ಬ್ರೇಕಿಂಗ್ ನ್ಯೂಸ್
15-03-22 08:42 pm HK Desk news ಕ್ರೈಂ
ಚಂಡೀಗಢ, ಮಾ.15: ಅಂತಾರಾಷ್ಟ್ರೀಯ ಕಬಡ್ಡಿ ಆಟಗಾರ ಸಂದೀಪ್ ನಂಗಾಲ್ ಅವರ ಮೇಲೆ ಜಲಂಧರ್ ನಲ್ಲಿ ಕಬಡ್ಡಿ ಟೂರ್ನಮೆಂಟ್ ನಡೆಯುತ್ತಿದ್ದಾಗಲೇ ದುಷ್ಕರ್ಮಿಗಳು ತಲೆಗೆ ಗುಂಡಿಟ್ಟು ಹತ್ಯೆ ಮಾಡಿದ್ದಾರೆ. ಎದೆ ಮತ್ತು ತಲೆಯನ್ನು ಗುರಿಯಾಗಿಸಿ ದುಷ್ಕರ್ಮಿಗಳು 20 ಸುತ್ತು ಗುಂಡು ಹಾರಿಸಿದ್ದಾರೆ.
ಸಂದೀಪ್ ತಲೆಯೊಳಗೆ ಎಂಟರಿಂದ ಹತ್ತು ಬುಲೆಟ್ ಹೊಕ್ಕಿರುವುದಾಗಿ ಜಲಂಧರ್ ಡಿಎಸ್ಪಿ ಲಕ್ವೀಂದರ್ ಸಿಂಗ್ ತಿಳಿಸಿದ್ದಾರೆ. ತುಂಬ ಹತ್ತಿರದಿಂದ ದುಷ್ಕರ್ಮಿಗಳ ತಂಡ ಗುಂಡು ಹಾರಿಸಿದ್ದು, ಸ್ಥಳದಲ್ಲಿ ಸೇರಿದ್ದ ಜನರು ದಿಕ್ಕಾಪಾಲಾಗಿ ಓಡಿದ್ದಾರೆ. ಸಂದೀಪ್ ನಂಗಾಲ್ ನೆಲದಲ್ಲಿ ಬಿದ್ದು ಉರುಳಾಡಿದ್ದ ವಿಡಿಯೋ ವೈರಲ್ ಆಗಿದೆ. ಜಲಂಧರ್ ನಗರ ಹೊರವಲಯದ ಮಾಲಿಯಾನ್ ಗ್ರಾಮದಲ್ಲಿ ಕಬಡ್ಡಿ ಟೂರ್ನಮೆಂಟ್ ನಡೆಯುತ್ತಿದ್ದಾಗಲೇ ಗುಂಡಿನ ಹಾರಾಟ ನಡೆದಿದೆ.
ಪಂಜಾಬ್ ರಾಜ್ಯದ ಜಲಂಧರ್ ಮೂಲದ ಸಂದೀಪ್ ನಂಗಾಲ್, ಕಳೆದ ಹತ್ತು ವರ್ಷಗಳಿಂದ ಭಾರತ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಕೆನಡಾ, ಅಮೆರಿಕ, ಇಂಗ್ಲೆಂಡ್ ಎದುರಿನ ಪಂದ್ಯದಲ್ಲಿ ಭಾರತ ಪರವಾಗಿ ಆಕರ್ಷಕ ಆಟವಾಡಿ ಗಮನ ಸೆಳೆದಿದ್ದರು. ಇತ್ತೀಚೆಗೆ ಜಲಂಧರ್ ನಲ್ಲಿ ಕಬಡ್ಡಿ ಫೆಡರೇಶನ್ ಒಂದನ್ನು ನಡೆಸುತ್ತಿದ್ದ ಸಂದೀಪ್ ಜೊತೆಗೆ ಗಾಲ್ಫ್ ಕ್ಲಬ್ ನವರು ಜಟಾಪಟಿ ನಡೆಸಿದ್ದರು. ಇದೇ ವಿಚಾರದಲ್ಲಿ ಗುಂಡು ಹಾರಿಸಿ ಕೊಲ್ಲಲಾಗಿದೆ ಎನ್ನಲಾಗುತ್ತಿದೆ.
International Kabbadi player Sandeep Nangal was shot dead by unidentified assailants during a Kabaddi Cup in a Malian village in Jalandhar. It has been learned that around 20 rounds were fired at his head and chest.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
12-01-26 05:01 pm
Mangaluru Staffer
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm