ಬ್ರೇಕಿಂಗ್ ನ್ಯೂಸ್
17-03-22 07:32 pm HK Desk news ಕ್ರೈಂ
ತಿರುವನಂತಪುರಂ, ಮಾ.17 : 17 ವರ್ಷದ ಅಪ್ರಾಪ್ತ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪತ್ತನಂತಿಟ್ಟ ಜಿಲ್ಲೆಯ ಮಲಂಕರ ಆರ್ಥೋಡೋಕ್ಸ್ ಸಿರಿಯನ್ ಚರ್ಚ್ ಒಂದರ ಪಾದ್ರಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕೂಡಲ್ ಎಂಬಲ್ಲಿನ ಚರ್ಚ್ ಪಾದ್ರಿ ಪಾಂಡ್ಸನ್ ಜಾನ್ (35) ಬಂಧಿತ ವ್ಯಕ್ತಿ. ಕಲಿಯುವುದರಲ್ಲಿ ನಿರಾಸಕ್ತಿ ತೋರುತ್ತಿದ್ದ ಯುವತಿಯನ್ನು ಆಕೆಯ ಹೆತ್ತವರು ಚರ್ಚ್ ಪಾದ್ರಿಯ ಮನೆಗೆ ಕರೆದುಕೊಂಡು ಬಂದಿದ್ದರು. ಈ ವೇಳೆ, ಯುವತಿಗೆ ಕೌನ್ಸಿಲಿಂಗ್ ಕೊಡುವ ನೆಪದಲ್ಲಿ ಚರ್ಚ್ ಪಾದ್ರಿ ಯುವತಿಯನ್ನು ಕೋಣೆಗೆ ಕರೆದೊಯ್ದು ಅಸಭ್ಯವಾಗಿ ವರ್ತಿಸಿದ್ದಾನೆ ಎನ್ನಲಾಗಿದೆ.
ಮಾರ್ಚ್ 12 ಮತ್ತು 13ರಂದು ಎರಡು ಬಾರಿ ಅಸಭ್ಯವಾಗಿ ವರ್ತಿಸಿದ್ದಾನೆ. ಮೊದಲ ಬಾರಿಗೆ ಚರ್ಚ್ ನಲ್ಲಿ ಕೊಠಡಿ ಒಂದಕ್ಕೆ ಕರೆದೊಯ್ದು ಅಸಭ್ಯವಾಗಿ ವರ್ತಿಸಿದ್ದ. ಆನಂತರ, ಮರುದಿನವೂ ಕೌನ್ಸಿಲಿಂಗ್ ನೀಡಲು ಚರ್ಚ್ ಗೆ ಬರಲು ಪಾದ್ರಿ ತಿಳಿಸಿದ್ದ. ಆದರೆ ಚರ್ಚ್ ಗೆ ಬರಲು ನಿರಾಕರಿಸಿದ್ದರಿಂದ ಪಾಂಡ್ಸನ್ ಜಾನ್ ನೇರವಾಗಿ ಯುವತಿ ಮನೆಗೆ ಬಂದಿದ್ದು, ಅಲ್ಲಿ ಆಕೆಯನ್ನು ಕೋಣೆಯಲ್ಲಿ ಕೂಡಿ ಹಾಕಿ ಲೈಂಗಿಕ ಕಿರುಕುಳ ನೀಡಿದ್ದಾನೆ.
ಈ ಬಗ್ಗೆ ಸಂತ್ರಸ್ತ ಹುಡುಗಿ ಶಾಲೆಯಲ್ಲಿ ತನ್ನ ಗೆಳತಿಯ ಬಳಿ ಹೇಳಿಕೊಂಡಿದ್ದಾಳೆ. ಆಕೆಯ ಗೆಳತಿ ವಿಚಾರವನ್ನು ಶಾಲಾಡಳಿತದ ಗಮನಕ್ಕೆ ತಂದಿದ್ದು, ಅವರು ಚೈಲ್ಡ್ ಲೈನ್ ಸೆಂಟರಿಗೆ ಮಾಹಿತಿ ನೀಡಿದ್ದಾರೆ. ಚೈಲ್ಡ್ ಲೈನ್ ಸಿಬಂದಿ ನೀಡಿದ ದೂರಿನಂತೆ ಮಹಿಳಾ ಠಾಣೆ ಪೊಲೀಸರು ಆರೋಪಿ ಪಾದ್ರಿಯನ್ನು ಬಂಧಿಸಿದ್ದಾರೆ. ಮುನ್ನಾ ದಿನ ರಾತ್ರಿ ತನ್ನ ಜೊತೆ ಅಸಭ್ಯವಾಗಿ ವರ್ತಿಸಿದ್ದರಿಂದ ಯುವತಿ ಮರುದಿನ ಚರ್ಚ್ ಗೆ ತೆರಳಿರಲಿಲ್ಲ. ಆದರೆ ಮರುದಿನ ಮನೆಗೇ ಬಂದು ಕಿರುಕುಳ ಕೊಟ್ಟಿದ್ದಾನೆ ಎಂದು ಯುವತಿ ಹೇಳಿಕೆ ನೀಡಿದ್ದಾಗಿ ಪೊಲೀಸರು ತಿಳಿಸಿದ್ದಾರೆ.
A priest with Malankara Orthodox Syrian Church in Koodal in Kerala's Pathanamthitta district was arrested in a POCSO case on Thursday after he allegedly sexually misbehaved with a 17-year-old girl, who was brought to him for counseling by her mother. The suspect Pondson John, 35, a priest of Koodal Orthodox Church was arrested based on the information shared by the Childline team.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:46 am
HK News Staffer
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
15-09-26 10:31 am
HK News Staffer
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am