ಬ್ರೇಕಿಂಗ್ ನ್ಯೂಸ್
21-04-22 06:46 pm HK Desk news ಕ್ರೈಂ
ಹುಬ್ಬಳ್ಳಿ, ಎ.21: ಹುಬ್ಬಳ್ಳಿಯ ಗಲಭೆ ಪ್ರಕರಣದಲ್ಲಿ ಮಾಸ್ಟರ್ ಮೈಂಡ್ ಎನ್ನಲಾದ, ತಲೆಮರೆಸಿಕೊಂಡು ತಿರುಗಾಡುತ್ತಿದ್ದ ಮೌಲವಿ ವಾಸಿಂ ಪಠಾಣ್ ಎಂಬಾತನನ್ನ ಕೊನೆಗೂ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು ನಗರದಲ್ಲಿ ಬಂಧಿಸಿದ ಬಳಿಕ ಘಟನೆ ಬಗ್ಗೆ ಪ್ರಕರಣ ದಾಖಲಾಗಿರುವ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಗೆ ಕರೆದುಕೊಂಡು ಬರಲಾಗಿದೆ. ಠಾಣೆಗೆ ಕಲ್ಲು ತೂರಿ ದೊಂಬಿ ನಡೆಸಲು ಉದ್ರಿಕ್ತ ಜನರಿಗೆ ಪ್ರೇರಣೆ ನೀಡಿದ್ದ ಎಂಬ ಆರೋಪದಲ್ಲಿ ತನಿಖೆ ನಡೆಸಲಾಗುತ್ತಿದೆ. ಇದಕ್ಕೂ ಮುನ್ನ ನಿಗೂಢ ಜಾಗದಲ್ಲಿದ್ದುಕೊಂಡು ವಾಸಿಂ ಪಠಾಣ್ ವಿಡಿಯೋ ಬಿಡುಗಡೆ ಮಾಡಿದ್ದ.


ಇಸ್ಲಾಂ ಧರ್ಮಕ್ಕೆ ಅಪಮಾನ ಮಾಡಿದ ಬಗ್ಗೆ ಮುಸ್ಲಿಂ ಯುವಕರಲ್ಲಿ ಅಸಮಾಧಾನ ಇತ್ತು. ಈ ಬಗ್ಗೆ ದೂರು ನೀಡಲು ಯುವಕರು ಜಮಾಯಿಸಿದ್ದರು. ಜನರ ಜೊತೆಗೆ ಮಾತನಾಡಲು ಪೊಲೀಸರು ನನ್ನನ್ನು ಕರೆಸಿದ್ದರು. ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆ ಪೊಲೀಸರೇ ಜೀಪ್ ಹತ್ತಿ ಜನರಿಗೆ ತಿಳಿ ಹೇಳಲು ಹೇಳಿದರು. ನಾನು ವಾಹನದ ಮೇಲೆ ಹತ್ತಿದಾಗ ಅಲ್ಲಿ ಮೈಕ್ ಇರಲಿಲ್ಲ.

ಹೀಗಾಗಿ ಕೈ ಸನ್ನೆ ಮಾಡುವ ಮೂಲಕ ಜನರಲ್ಲಿ ಶಾಂತಿ ಕಾಪಾಡಲು ಹೇಳಿದ್ದೆ. ಆದರೆ ನಾನೇ ಒಟ್ಟು ಘಟನೆಯ ಪಿತೂರಿದಾರ ಎಂದು ಬಿಂಬಿಸಲಾಗುತ್ತಿದೆ. ನಾನು ಘಟನೆಯ ಮಾಸ್ಟರ್ ಮೈಂಡ್ ಅಲ್ಲ. ನನ್ನ ವಿರುದ್ಧ ಷಡ್ಯಂತ್ರ ರೂಪಿಸಲಾಗಿದೆ. ಹುಬ್ಬಳ್ಳಿಯ ವಾತಾವರಣ ಹದಗೆಡಿಸುವ ಉದ್ದೇಶ ನನ್ನದಾಗಿರಲಿಲ್ಲ. ಪೊಲೀಸ್ ಇಲಾಖೆಯ ಬಗ್ಗೆ ನನಗೆ ಭರವಸೆ ಇದೆ. ಪೊಲೀಸರ ಮುಂದೆ ಹಾಜರಾಗಿ ನನ್ನ ಹೇಳಿಕೆ ಕೊಡುತ್ತೇನೆ. ಸತ್ಯಕ್ಕೆ ನ್ಯಾಯ ಸಿಗುತ್ತದೆ ಎಂದು ನಂಬಿದ್ದೇನೆ ಎಂದು ವಿಡಿಯೋದಲ್ಲಿ ವಾಸಿಂ ಪಠಾಣ್ ಹೇಳಿಕೆ ನೀಡಿದ್ದರು.
Karnataka Police on Wednesday arrested the main accused in the Hubballi stone pelting case. The accused, identified as Waseem Pathan, is a local Maulvi allegedly involved in violence that broke out on Saturday.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm