ಬ್ರೇಕಿಂಗ್ ನ್ಯೂಸ್
27-03-22 10:16 pm HK Desk news ಕ್ರೈಂ
ಪಾಟ್ನಾ, ಮಾ.27: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮೇಲೆ ತಮ್ಮ ಸ್ವಗ್ರಾಮದಲ್ಲೇ ಅಪರಿಚಿತ ವ್ಯಕ್ತಿಯೊಬ್ಬ ಹಲ್ಲೆ ನಡೆಸಿದ ಘಟನೆ ನಡೆದಿದ್ದು, ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮುಖ್ಯಮಂತ್ರಿ ಅವರ ತವರು ಕ್ಷೇತ್ರ ಭಕ್ತಿಯಾರ್ ಪುರ್ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, ಕಾರ್ಯಕ್ರಮ ಒಂದರಲ್ಲಿ ಭಾಗವಹಿಸಲು ತೆರಳಿದ್ದ ವೇಳೆ ಭದ್ರತಾ ಸಿಬಂದಿಯ ನಡುವೆ ನುಸುಳಿಕೊಂಡು ಬಂದ ವ್ಯಕ್ತಿಯೊಬ್ಬ ಹಿಂದಿನಿಂದ ಬಂದು ಹಲ್ಲೆ ನಡೆಸಿದ್ದಾನೆ. ಕೂಡಲೇ ಭದ್ರತಾ ಸಿಬಂದಿ ಆಗಂತುಕ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ. ನಿತೀಶ್ ಕುಮಾರ್ ಯಾವುದೇ ಅಪಾಯ ಇಲ್ಲದೆ ಪಾರಾಗಿದ್ದಾರೆ.
ಬಂಧಿತ ವ್ಯಕ್ತಿಯನ್ನು ಶಂಕರ್ ಅಲಿಯಾಸ್ ಚೋಟು ಎಂದು ಗುರುತಿಸಲಾಗಿದ್ದು, ಆತ ಭಕ್ತಿಯಾರ್ ಪುರ್ ಜಿಲ್ಲೆಯ ಮಹಮ್ಮದ್ ಪುರ್ ನಲ್ಲಿ ಸಣ್ಣ ಜುವೆಲ್ಲರಿ ಇಟ್ಟುಕೊಂಡಿದ್ದ. ಯಾಕಾಗಿ ಆತ ಹಲ್ಲೆ ನಡೆಸಲು ಮುಂದಾಗಿದ್ದಾನೆ ಎನ್ನುವುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಸಿಎಂ ನಿತೀಶ್ ಕುಮಾರ್ ಸ್ವಾತಂತ್ರ್ಯ ಹೋರಾಟಗಾರ ಶೀಲಭದ್ರ ಯಾಜಿ ಅವರ ಪುತ್ಥಳಿಗೆ ನಮನ ಸಲ್ಲಿಸುವುದಕ್ಕಾಗಿ ಬಂದಿದ್ದರು. ಸ್ಥಳೀಯ ಆಸ್ಪತ್ರೆಯ ಕಾರ್ಯಕ್ರಮದ ನಿಮಿತ್ತ ಆಗಮಿಸಿದ್ದ ಮುಖ್ಯಮಂತ್ರಿ ಪ್ರತಿಮೆಗೆ ಹೂಮಾಲೆ ಹಾಕುತ್ತಲೇ ಹಿಂದಿನಿಂದ ಬಂದ ಯುವಕ ಅವರ ಬೆನ್ನಿಗೆ ಹೊಡೆದಿದ್ದಾನೆ. ಕೂಡಲೇ ಭದ್ರತಾ ಸಿಬಂದಿ ಯುವಕನನ್ನು ತಳ್ಳಿಕೊಂಡು ಹೋಗಿದ್ದು ಬಂಧಿಸಿದ್ದಾರೆ.
Bihar | A youth tried to attack CM Nitish Kumar during a program in Bakhtiarpur. The accused was later detained by the Police.
— ANI (@ANI) March 27, 2022
(Viral video) pic.twitter.com/FoTMR3Xq8o
Bihar Chief Minister Nitish Kumar was attacked on Sunday by a man during an event in his home turf Bakhtiyarpur in Patna, leading to a massive lapse in the CM’s security system. Sources said that the assailant, believed to be a mentally unstable local resident, was immediately arrested.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am