ ಪತ್ನಿಯ ಜೊತೆಗೆ ವಿಕೃತವಾಗಿ ನಡೆದುಕೊಂಡಿದ್ದಾನೆ. ಈ ಬಗ್ಗೆ ಕುಂದಾಪುರ ಠಾಣೆಯಲ್ಲಿ ವರದಕ್ಷಿಣೆ ಕಿರುಕುಳ ದಾಖಲಾಗಿದ್ದು, ಆರೋಪಿ ಪ್ರದೀಪ್ ಪೂಜಾರಿ ವಿರುದ್ಧ ಪತ್ನಿಯೇ ದೂರು ನೀಡಿದ್ದಾಳೆ.
ವಿಡಿಯೋದಲ್ಲಿ ತನ್ನ ತಾಯಿಗೆ ದೂರು ಹೇಳಿರುವ ಪತ್ನಿಯನ್ನು ಆರೋಪಿ ಪತಿ ಸಿಗರೇಟು ತೋರಿಸಿ ಹೆದರಿಸುತ್ತಿದ್ದಾನೆ. ಯುವತಿ ತನಗೆ ಬೆನ್ನು ನೋವು, ಉಷಾರಿಲ್ಲ ಎಂದು ಹೇಳಿಕೊಳ್ಳುತ್ತಿದ್ದರೂ, ಪತಿರಾಯ ಸಿಗರೇಟು ಹೊಗೆ ಬಿಡುತ್ತಾ ಉರಿಯುವ ಸಿಗರೇಟು ತುಂಡನ್ನು ಆಕೆಯ ಮುಖಕ್ಕೆ ತಾಗಿಸುತ್ತಾನೆ. ಅಲ್ಲದೆ, ತನ್ನದೇ ಮೊಬೈಲಿನಲ್ಲಿ ವಿಡಿಯೋ ಮಾಡುತ್ತಾನೆ. ನಿನ್ನ ತಾಯಿ ನನಗೆ ಫೋನ್ ಮಾಡಿ ಹೆದರಿಸುತ್ತಿದ್ದಾಳೆ. ಆಕೆಯಲ್ಲಿ ನೀನೇ ಫೋನ್ ಮಾಡಿ, ನನಗೆ ಕರೆ ಮಾಡಿ ಕ್ಷಮೆ ಕೇಳುವಂತೆ ಮಾಡಬೇಕು ಎಂದು ನಿಂದಿಸುತ್ತಾನೆ.
ಯುವತಿ ಮತ್ತು ಪತಿಯ ತಾಯಿ ಅಂಗಲಾಚುತ್ತಿದ್ದು, ಈ ರೀತಿ ವಿಕೃತವಾಗಿ ವರ್ತಿಸಬೇಡ. ನಿನಗೆ ದೋಷ ತಟ್ಟೀತು ಎಂದು ಹೇಳುತ್ತಾರೆ. ಇದರ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ.
ಮೂರು ದಿನಗಳ ಹಿಂದೆಯೇ ಕುಂದಾಪುರ ಠಾಣೆಯಲ್ಲಿ ವರದಕ್ಷಿಣೆ ಕಿರುಕುಳ ಪ್ರಕರಣ ದಾಖಲಾಗಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಜಾಲತಾಣದಲ್ಲಿ ವಿಡಿಯೋ ಆಧರಿಸಿ ಆರೋಪಿಯನ್ನು ಬಂಧಿಸಬೇಕು, ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಜನರು ಆಗ್ರಹ ಮಾಡಿದ್ದಾರೆ.
Kundapur husband tortured wife for dowry, burns her with cigarette asking to call her father to get the dowry amount. The video of this has gone viral on social media.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 01:54 pm
Mangaluru Staffer
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm