ಬ್ರೇಕಿಂಗ್ ನ್ಯೂಸ್
31-03-22 08:41 pm Bengaluru Correspondent ಕ್ರೈಂ
ಬೆಂಗಳೂರು, ಮಾ.31: ಆಂಧ್ರಪ್ರದೇಶದ ಶ್ರೀಶೈಲ ಮಲ್ಲಿಕಾರ್ಜುನ ದೇವಸ್ಥಾನದ ಆವರಣದಲ್ಲಿ ಕರ್ನಾಟಕದಿಂದ ತೆರಳಿದ ಕನ್ನಡಿಗ ಭಕ್ತರು ಮತ್ತು ಅಲ್ಲಿನ ಸ್ಥಳೀಯರ ನಡುವೆ ಭಾರೀ ಬೀದಿಕಾಳಗ ನಡೆದಿದ್ದು ಬಾಗಲಕೋಟ ಮೂಲದ ಯುವಕನೊಬ್ಬನಿಗೆ ಚೂರಿ ಇರಿತವಾಗಿದೆ.
ಬುಧವಾರ ಮಧ್ಯರಾತ್ರಿ ಘಟನೆ ನಡೆದಿದ್ದು ನೀರು ಕೇಳುವ ವಿಚಾರದಲ್ಲಿ ಮಾತಿಗೆ ಮಾತು ಬೆಳೆದು ಕಾದಾಟ ನಡೆದಿದೆ. ಈ ವೇಳೆ, ಬಾಗಲಕೋಟೆ ಮೂಲದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಅಲ್ಲದೆ, ಕರ್ನಾಟಕದಿಂದ ತೆರಳಿದ್ದ 50 ಕ್ಕೂ ವಾಹನಗಳಿಗೆ ಕಲ್ಲು ತೂರಿ ಹಾನಿ ಮಾಡಲಾಗಿದೆ. ಎರಡೂ ತಂಡಗಳು ರಸ್ತೆಯಲ್ಲಿ ಹೊಡೆದಾಟ ಮಾಡಿಕೊಂಡಿದ್ದು ಹಲವರಿಗೆ ಗಾಯಗಳಾಗಿವೆ.

ಬೀಳಗಿ ತಾಲೂಕಿನ ಜಾನಮಟ್ಟಿ ಗ್ರಾಮದ ಶ್ರೀಶೈಲ ವಾರಿಮಠ(28) ಎಂಬ ಯುವಕನಿಗೆ ಚೂರಿ ಇರಿತವಾಗಿದ್ದು ಪರಿಸ್ಥಿತಿ ಚಿಂತಾಜನಕವಾಗಿದೆ ಎಂಬ ಮಾಹಿತಿಯಿದೆ. ಹೀಗಾಗಿ ಆತನ ಹುಟ್ಟೂರು ಜಾನಮಟ್ಟಿ ಗ್ರಾಮದ ಮನೆಯಲ್ಲಿ ಆತಂಕದ ವಾತಾವರಣ ನೆಲೆಯಾಗಿದೆ.
ಸದ್ಯ ಶ್ರೀಶೈಲದಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿದ್ದು ಎಲ್ಲ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲಾಗಿದೆ. ಭಕ್ತರ ಸಂಚಾರಕ್ಕೆ ಮಾತ್ರ ಅವಕಾಶ ನೀಡಲಾಗಿದೆ.

ಯುಗಾದಿ ಸಂದರ್ಭದಲ್ಲಿ ಪ್ರತಿ ವರ್ಷ ಕರ್ನಾಟಕದ ಸಾವಿರಾರು ಭಕ್ತರು ಶ್ರೀಶೈಲಕ್ಕೆ ಹೋಗುವ ವಾಡಿಕೆಯಿದೆ. ಹೀಗಾಗಿ ಕಳೆದ ಎರಡು ದಿನಗಳಿಂದ ಕನ್ನಡಿಗ ಭಕ್ತರು ಅಲ್ಲಿಗೆ ತೆರಳಿದ್ದರು. ಚೂರಿ ಇರಿತಕ್ಕೊಳಗಾಗಿರುವ ಯುವಕ ಕಳೆದ ಹದಿನೈದು ವರ್ಷದಿಂದ ಶ್ರೀಶೈಲಕ್ಕೆ ಹೋಗುತ್ತಿದ್ದು ಶ್ರೀಶೈಲ ಮಲ್ಲಿಕಾರ್ಜುನ ಭಕ್ತನಾಗಿದ್ದ. ಯುವಕನ ಹೆಸರನ್ನೂ ಶ್ರೀಶೈಲದ ಹೆಸರಿನಲ್ಲೇ ಹೆತ್ತವರು ಇಟ್ಟಿದ್ದು ಬಾಗಲಕೋಟ, ವಿಜಯಪುರ, ರಾಯಚೂರು ಭಾಗದ ಮಂದಿ ಅತಿ ಹೆಚ್ಚು ಸಂಖ್ಯೆಯಲ್ಲಿ ಶ್ರೀಶೈಲ ಹೋಗುವುದನ್ನು ರೂಢಿಸಿಕೊಂಡಿದ್ದಾರೆ.
ವದಂತಿ ಹರಡಿ ಗಲಾಟೆ, ಯುವಕ ಸುರಕ್ಷಿತ - ಸ್ವಾಮೀಜಿ ಹೇಳಿಕೆ

ಕರ್ನಾಟಕ ಭಕ್ತರು ಹಾಗೂ ಆಂಧ್ರ ಪ್ರದೇಶದ ವ್ಯಾಪಾರಿಗಳ ಮಧ್ಯೆ ಗಲಾಟೆ ನಡೆದಿರುವ ಹಿನ್ನೆಲೆಯಲ್ಲಿ ಘಟನೆ ಕುರಿತು ಶ್ರೀಶೈಲದ ಸ್ವಾಮೀಜಿ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಶ್ರೀಶೈಲ ಜಗದ್ದುರು ಡಾ. ಶ್ರೀ ಚೆನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿ ಹೇಳಿಕೆ ನೀಡಿದ್ದು ನಿನ್ನೆ ರಾತ್ರಿ ಕರ್ನಾಟಕ ಓರ್ವ ಭಕ್ತ ಹಾಗೂ ಸ್ಥಳಿಯ ಹೊಟೇಲ್ ನಡೆಸುತ್ತಿದ್ದ ವ್ಯಕ್ತಿ ನಡುವೆ ಜಗಳವಾಗಿದೆ. ಇದೇ ಜಗಳ ಎರಡು ಸಮುದಾಯಗಳ ನಡುವೆ ಹಬ್ಬಿ ಗಲಾಟೆಯಾಗಿದೆ. ಕರ್ನಾಟಕದ ವ್ಯಕ್ತಿ ಮೇಲೆ ಸ್ಥಳೀಯ ವ್ಯಕ್ತಿ ಹಲ್ಲೆ ಮಾಡಿದ್ದಾನೆ. ಕರ್ನಾಟಕದ ವ್ಯಕ್ತಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಆದರೆ ಗಾಯಾಳು ವ್ಯಕ್ತಿ ಮೃತಪಟ್ಟಿದ್ದಾನೆ ಎಂದು ಸುದ್ದಿ ಹರಡಿದೆ. ಇದೇ ಸುದ್ದಿ ಹರಡಿರುವ ಕಾರಣ ಇಲ್ಲಿ ಗಲಾಟೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಆಬಳಿಕ ನಾವೇ ಸ್ವತಃ ಸ್ಥಳಕ್ಕೆ ಭೇಟಿ ನೀಡಿ ಎಲ್ಲರಿಗೂ ಸಮಾಧಾನ ಮಾಡಿದ್ದೇವೆ. ಸದ್ಯಕ್ಕೆ ಇಲ್ಲಿ ಪರಸ್ಥಿತಿ ಸಹಜವಾಗಿದೆ ಎಂದು ಹೇಳಿಕೆ ನೀಡಿದ್ದಾರೆ.

ಅಲ್ಲದೆ, ಕರ್ನಾಟಕದ ಭಕ್ತರೆಲ್ಲ ಇಲ್ಲಿ ಸುರಕ್ಷಿತವಾಗಿದ್ದಾರೆ. ಕನ್ನಡಿಗರಿಗೆ ಇಲ್ಲಿ ಯಾವುದೇ ತೊಂದರೆ, ಜೀವಭಯ ಇಲ್ಲ. ಗಲಾಟೆಯಲ್ಲಿ ಹಲ್ಲೆಗೊಳಗಾದ ಕರ್ನಾಟಕದ ವ್ಯಕ್ತಿ ಮೃತಪಟ್ಟಿಲ್ಲ. ತಲೆಗೆ ಪೆಟ್ಟಾಗಿರುವ ಕಾರಣ ಆತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಸೊನ್ನಿ ಪೇಟೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ, ಆತನ ಆರೋಗ್ಯ ವಿಚಾರಿಸಿಕೊಂಡು ಬಂದಿದ್ದೇನೆ. ಹೆಚ್ಚಿನ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ ಎಂದು ಸ್ವಾಮೀಜಿ ಹೇಳಿಕೆ ನೀಡಿದ್ದಾರೆ.
Fight erupts at Srisailam in Andhra, 50 cars of kannadigas damaged, youth from Karnataka stabbed.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 05:01 pm
Mangaluru Staffer
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm