ಬ್ರೇಕಿಂಗ್ ನ್ಯೂಸ್
25-03-22 07:27 pm Bengaluru Correspondent ಕ್ರೈಂ
ಬೆಂಗಳೂರು, ಮಾ.25: ಬಾಡಿಗೆ ನೀಡಿದ್ದ ಕಟ್ಟಡದಲ್ಲಿ ಮನೆ ಮಾಲೀಕನಿಗೆ ತಿಳಿಯದೆ ಅನೈತಿಕ ಚಟುವಟಿಕೆ ನಡೆಯುತ್ತಿದ್ದರೆ, ಅದಕ್ಕೆ ಮನೆ ಮಾಲೀಕನನ್ನು ಜವಾಬ್ದಾರಿಯಾಗಿಸಿ ಮಾನವ ಕಳ್ಳ ಸಾಗಣಿಕೆ ಆರೋಪದಲ್ಲಿ ಪ್ರಕರಣ ದಾಖಲಿಸುವಂತಿಲ್ಲ ಎಂದು ಹೈಕೋರ್ಟ್ ತೀರ್ಪು ನೀಡಿದೆ.
ನ್ಯಾಯಾಧೀಶ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಈ ಬಗ್ಗೆ ತೀರ್ಪು ನೀಡಿದ್ದು, ಚಂದ್ರಾ ಲೇಔಟ್ ಪೊಲೀಸರು ದಾಖಲಿಸಿದ್ದ ಎಫ್ಐಆರ್ ಅನ್ನು ವಜಾ ಮಾಡಿದೆ. ನಾಗರಭಾವಿ ನಿವಾಸಿ ಪ್ರಭುರಾಜ್ ಎಂಬವರು ತನ್ನ ವಿರುದ್ಧ ಪೊಲೀಸರು ದಾಖಲಿಸಿದ್ದ ಪ್ರಕರಣವನ್ನು ವಜಾ ಮಾಡುವಂತೆ ಕೋರಿ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು.

ಮಾನವ ಕಳ್ಳಸಾಗಣೆ ನಿಯಂತ್ರಣ ಕಾಯ್ದೆ 3(2) ಬಿ ಪ್ರಕಾರ, ಮನೆ ಮಾಲೀಕ ತನ್ನ ಬಾಡಿಗೆ ಕಟ್ಟಡದಲ್ಲಿ ಅಕ್ರಮ ಚಟುವಟಿಕೆ ನಡೆಯುತ್ತಿರುವುದನ್ನು ತಿಳಿದಿದ್ದರೆ, ಪ್ರಕರಣ ದಾಖಲಿಸಿಕೊಳ್ಳಬಹುದು. ಸದ್ರಿ ಪ್ರಕರಣದಲ್ಲಿ ಮನೆ ಮಾಲೀಕ ತನ್ನ ಬಾಡಿಗೆ ಕಟ್ಟಡದಲ್ಲಿ ಏನು ಆಗುತ್ತಿದೆ ಅನ್ನುವುದರ ಅರಿವು ಹೊಂದಿರಲಿಲ್ಲ. ಅಲ್ಲದೆ, ಮನೆ ಮಾಲೀಕ ಅದೇ ಜಾಗದಲ್ಲಿ ವಾಸವನ್ನೂ ಮಾಡುತ್ತಿರಲಿಲ್ಲ. ಈ ಬಗ್ಗೆ ಪೊಲೀಸರು ಹಾಕಿರುವ ಚಾರ್ಜ್ ಶೀಟ್ ನಲ್ಲಿಯೂ ಉಲ್ಲೇಖಿಸಿದ್ದು, ಇದರಂತೆ ಅರ್ಜಿದಾರ ವ್ಯಕ್ತಿಯ ವಿರುದ್ಧ ಕೇಸು ದಾಖಲಿಸಿದರೆ ಆತನಿಗೆ ವಿನಾಕಾರಣ ಕಿರುಕುಳ ನೀಡಿದಂತಾಗುತ್ತದೆ. ಅಲ್ಲದೆ, ಕಾನೂನಿನ ದುರುಪಯೋಗ ಆಗುತ್ತದೆ ಎಂದು ನ್ಯಾಯಾಧೀಶರು ತೀರ್ಪಿನಲ್ಲಿ ಹೇಳಿದ್ದಾರೆ.
ಅರ್ಜಿದಾರ ವ್ಯಕ್ತಿ ತನ್ನ ಕಟ್ಟಡವನ್ನು 2019ರಲ್ಲಿ ಬಾಡಿಗೆಗೆ ಕೊಟ್ಟಿದ್ದರು. 2020ರಲ್ಲಿ ಅಲ್ಲಿಗೆ ದಾಳಿ ನಡೆಸಿದ್ದ ಪೊಲೀಸರು ವೇಶ್ಯಾವಾಟಿಕೆ ನಡೆಯುತ್ತಿರುವುದನ್ನು ಪತ್ತೆ ಮಾಡಿದ್ದರು. ಆನಂತರ, ಮನೆ ಮಾಲೀಕರ ವಿರುದ್ಧವೂ ಪ್ರಕರಣ ದಾಖಲಿಸಿದ್ದರು. ಇದನ್ನು ಪ್ರಶ್ನಿಸಿ ಮನೆ ಮಾಲೀಕ ಪ್ರಭುರಾಜ್ ಹೈಕೋರ್ಟ್ ಮೆಟ್ಟಿಲೇರಿದ್ದು ತನ್ನ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಪಡಿಸುವಂತೆ ಕೋರಿದ್ದರು.
In an important development, the Karnataka High Court has ruled that if the house owner is not aware of a prostitution racket being run in the premises given on rent, then he is not liable to be prosecuted under the Prevention of Human Trafficking Act.The single bench headed by Justice M. Nagaprasanna gave the verdict on Thursday quashing the FIR in this regard against the house owner Prabhuraj, a resident of Nagarbhavi in Bengaluru.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am