ಬ್ರೇಕಿಂಗ್ ನ್ಯೂಸ್
11-03-22 01:26 pm Bengaluru Correspondent ಕ್ರೈಂ
ಬೆಂಗಳೂರು, ಮಾ.11: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರಾಕ್ಷಸಿ ಪ್ರವೃತ್ತಿಯ ಕಿರಾತಕ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ತನ್ನ ಮೂರು ತಿಂಗಳ ಗರ್ಭಿಣಿ ಪತ್ನಿಗೆ ಡೀಸೆಲ್ ಸುರಿದು ಕೊಲೆಗೆ ಯತ್ನಿಸಿದ್ದಲ್ಲದೆ, ಎರಡೂವರೆ ವರ್ಷದ ಪುಟ್ಟ ಮಗುವನ್ನು ಕಚ್ಚಿ ವಿಕೃತಿ ಮೆರೆದಿದ್ದಾನೆ.
ಗಾಯಾಳು ಪತ್ನಿ ಮೀನಾ(23) ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಈಕೆ ಬಾಬು (37) ಎಂಬಾತನನ್ನ ಎರಡನೇ ಮದುವೆ ಆಗಿದ್ದು ಆತನೇ ಈ ಕೃತ್ಯ ಎಸಗಿರುವ ಕಿರಾತಕ.
ಏಳು ವರ್ಷದ ಹಿಂದೆ ವಿಜಯಕಾಂತ ಎಂಬವರನ್ನ ವರಿಸಿದ್ದ ಮೀನಾಗೆ ಮೂರು ಜನ ಹೆಣ್ಣು ಮಕ್ಕಳಿದ್ದರು. ಆನಂತರ ಮೂರು ವರ್ಷದ ಹಿಂದೆ ವಿಜಯಕಾಂತ್ ತೀರಿಹೋಗಿದ್ದರು. ಆನಂತರ ಮೀನಾಗೆ ಬಾಬು ಎಂಬಾತನ ಪರಿಚಯವಾಗಿದ್ದು ಮದುವೆ ಆಗ್ತಿನಿ ಎಂದು ಮುಂದೆ ಬಂದಿದ್ದ. ಇಬ್ಬರೂ ಮದುವೆ ಆಗಿ ಬೈಯಪ್ಪನಹಳ್ಳಿಯಲ್ಲಿ ಒಂದು ವರ್ಷದಿಂದ ವಾಸವಿದ್ದರು. ಈ ನಡುವೆ ಬಾಬು ಕುಡಿತದ ಚಟ ಹೊಂದಿದ್ದು ಮೀನಾ ಕೂಲಿ ಮಾಡಿ ಕೂಡಿಟ್ಟ ಹಣವನ್ನು ಕುಡಿದು ಹಾಳು ಮಾಡ್ತಿದ್ದ.

ಇದೇ ವಿಚಾರದಲ್ಲಿ ಜಗಳ ನಡೆದಿದ್ದು ಇನ್ನು ದುಡ್ಡು ಕೇಳಿದ್ರೆ ಮೈಮೇಲೆ ಡೀಸೆಲ್ ಸುರಿದು ಸತ್ತೋಗುತ್ತೇನೆಂದಿದ್ದಳು ಮೀನಾ. ನೀನ್ಯಾಕೆ ಸಾಯ್ತೀಯಾ, ನಾನೇ ನಿನ್ನ ಸಾಯಿಸ್ತೇನೆಂದು ಸ್ಟೌನಿಂದ ಡೀಸೆಲ್ ಸುರಿದು ಗಂಡನೇ ಸ್ವತಃ ಬೆಂಕಿ ಹಚ್ಚಿದ್ದಾನೆ. ಮೂರು ತಿಂಗಳ ಗರ್ಭಿಣಿ ಆಗಿರುವ ಮೀನಾ ಅರೆಬರೆ ಸುಟ್ಟು ಹೋಗಿದ್ದಾಳೆ. ಇದೇ ವೇಳೆ ಮೀನಾ ಮೊದಲ ಪತಿಗೆ ಜನಿಸಿದ್ದ ಪುಟ್ಟ ಹೆಣ್ಣು ಮಗುವನ್ನು ಕಚ್ಚಿ ವಿಕೃತಿ ಮೆರೆದಿದ್ದಾನೆ. ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಾಗಿದ್ದು ಪೊಲೀಸರು ಆರೋಪಿ ಬಾಬುವನ್ನು ಬಂಧಿಸಿದ್ದಾರೆ.
Bangalore Man sets pregnant wife and three year old daughter on fire when she refuses to give money for drinking. A case has been registered and husband has been arrested by City Police.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:46 am
HK News Staffer
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
15-09-26 10:31 am
HK News Staffer
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am