ಬ್ರೇಕಿಂಗ್ ನ್ಯೂಸ್
07-03-22 12:08 pm Mangalore Correspondent ಕ್ರೈಂ
ಮಂಗಳೂರು, ಮಾ.5:ಶಿವಮೊಗ್ಗದಲ್ಲಿ ಕೊಲೆಯಾದ ಹರ್ಷನನ್ನು ಬೀದಿನಾಯಿ ಎಂದು ಪ್ರಚೋದನಕಾರಿ ಪೋಸ್ಟ್ ಮಾಡಿದ್ದಲ್ಲದೆ, ಇದಕ್ಕೆ ಸಚಿವ ಈಶ್ವರಪ್ಪ ಕಾರಣ ಎಂದು ಆರೋಪಿಸಿದ್ದ ಮಂಗಳೂರು ಮುಸ್ಲಿಮ್ಸ್ ಫೇಸ್ಬುಕ್ ಪೇಜ್ ವಿರುದ್ಧದ ಪ್ರಕರಣದ ತನಿಖೆಯನ್ನು ಸಿಐಡಿ ಅಧಿಕಾರಿಗಳು ಕೈಗೆತ್ತಿಕೊಂಡಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ.
2015ರಲ್ಲಿ ಮಹಮ್ಮದ್ ಪೈಗಂಬರ್ ವಿರುದ್ಧ ಪೋಸ್ಟ್ ಮಾಡಿದ್ದ ಹರ್ಷನಿಗೆ ತಕ್ಕ ಶಾಸ್ತಿಯಾಗಿದೆ. ಪ್ರವಾದಿ ವಿರುದ್ಧ ಪೋಸ್ಟ್ ಮಾಡಿದ್ದವರಿಗೆಲ್ಲ ಇಂಥದ್ದೇ ಶಾಸ್ತಿಯಾಗಲಿದೆ ಎಂದು ಪೋಸ್ಟ್ ನಲ್ಲಿ ಬರೆಯಲಾಗಿತ್ತು. ಅಲ್ಲದೆ, ಸಚಿವ ಈಶ್ವರಪ್ಪನನ್ನು ಮಂಪರು ಪರೀಕ್ಷೆ ನಡೆಸಿದರೆ ಇದರ ಹಿಂದೆ ಯಾರಿದ್ದಾರೆ, ಯಾರು ಸುಪಾರಿ ಕೊಟ್ಟಿದ್ದಾರೆ ಎನ್ನೋದು ತಿಳಿದುಬರಬಹುದು ಎಂದು ಆರೋಪ ಮಾಡಲಾಗಿತ್ತು. ಈ ಬಗ್ಗೆ ಮಂಗಳೂರು ಪೊಲೀಸರು ಸುಮೊಟೊ ಪ್ರಕರಣ ದಾಖಲಿಸಿ, ತನಿಖೆ ನಡೆಸಿದ್ದರು. ಅಲ್ಲದೆ, ಫೇಸ್ಬುಕ್ ಪೇಜ್ ಅನ್ನು ಬ್ಲಾಕ್ ಮಾಡಲು ಫೇಸ್ಬುಕ್ ಕಂಪನಿಗೂ ದೂರು ಬರೆದಿದ್ದರು.

ಈ ಹಿಂದೆಯೂ ಮಂಗಳೂರು ಮುಸ್ಲಿಮ್ಸ್ ಫೇಸ್ಬುಕ್ ಪೇಜ್ ಹೆಸರಲ್ಲಿ ಹಿಂದು ದೇವರ ಅವಹೇಳನ, ಹಿಂದು ಸಂಘಟನೆಗಳ ನಾಯಕರ ಬಗ್ಗೆ ಅವಹೇಳನಕಾರಿ, ಪ್ರಚೋದನಕಾರಿ ಪೋಸ್ಟ್ ಗಳನ್ನು ಹಾಕಿದ್ದು ನಡೆದಿತ್ತು. 2016ರಲ್ಲಿ ಕಟೀಲು ದೇವರ ಬಗ್ಗೆ ಅವಹೇಳನಕಾರಿಯಾಗಿ ಬರೆದಿದ್ದು ಕರಾವಳಿಯಲ್ಲಿ ಭಾರೀ ಆಕ್ರೋಶಕ್ಕೂ ಕಾರಣವಾಗಿತ್ತು. ಆನಂತರ, ಆ ಫೇಸ್ಬುಕ್ ಪೇಜನ್ನು ಬ್ಲಾಕ್ ಮಾಡಲಾಗಿತ್ತು. ಆದರೆ ಅದರ ಹಿಂದೆ ಯಾರಿದ್ದಾರೆ, ಆರೋಪಿಗಳು ಯಾರೆಂದು ಪತ್ತೆಹಚ್ಚಲು ಪೊಲೀಸರಿಂದ ಸಾಧ್ಯವಾಗಿರಲಿಲ್ಲ.
ಈಗ ಅದೇ ರೀತಿಯಲ್ಲಿ ಒಂದಕ್ಷರ ಆಲ್ಫಾಬೆಟ್ ಬದಲಿಸಿ, ಹೊಸತಾಗಿ ಪೇಜ್ ಆರಂಭಿಸಲಾಗಿತ್ತು. ಅಲ್ಲದೆ, ಮತ್ತೆ ಹಿಂದುಗಳ ವಿರುದ್ಧ ಪ್ರಚೋದನಕಾರಿ ಪೋಸ್ಟ್ ಬರೆಯಲಾಗಿತ್ತು. ಮೊನ್ನೆ ಶಿವಮೊಗ್ಗದಲ್ಲಿ ಹಿಂದು ಸಂಘಟನೆಯ ಹರ್ಷ ಕೊಲೆಯಾದ ಸಂಧರ್ಭದಲ್ಲಿ ಉದ್ದೇಶಪೂರ್ವಕವಾಗಿ ಪೋಸ್ಟ್ ಮಾಡಿದ್ದು ಅದರ ಕಾಪಿ ಜಾಲತಾಣದಲ್ಲಿ ವೈರಲ್ ಆಗಿತ್ತು. ಅದರ ಬಗ್ಗೆ ಸುಮೊಟೊ ಪ್ರಕರಣ ದಾಖಲಿಸಿದ್ದ ಮಂಗಳೂರು ಪೊಲೀಸರು ಅದಕ್ಕೆ ಲೈಕ್ಸ್ ಕೊಟ್ಟವರ ಮೇಲೂ ಕ್ರಮ ಜರುಗಿಸುತ್ತೇವೆ ಎಂದಿದ್ದರು. ಮಂಗಳೂರು ಕಮಿಷನರೇಟ್ ಕಚೇರಿಯಲ್ಲಿ ಸಾಮಾಜಿಕ ಜಾಲತಾಣದ ಮೇಲೆ ಕಣ್ಣಿಡುವ ಸಲುವಾಗಿ ಪ್ರತ್ಯೇಕ ಕಚೇರಿ ಒಂದನ್ನು ತೆರೆದಿದ್ದಲ್ಲದೆ, 24 ಗಂಟೆ ಸಿಬಂದಿಯನ್ನು ನಿಯೋಜಿಸಲಾಗಿತ್ತು. ಇದೀಗ ಸಿಐಡಿ ಅಧಿಕಾರಿಗಳು ಪ್ರಕರಣದ ವಿಚಾರಣೆ ಎತ್ತಿಕೊಂಡಿದ್ದು, ಆರೋಪಿಗಳ ಪತ್ತೆಗೆ ಮುಂದಾಗಿದ್ದಾರೆ.
The Criminal investigation department (CID) has initiated a probe against the ‘Mangalore Muslims’ Facebook (FB) page for allegedly posting derogatory content about the brutal murder of Bajrang Dal activist Harsha.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 01:54 pm
Mangaluru Staffer
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm