ಬ್ರೇಕಿಂಗ್ ನ್ಯೂಸ್
24-09-20 04:02 pm Udupi Correspondent ಕ್ರೈಂ
ಉಡುಪಿ, ಸೆಪ್ಟಂಬರ್ 24: ಉಡುಪಿ ನಗರ ಭಾಗದ ಹಿರಿಯಡ್ಕದಲ್ಲಿ ಹಾಡುಹಗಲೇ ರೌಡಿಶೀಟರ್ ಒಬ್ಬನನ್ನು ಕಡಿದು ಕೊಲೆ ಮಾಡಲಾಗಿದೆ. ಕೊಲೆಯಾದ ಯುವಕನನ್ನು ಕಿಶನ್ ಹೆಗ್ಡೆ ಇನ್ನಾ ಎಂದು ಗುರುತಿಸಲಾಗಿದೆ.
ನಗರದ ಹೃದಯ ಭಾಗದಲ್ಲೇ ಜನರು ನೋಡನೋಡುತ್ತಿದ್ದಂತೆ ಘಟನೆ ನಡೆದಿದ್ದು ಯುವಕನ ಕತ್ತು ಕತ್ತರಿಸಿ ಭೀಕರವಾಗಿ ಹತ್ಯೆ ಮಾಡಲಾಗಿದೆ. ಕಿಶನ್ ಹೆಗ್ಡೆ ತನ್ನ ಗೆಳೆಯನ ಜೊತೆ ಕಾರಿನಲ್ಲಿ ಕುಳಿತಿದ್ದಾಗ ಉಡುಪಿ ಕಡೆಯಿಂದ ಬಂದ ಇನ್ನೋವ ಮತ್ತು ರಿಡ್ಜ್‌ಕಾರಿನಲ್ಲಿ 8 ಮಂದಿ ಬಂದಿದ್ದಾರೆ. ಸ್ಥಳದಲ್ಲಿ ಕೆಲಕಾಲ ವಾಗ್ವಾದ ನಡೆದು ಕಿಶನ್ ಹೆಗ್ಡೆ ಕಾರಿನಿಂದ ಕೆಳಗಿಳಿಯುತ್ತಿದ್ದಂತೆ ಯುವಕರ ತಂಡ ಮಾರಕಾಸ್ತ್ರಗಳಿಂದ ದಾಳಿ ಮಾಡಿದೆ. ತಲೆಯ ಹಿಂಭಾಗಕ್ಕೆ ಮತ್ತು ಕುತ್ತಿಗೆಗೆ ಬಲವಾದ ಪೆಟ್ಟಾಗಿದೆ. ಕಿಶನ್ ಹೆಗ್ಡೆ ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಸ್ಥಳೀಯರು ಪೊಲೀಸರಿಗೆ ವಿವರ ನೀಡಿದ್ದಾರೆ.


ಕಿಶನ್ ಹೆಗ್ಡೆ ರಿಯಲ್ ಎಸ್ಟೇಟ್ ಉದ್ಯಮ ನಡೆಸುತ್ತಿದ್ದ ಎನ್ನಲಾಗಿದೆ. ಹಿರಿಯಡ್ಕ ಪರಿಸರದಲ್ಲಿ ಪ್ರಭಾವ ಬೆಳೆಸಿಕೊಂಡಿದ್ದ ಅಪರಾಧ ಹಿನ್ನೆಲೆ ಹೊಂದಿದ್ದ. ಪೂರ್ವ ದ್ವೇಷದಿಂದ ಎರಡು ಕಾರುಗಳಲ್ಲಿ ಹಿಂಬಾಲಿಸಿಕೊಂಡು ಬಂದಿದ್ದ ತಂಡ ಕಿಶನ್ ಹೆಗ್ಡೆಯ ಕಾರನ್ನು ಅಡ್ಡಗಟ್ಟಿ ಕುತ್ತಿಗೆಯನ್ನು ಕತ್ತರಿಸಿದ್ದಾರೆ. ಕಿಶನ್ ಸ್ಥಳದಲ್ಲೇ ಸಾವು ಕಂಡಿದ್ದಾನೆ. ಕೊಲೆಯ ಹಿಂದೆ ಯಾರಿದ್ದಾರೆ, ದ್ವೇಷ ಏನಿತ್ತು ಎಂಬುದು ತಿಳಿದುಬಂದಿಲ್ಲ.
ಸ್ಥಳಕ್ಕೆ ಹಿರಿಯಡ್ಕ ಪೊಲೀಸ್ ಠಾಣಾ ಸಿಬ್ಬಂದಿಗಳು ಭೇಟಿ, ಬಂದೋಬಸ್ತ್ ಕೈಗೊಂಡಿದ್ದಾರೆ. ಸ್ಥಳದಲ್ಲಿ ನೂರಾರು ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಮೃತದೇಹ ಮಣಿಪಾಲ ಆಸ್ಪತ್ರೆಗೆ ರವಾನಿಸಲಾಗಿದೆ.
25-09-26 04:49 pm
HK News Staffer
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
27-09-26 10:59 am
HK News Desk
ಸರ್ವಕಾಲೇಜು ವಿದ್ಯಾರ್ಥಿ ಸಂಘದ ಪದಗ್ರಹಣ ; ವಿದ್ಯಾರ್...
26-09-26 08:05 pm
ಸೌಜನ್ಯ ಪ್ರಕರಣದ ಮರು ತನಿಖೆ ; ಹಿಂದಿನ ತನಿಖಾ ಲೋಪಗಳ...
26-09-26 03:35 pm
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ವಿಚಾರಣೆ ; ಪ...
26-09-26 11:04 am
ಮೈಸೂರು ದಸರಾಕ್ಕೆ ಕರಾವಳಿಯ ಕಂಬಳದ ಮೆರುಗು ; ಅ.18-1...
25-09-26 07:31 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm