ಬ್ರೇಕಿಂಗ್ ನ್ಯೂಸ್
05-03-22 10:27 pm Mangalore Correspondent ಕ್ರೈಂ
ಪುತ್ತೂರು, ಮಾ.5: ಕಾಲೇಜು ವಿದ್ಯಾರ್ಥಿನಿ, ಅಪ್ರಾಪ್ತ ಯುವತಿಗೆ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಪುತ್ತೂರು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದು ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ.
ಸುಳ್ಯ ಐವರ್ನಾಡು ಗ್ರಾಮದ ರಕ್ಷಿತ್ ಬಂಧಿತ ಆರೋಪಿ. ವಿದ್ಯಾರ್ಥಿನಿ ಪುತ್ತೂರಿನ ಹಾಸ್ಟೆಲ್ನಲ್ಲಿ ಇದ್ದುಕೊಂಡು ಶಿಕ್ಷಣ ಪಡೆಯುತ್ತಿದ್ದಳು. ಈ ವೇಳೆ, ರಕ್ಷಿತ್ ಆಕೆಯನ್ನು ಪ್ರೀತಿಸುತ್ತಿದ್ದ ಎನ್ನಲಾಗಿದ್ದು ವಿಚಾರ ಬಾಲಕಿ ಮನೆಯವರಿಗೆ ತಿಳಿದು, ರಕ್ಷಿತ್ನನ್ನು ಕರೆದು ಬುದ್ಧಿವಾದ ಹೇಳಿದ್ದರು. ಇದೇ ವಿಚಾರದಲ್ಲಿ ಬಾಲಕಿ ತಂದೆ, ಸಹೋದರ ಹಾಗೂ ಆರೋಪಿಯ ಮಧ್ಯೆ ಎರಡು ತಿಂಗಳ ಹಿಂದೆ ಗಲಾಟೆ ನಡೆದಿದ್ದು ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿತ್ತು. ಆ ಸಂದರ್ಭ ಬಾಲಕಿಯ ತಂದೆ ನೀಡಿದ ದೂರಿನಂತೆ ಆರೋಪಿ ರಕ್ಷಿತ್ ವಿರುದ್ಧ ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಆನಂತರವೂ ಆರೋಪಿ ರಕ್ಷಿತ್ ಬಾಲಕಿ ವಾಸ್ತವ್ಯ ಹೂಡಿದ್ದ ಪುತ್ತೂರಿನ ಹಾಸ್ಟೆಲ್ ವಾರ್ಡನ್ಗೆ ಕರೆ ಮಾಡಿ ತಾನು ಬಾಲಕಿಯ ಅಣ್ಣನೆಂದು ಸುಳ್ಳು ಹೇಳಿ ಆಕೆಗೆ ಫೋನ್ ನೀಡಲು ತಿಳಿಸುತ್ತಿದ್ದ. ಈ ವೇಳೆ ಬಾಲಕಿಯಲ್ಲಿ ಹೊರಗಡೆ ಭೇಟಿಯಾಗುವಂತೆ ಒತ್ತಾಯಿಸುತ್ತಿದ್ದ. ಬಾಲಕಿ ಬರಲು ನಿರಾಕರಿಸಿದಾಗ ಕೊಲ್ಲುವ ಬೆದರಿಕೆ ಹಾಕುತ್ತಿದ್ದ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಆರೋಪಿಯ ಜೀವ ಬೆದರಿಕೆಯಿಂದ ಹೆದರಿದ ಬಾಲಕಿ ಫೆ.27ರಂದು ಪುತ್ತೂರಿನ ಯಾತ್ರಿ ಸ್ಥಳ ಬೀರಮಲೆಗುಡ್ಡೆಗೆ ಬರುವುದಾಗಿ ತಿಳಿಸಿದ್ದಳು. ಅಲ್ಲಿಗೆ ಆಕೆ ತೆರಳಿದ ಸಂದರ್ಭ ಆರೋಪಿ ಆಕೆಯನ್ನು ಬಲವಂತವಾಗಿ ಅಪ್ಪಿಕೊಂಡು ಮುತ್ತಿಕ್ಕಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ದೂರಲಾಗಿದೆ. ಬಾಲಕಿ ಅಲ್ಲಿಂದ ತಪ್ಪಿಸಿಕೊಂಡು ಹಾಸ್ಟೆಲ್ಗೆ ಬಂದಿದ್ದಾಳೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪುತ್ತೂರು ಮಹಿಳಾ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
Sexual harassment to college girl in the name of love, accused arrested by Puttur police. The arrested has been identified as Rakshith.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 01:54 pm
Mangaluru Staffer
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm