ಬ್ರೇಕಿಂಗ್ ನ್ಯೂಸ್

Forensic Expert Dr Mahabala Shetty, Dharmasthala case: ಧರ್ಮಸ್ಥಳ ಸ್ನಾನಘಟ್ಟ ಬಳಿ 20ಕ್ಕೂ ಹೆಚ್ಚು ಕೊಳೆತ ಶವಗಳನ್ನು ಪೋಸ್ಟ್ ಮಾರ್ಟಂ ಮಾಡಿದ್ದೆ, ಅವನ್ನು ಅಲ್ಲಿಯೇ ಹೂಳಲಾಗಿತ್ತು ; ಪ್ರಕರಣಕ್ಕೆ ಸ್ಫೋಟಕ ತಿರುವು ಕೊಟ್ಟ ಫಾರೆನ್ಸಿಕ್ ತಜ್ಞ ಡಾ.ಮಹಾಬಲ ಶೆಟ್ಟಿ    |    ಕನಸು ಕಮರಿಸಿದ ಅಪಘಾತ ; ವೈದ್ಯರ ಎಡವಟ್ಟು, ಸಕಾಲದಲ್ಲಿ ಚಿಕಿತ್ಸೆ ಸಿಗದೆ ಕೈಕಾಲಿನ ಶಕ್ತಿಯೇ ಊನ, ಕಂಗೆಟ್ಟ ವಿಶ್ವಕರ್ಮ ಕುಟುಂಬಕ್ಕೆ ಕ್ರಿಶ್ಚಿಯನ್ ಗೆಳೆಯರ ಆಸರೆ ! ಅರ್ಧಕ್ಕೆ ಉಳಿದುಬಿಟ್ಟ ಮನೆಗೆ ದಿಕ್ಕಿಲ್ಲದ ಸ್ಥಿತಿ, ಬೆಳಕು ಹರಿಸೀತೆ ಸಹೃದಯರ ಹಾರೈಕೆ ?!    |    Kannada Producer Ganesh, Film Dharmasthala File, Movie: 'ಧರ್ಮಸ್ಥಳ ಫೈಲ್ಸ್' ಸಿನಿಮಾ ಘೋಷಿಸಿದ ಕನ್ನಡದ ನಿರ್ಮಾಪಕ ಎ. ಗಣೇಶ್ ; ಸಮಸ್ಯೆ ಆದ್ರೆ ಚಿತ್ರತಂಡವೇ ಹೊಣೆ ಎಂಬ ಕಂಡೀಷನ್! ಕತೆ ಇನ್ನಷ್ಟೇ ಬರೆಸಬೇಕೆಂದ ಚಿತ್ರತಂಡ     |   

ಡಿವೈಡರ್​ಗೆ ಕಾರು ಡಿಕ್ಕಿ ಹೊಡೆದು ಪಲ್ಟಿ ; ಸಂಸದರ ಪುತ್ರ ಸ್ಥಳದಲ್ಲೇ ಸಾವು ! 

10-03-22 01:04 pm       HK Desk news   ಕ್ರೈಂ

ಗುರುವಾರ ನಸುಕಿನ ಜಾವ ಸಂಭವಿಸಿದ ಕಾರು ಅಪಘಾತದಲ್ಲಿ ಡಿಎಂಕೆ ರಾಜ್ಯಸಭಾ ಸದಸ್ಯ ಎನ್​ ಆರ್ ಇಳಂಗೋವ ಅವರ ಪುತ್ರ ರಾಕೇಶ್ ಮೃತಪಟ್ಟಿದ್ದು, ಆತನ ಸ್ನೇಹಿತ ಗಂಭೀರವಾಗಿ ಗಾಯಗೊಂಡಿದ್ದಾರೆ.

ಚೆನ್ನೈ , ಮಾ 10: ಗುರುವಾರ ನಸುಕಿನ ಜಾವ ಸಂಭವಿಸಿದ ಕಾರು ಅಪಘಾತದಲ್ಲಿ ಡಿಎಂಕೆ ರಾಜ್ಯಸಭಾ ಸದಸ್ಯ ಎನ್​ ಆರ್ ಇಳಂಗೋವ ಅವರ ಪುತ್ರ ರಾಕೇಶ್ ಮೃತಪಟ್ಟಿದ್ದು, ಆತನ ಸ್ನೇಹಿತ ಗಂಭೀರವಾಗಿ ಗಾಯಗೊಂಡಿದ್ದಾರೆ.

ರಾಕೇಶ್ ಮತ್ತು ಆತನ ಸ್ನೇಹಿತ ಪುದುಚೇರಿಗೆ ತೆರಳುವಾಗ ನಸುಕಿನ ಜಾವ 3.45ರ ಸುಮಾರಿಗೆ ಕೊಟ್ಟಕುಪ್ಪಂ ಬಳಿ ನಿಯಂತ್ರಣ ತಪ್ಪಿ ಕಾರು ಡಿವೈಡರ್​ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಪರಿಣಾಮ ರಾಕೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಬಳಿಕ ಸ್ಥಳೀಯರು ಹಾಗೂ ಅಗ್ನಿ ಶಾಮಕ ಸಿಬ್ಬಂದಿ ಆಗಮಿಸಿ, ಒಳಗಡೆ ಸಿಕ್ಕಿಕೊಂಡಿದ್ದ ಮೃತದೇಹವನ್ನು ಹೊರತೆಗೆದಿದ್ದಾರೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ರಾಕೇಶ್​ ಸ್ನೇಹಿತನನ್ನು ಪಾಂಡಿಚೇರಿ ವೈದ್ಯಕೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Rakesh, the 22-year-old son of NR Elangovan, Dravida Munnetra Kazhagam (DMK) Rajya Sabha MP from Tamil Nadu, died in a road accident on Thursday.