ಬ್ರೇಕಿಂಗ್ ನ್ಯೂಸ್
04-03-22 11:38 am Mangalore Correspondent ಕ್ರೈಂ
ಪುತ್ತೂರು, ಮಾ.4: 16 ವರ್ಷಗಳ ಹಿಂದೆ ನಡೆದಿದ್ದ ಮನೆ ಕಳವು ಪ್ರಕರಣದಲ್ಲಿ ಆರೋಪಿಯಾಗಿ ಜೈಲಿನಲ್ಲಿರುವ ವ್ಯಕಿಗೆ ಪುತ್ತೂರು ನ್ಯಾಯಾಲಯ ಐದು ವರ್ಷಗಳ ಶಿಕ್ಷೆ ಪ್ರಕಟಿಸಿದೆ.
2006 ರ ಮಾರ್ಚ್ 14 ಮತ್ತು 16ರ ಮಧ್ಯೆ ಪುತ್ತೂರು ತಾಲೂಕಿನ ಕೆಮ್ಮಿಂಜೆ ಗ್ರಾಮದ ಮೊಟ್ಟೆತ್ತಡ್ಕ ಎಂಬಲ್ಲಿ ಮಹೇಂದ್ರ ಕುಮಾರ್ ಎಂಬವರ ಮನೆಯಿಂದ ಕಳವು ನಡೆದಿತ್ತು. ಮನೆಯ ಬಾಗಿಲಿನ ಬೀಗವನ್ನು ಒಡೆದು ಸೂಟ್ ಕೇಸ್ ನಲ್ಲಿದ್ದ 50.930 ಗ್ರಾಮ್ ಚಿನ್ನದ ಆಭರಣಗಳನ್ನು ಕಳವು ಮಾಡಲಾಗಿತ್ತು. ಕೃತ್ಯದ ಬಗ್ಗೆ ತನಿಖೆ ನಡೆಸಿದ್ದ ಜಿಲ್ಲಾ ಅಪರಾಧ ಪತ್ತೆದಳವು ಆರೋಪಿಗಳಾದ ಸಂತೋಷ್ ಮತ್ತು ನಾಗರಾಜ ಬಳೆಗಾರ ಎಂಬವರನ್ನು ಬಂಧಿಸಿದ್ದರು.
ಆಗಿನ ಜಿಲ್ಲಾ ಅಪರಾಧ ಪತ್ತೆದಳದ ಪೊಲೀಸ್ ನಿರೀಕ್ಷಕ ತಿಲಕಚಂದ್ರ, ಆರೋಪಿಗಳನ್ನು ಪುತ್ತೂರು ನಗರ ಠಾಣೆಗೆ ಹಸ್ತಾಂತರ ಮಾಡಿದ್ದರು. ಬಳಿಕ ಪುತ್ತೂರು ನಗರ ಪೊಲೀಸ್ ಠಾಣೆಯ ಅಪರಾಧ ವಿಭಾಗದ ಎಸ್ಐ ಕೃಷ್ಣ ನಾಯ್ಕ್ ನ್ಯಾಯಾಲಯಕ್ಕೆ ದೋಷಾರಾಪ ಪಟ್ಟಿ ಸಲ್ಲಿಸಿದ್ದರು. ಸುರತ್ಕಲ್ ಹೊನ್ನಕಟ್ಟೆ ನಿವಾಸಿ ನಾಗರಾಜ ಬಳೆಗಾರ ವಿರುದ್ಧ ಆನಂತರ ಹಲವು ಕಳವು ಕೇಸುಗಳು ದಾಖಲಾಗಿ ಕಲಬುರ್ಗಿ ಜೈಲಿನಲ್ಲಿ ಇಡಲಾಗಿತ್ತು. ಈಗಲೂ ಅದೇ ಜೈಲಿನಲ್ಲಿ ಇದ್ದಾನೆ. ಸದ್ರಿ ಅಪರಾಧದ ಬಗ್ಗೆ ಪುತ್ತೂರಿನ ನ್ಯಾಯಾಲಯದಲ್ಲಿ 2014 ರಿಂದ ವಿಚಾರಣೆ ನಡೆದಿದ್ದು ಒಂದನೇ ಆರೋಪಿ ನಾಗರಾಜ ಬಳೆಗಾರ ವಿರುದ್ಧ ಅಪರಾಧ ಸಾಬೀತಾಗಿದ್ದರಿಂದ 2022 ರ ಮಾರ್ಚ್ 3 ರಂದು ಕೋರ್ಟ್ ಶಿಕ್ಷೆ ಪ್ರಕಟಿಸಿದೆ.
ಐದು ವರ್ಷಗಳ ಕಠಿಣ ಶಿಕ್ಷೆ, 5 ಸಾವಿರ ರೂ. ದಂಡ, ತೆರಲು ತಪ್ಪಿದಲ್ಲಿ ಹೆಚ್ಚುವರಿ 6 ತಿಂಗಳ ಶಿಕ್ಷೆ ಅನುಭವಿಸಬೇಕೆಂದು ತೀರ್ಪು ಹೇಳಿದೆ. ಆರೋಪಿಯು ಈಗಾಗಲೇ 5 ವರ್ಷಕ್ಕಿಂತ ಹೆಚ್ಚು ಕಾಲ ಶಿಕ್ಷೆ ಅನುಭವಿಸಿದ್ದಲ್ಲಿ ಇತರ ಪ್ರಕರಣಗಳಲ್ಲಿ ಅಪರಾಧ ಸಾಬೀತು ಆಗಿರದೇ ಇದ್ದರೆ ಜೈಲಿನಿಂದ ಬಿಡುಗಡೆಯಾಗಿ ಬರುವ ಸಾಧ್ಯತೆಯಿದೆ. ಆದರೆ ಆರೋಪಿ ನಾಗರಾಜ ಬಳೆಗಾರ ಉಡುಪಿ ಜೈಲಿನಲ್ಲಿದ್ದಾಗ ವಿನೋದ್ ಶೆಟ್ಟಿಗಾರ್ ಎಂಬಾತನ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದು ಕಲಬುರಗಿ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದಾನೆ. ಹೀಗಾಗಿ ಕಳವು ಪ್ರಕರಣದ ಶಿಕ್ಷೆಯನ್ನು ಜೈಲಧಿಕಾರಿಗಳು ಪ್ರತ್ಯೇಕವಾಗಿ ಪರಿಗಣಿಸುತ್ತಾರೆ.
The police here have arrested Chandrashekhar (57) from Bandaje village on the charges of raping a mentally retarded lady. It is said that the lady was raped by him near Kanyoor in the taluk.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 01:54 pm
Mangaluru Staffer
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm