ಬ್ರೇಕಿಂಗ್ ನ್ಯೂಸ್
22-09-20 12:24 pm Bangalore Correspondent ಕ್ರೈಂ
ಬೆಂಗಳೂರು, ಸೆಪ್ಟಂಬರ್ 22: ಹನ್ನೆರೆಡು ವರ್ಷಗಳ ಹಿಂದೆ ನಗರದಲ್ಲಿ ಎಸಗಿದ್ದ ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿ ಶಂಕಿತ ಉಗ್ರ ಶೋಯಬ್ ಎಂಬಾತನನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ.
2008ರಲ್ಲಿ ಬೆಂಗಳೂರಿನ ಮಡಿವಾಳ ಸೇರಿದಂತೆ ಹಲವು ಕಡೆ ನಡೆದಿದ್ದ ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ಶೋಯಬ್ ಭಾಗಿಯಾಗಿದ್ದ. ಘಟನೆ ನಡೆದಾಗಿನಿಂದಲೂ ಆರೋಪಿ ತಲೆಮರೆಸಿಕೊಂಡಿದ್ದ. ಆರೋಪಿ ಕೇರಳದಲ್ಲಿ ಇರುವ ಬಗ್ಗೆ ಮಾಹಿತಿ ಆಧರಿಸಿ ರಾಷ್ಟ್ರೀಯ ತನಿಖಾ ದಳಗಳ ಜತೆ ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದ್ದು, ಆತನನ್ನು ನಗರಕ್ಕೆ ಕರೆತರಲಾಗುತ್ತಿದೆ ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ.

ಸಿಮಿ ಉಗ್ರ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಶೋಯಬ್ ಕೇರಳದ ಕಲ್ಲಿಕೋಟೆ ಪ್ರದೇಶದ ನಿವಾಸಿಯಾಗಿದ್ದು, ಸರಣಿ ಬಾಂಬ್ ಸ್ಫೋಟದಲ್ಲಿ ಭಾಗಿಯಾಗಿದ್ದು, ಬಳಿಕ ತಲೆಮರೆಸಿಕೊಂಡಿದ್ದಾನೆ. ಆತನ ಬಂಧನಕ್ಕೆ ತನಿಖಾ ಸಂಸ್ಥೆಗಳು ರೆಡ್‌ಕಾರ್ನರ್ ನೋಟಿಸ್ ಸಹ ಹೊರಡಿಸಿದ್ದವು. ಉಗ್ರ ರಿಯಾಜ್ ಭಟ್ಕಳನ ಆಪ್ತ ವಲಯದಲ್ಲಿ ಗುರ್ತಿಸಿಕೊಂಡಿದ್ದ ಶೋಯಬ್, ದೇಶದಲ್ಲಿ ನಡೆದ ವಿಧ್ವಂಸಕ ಕೃತ್ಯಗಳಿಗೆ ಸ್ಫೋಟಕಗಳನ್ನು ಸರಬರಾಜು ಮಾಡುವ ಕೆಲಸದಲ್ಲಿ ತೊಡಗಿದ್ದ ಎನ್ನಲಾಗಿದೆ.
ದೆಹಲಿಯಲ್ಲಿನ ಹವಾಲಾ ಪ್ರಕರಣದಲ್ಲೂ ಈತ ಭಾಗಿಯಾಗಿದ್ದ. 2008ರಲ್ಲಿ ನಡೆದ ಅಹಮದಾಬಾದ್ ಸರಣಿ ಸ್ಫೋಟ ಪ್ರಕರಣದಲ್ಲಿಯೂ ಪಾಲ್ಗೊಂಡಿರುವ ಶಂಕೆಯಿದೆ. ಈ ಬಗ್ಗೆಯೂ ತನಿಖೆ ಮುಂದುವರಿದಿದೆ ಎಂದು ಮೂಲಗಳು ತಿಳಿಸಿವೆ. 2008ರ ಜುಲೈ 25ರಂದು ಮಡಿವಾಳ, ಮೈಸೂರು ರಸ್ತೆ ಸೇರಿದಂತೆ ನಗರದ ಒಂಭತ್ತು ಕಡೆ ಸರಣಿ ಬಾಂಬ್ ಸ್ಫೋಟ ಸಂಭವಿಸಿತ್ತು. ಸ್ಫೋಟದಲ್ಲಿ ಒಬ್ಬರು ಮೃತಪಟ್ಟು 20 ಮಂದಿ ಗಾಯಗೊಂಡಿದ್ದರು.
ಪ್ರಕರಣ ಸಂಬಂಧ ತನಿಖೆ ನಡೆಸಿದ್ದ ಪೊಲೀಸರು ಕೇರಳದ ಪೀಪಲ್ ಡೆಮಾಕ್ರಟಿಕ್ ಪಾರ್ಟಿ ಮುಖಂಡ ಅಬ್ದುಲ್ ನಾಜೀರ್ ಮದನಿ ಸೇರಿದಂತೆ ಹಲವರನ್ನು ಬಂಧಿಸಿತ್ತು. ಶೋಯಬ್ ಜತೆಗೆ ಉತ್ತರಪ್ರದೇಶ ಮೂಲದ ಮತ್ತೂಬ್ಬ ಉಗ್ರನನ್ನೂ ಬಂಧಿಸಲಾಗಿದೆ. ಇವರಿಬ್ಬರೂ ಸೌದಿ ಅರೇಬಿಯಾದಿಂದ ತಿರುವನಂತಪುರಂಗೆ ಆಗಮಿಸುತ್ತಿದ್ದರು. ಇವರು ಲಷ್ಕರ್ ಹಾಗೂ ಇಂಡಿಯನ್ ಮುಜಾಹಿದೀನ್ ಉಗ್ರ ಸಂಘಟನೆಗೆ ಸೇರಿದವರು ಎಂದು ಹೇಳಲಾಗಿದೆ.
29-07-26 01:52 pm
HK News Staffer
ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್...
28-07-26 08:12 pm
ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿ ಶ...
25-07-26 03:06 pm
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
28-07-26 10:28 pm
HK News Desk
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
ಜಾಲತಾಣದಲ್ಲಿ ಜೆನ್ ಜೀಗಳ ಅಬ್ಬರ ; ಕಾಕ್ರೋಚ್ ಬೆನ್ನಲ...
27-07-26 09:48 pm
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
29-07-26 01:53 pm
HK News Staffer
ಹಿಟ್& ರನ್ ಪ್ರಕರಣ ; ಕಾರು ಡಿಕ್ಕಿ ರಭಸಕ್ಕೆ ಎರಡೂ ಕ...
29-07-26 10:40 am
ಪತ್ನಿಗೆ ನೇಣು ಬಿಗಿದು ವಿಡಿಯೋ ಕಾಲ್ನಲ್ಲಿ ಅತ್ತೆ-ಮ...
28-07-26 08:11 pm
Lavanya Murder Case, News: ಲಾವಣ್ಯ ಹತ್ಯೆ ಪ್ರಕರ...
28-07-26 07:07 pm
ವಿಚ್ಛೇದಿತ ಮಹಿಳೆಗೆ ಫೇಸ್ಬುಕ್ನಲ್ಲಿ ಪ್ರೀತಿಯ ನಾಟ...
28-07-26 12:28 pm