ಬ್ರೇಕಿಂಗ್ ನ್ಯೂಸ್
18-03-22 03:02 pm Mangalore Correspondent ಕ್ರೈಂ
ಮಂಗಳೂರು, ಮಾ.18: ಒಂದೆಡೆ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರವು ದೇಶಾದ್ಯಂತ ಸದ್ದು ಮಾಡುತ್ತಿದ್ದರೆ, ಸೈಬರ್ ಕಳ್ಳರು ಅದನ್ನೇ ಬಂಡವಾಳ ಮಾಡಿಕೊಂಡು ಸೈಬರ್ ದಾಳಿಗೆ ತೊಡಗಿದ್ದಾರೆ. ಮಂಗಳೂರಿನ ಸೈಬರ್ ಪರಿಣತ ಅನಂತ ಪ್ರಭು ಈ ಬಗ್ಗೆ ಎಚ್ಚರಿಕೆ ನೀಡಿದ್ದು, ಯಾವ ರೀತಿ ಸೈಬರ್ ಕಳ್ಳರು ಕಾಶ್ಮೀರ್ ಫೈಲ್ಸ್ ಚಿತ್ರದ ಹೆಸರಲ್ಲಿ ಜನರನ್ನು ಲೂಟಿ ಮಾಡಲು ತೊಡಗಿದ್ದಾರೆ ಅನ್ನುವುದನ್ನು ತಿಳಿಸಿದ್ದಾರೆ.
ವಾಟ್ಸಪ್ ಜಾಲತಾಣದಲ್ಲಿ ಕಾಶ್ಮೀರ್ ಫೈಲ್ಸ್ ಚಿತ್ರದ ಫ್ರೀ ಡೌನ್ಲೋಡ್ ಲಿಂಕ್ ಹರಿದಾಡುತ್ತಿದ್ದು, ಅದನ್ನು ಒತ್ತಿದಲ್ಲಿ ನೀವು ವೈರಸ್ ದಾಳಿಗೆ ಒಳಗಾಗುತ್ತೀರಿ. ಡೌನ್ಲೋಡ್ ಲಿಂಕ್ ಹೆಸರಲ್ಲಿ ಸೈಬರ್ ಹ್ಯಾಕರ್ಸ್ ವೈರಸ್ ಕಳಿಸುತ್ತಿದ್ದು, ಅದರ ಮೂಲಕ ನಮ್ಮ ಆಂಡ್ರಾಯ್ದ್ ಫೋನ್ ಅಥವಾ ಲ್ಯಾಪ್ ಟಾಪ್ ನಲ್ಲಿರುವ ಮಾಹಿತಿಗಳನ್ನು ಕದಿಯುವ ಸಾಧ್ಯತೆ ಇರುತ್ತದೆ.

ಒಂದ್ವೇಳೆ, ಈ ಲಿಂಕ್ ಅನ್ನು ಒತ್ತಿದಲ್ಲಿ ಅದರಲ್ಲಿ ಇರುವ ವೈರಸ್ ಮೂಲಕ ಸ್ಮಾರ್ಟ್ ಫೋನನ್ನು ಹ್ಯಾಕ್ ಮಾಡುವ ಸೈಬರ್ ಕಳ್ಳರು, ನಮಗೆ ತಿಳಿಯದಂತೆ ಮೊಬೈಲ್ ಜೊತೆಗೆ ಲಿಂಕ್ ಆಗಿರುವ ಬ್ಯಾಂಕ್ ಮಾಹಿತಿಗಳನ್ನು ಪಡೆಯುತ್ತಾರೆ. ಅಲ್ಲದೆ, ಮೊಬೈಲ್ ನಲ್ಲಿರುವ ಇತರ ಮಾಹಿತಿಗಳನ್ನೂ ಕದಿಯುತ್ತಾರೆ. ಅದಕ್ಕಾಗಿಯೇ ಕಾಶ್ಮೀರ್ ಫೈಲ್ಸ್ ಚಿತ್ರದ ಹೆಸರಲ್ಲಿ ವೈರಸ್ ಅನ್ನು ಕಳಿಸುತ್ತಿದ್ದಾರೆ. ಜನರು ಸುಲಭದಲ್ಲಿ ಸಿನಿಮಾ ನೋಡಬಹುದೆಂದು ಡೌನ್ಲೋಡ್ ಲಿಂಕ್ ಒತ್ತಿ ಅಪಾಯಕ್ಕೀಡಾಗದಿರಿ ಎಂದು ಅನಂತ ಪ್ರಭು ತಮ್ಮ ಫೇಸ್ಬುಕ್ ಪೇಜ್ ನಲ್ಲಿ ಬರೆದುಕೊಂಡಿದ್ದಾರೆ.

ಅದಕ್ಕಾಗಿ ವಾಟ್ಸಪ್ ಅಥವಾ ಇನ್ನಿತರ ಜಾಲತಾಣದಲ್ಲಿ ಲಿಂಕ್ ಕಳಿಸಿದವರು ಪರಿಚಯದವರೇ ಆಗಿದ್ದರೂ, ಡೌನ್ಲೋಡ್ ಮಾಡುವ ಮೊದಲು ಅವರನ್ನೇ ಸಂಪರ್ಕಿಸಿ. ಅದರಲ್ಲಿ ಇರುವ ಸಿನಿಮಾದ ಫೈಲನ್ನು ನೋಡಲು ಸಾಧ್ಯವಾಗುತ್ತದೆಯೇ ಎಂದು ಖಚಿತಪಡಿಸಿಕೊಂಡೇ ಡೌನ್ಲೋಡ್ ಮಾಡಿಕೊಳ್ಳಿ. ಇಲ್ಲದೇ, ಇದ್ದಲ್ಲಿ ಅಪಾಯಕ್ಕೆ ಒಳಗಾಗುವ ಸಾಧ್ಯತೆ ಇರುತ್ತದೆ. ಸೈಬರ್ ಹ್ಯಾಕರ್ಸ್ ಕಾಶ್ಮೀರ್ ಫೈಲ್ಸ್ ಹೆಸರಿನಲ್ಲಿಯೇ ವೈರಸ್ ಬಿಡುತ್ತಿದ್ದಾರೆ ಎಂದು ಅನಂತ ಪ್ರಭು ಎಚ್ಚರಿಸಿದ್ದಾರೆ. ಅನಂತ ಪ್ರಭು ಅವರು ಮಂಗಳೂರಿನ ಕಾಲೇಜು ಒಂದರಲ್ಲಿ ಪ್ರಾಧ್ಯಾಪಕರಾಗಿದ್ದು, ಅದರ ಜೊತೆಗೆ ಪೊಲೀಸ್ ಇಲಾಖೆಗೆ ಸೈಬರ್ ತಂತ್ರಜ್ಞಾನದ ಬಗ್ಗೆ ತರಬೇತಿ ನೀಡುತ್ತಿದ್ದಾರೆ.
Mangalore Online hackers send link named with Kashmir files on Whatsapp trying to hack mobile phones. Cyber crime expert Ananth Prabhu has requested online users to be cautious before pressing the link.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
12-01-26 05:01 pm
Mangaluru Staffer
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm