ಬ್ರೇಕಿಂಗ್ ನ್ಯೂಸ್
25-04-22 09:53 am HK Desk news ಕ್ರೈಂ
ಬೆಳ್ತಂಗಡಿ, ಎ.25 ಪರಿಶಿಷ್ಟ ಜನಾಂಗದ ಮಹಿಳೆಯನ್ನು ಅದೇ ಸಮುದಾಯದ ತಂಡವೊಂದು ಅರೆ ಬೆತ್ತಲೆಗೊಳಿಸಿ ಹಲ್ಲೆಗೈದ ಘಟನೆ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ನಡೆದಿದ್ದು ಘಟನೆ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಮೂವರು ಮಹಿಳೆಯರು ಸೇರಿ ಒಂಬತ್ತು ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.
ಜಾಗದ ತಕರಾರಿನ ವಿಚಾರದಲ್ಲಿ ಹಲ್ಲೆ ಕೃತ್ಯ ನಡೆದಿದ್ದು ಉಜಿರೆ ಗುರಿಪಳ್ಳ ನಿವಾಸಿಗಳಾದ ಸಂದೀಪ್, ಸಂತೋಷ್, ಗುಲಾಬಿ, ಕುಸುಮ, ಸುಗುಣ, ಲೋಕಯ್ಯ, ಅನಿಲ್, ಲಲಿತ, ಚೆನ್ನಕೇಶವ ಎಂಬವರ ವಿರುದ್ಧ ಐಪಿಸಿ 143, 147, 148, 323, 324, 504, 354, 354(B), 506, 149 ಅಡಿ ಎಫ್ ಐಆರ್ ದಾಖಲಾಗಿದೆ.
ಬಿಜೆಪಿ ತಾಲೂಕು ಘಟಕದ ಎಸ್.ಟಿ. ಮೋರ್ಚಾ ಅಧ್ಯಕ್ಷ ಸೇರಿ ಹಲವರು ಸೇರಿ ಕೃತ್ಯ ನಡೆಸಿದ್ದಾಗಿ ಆರೋಪಿಸಲಾಗಿದೆ. ಅರೆಬೆತ್ತಲೆ ಮಾಡಿ ಹಲ್ಲೆ ನಡೆಸಿದ್ದಲ್ಲದೆ, ಕೃತ್ಯದ ವಿಡಿಯೋ ಮಾಡಿದ ಬಗ್ಗೆಯೂ ದೂರಿನಲ್ಲಿ ತಿಳಿಸಲಾಗಿದೆ.

ಹಲ್ಲೆಗೊಳಗಾದ ಮಹಿಳೆಯ ಕುಟುಂಬಸ್ಥರು ಸರಕಾರಿ ಜಾಗದಲ್ಲಿ ಮನೆ ನಿರ್ಮಿಸುವುದಕ್ಕಾಗಿ ಸಲ್ಲಿಸಿದ್ದ 94ಸಿ ಅರ್ಜಿಯ ವಿಚಾರದಲ್ಲಿ ಎ.19 ರಂದು ಪಂಚಾಯತ್ ಪಿಡಿಓ ಮತ್ತು ಗ್ರಾಮ ಲೆಕ್ಕಾಧಿಕಾರಿ ಸ್ಥಳಕ್ಕೆ ಬಂದಿದ್ದರು.
ಈ ಸಂದರ್ಭ ಜಾಗದ ವಿಚಾರದಲ್ಲಿ ಇನ್ನೊಂದು ತಂಡ ತಕರಾರು ತೆಗೆದಿದ್ದು ಅಧಿಕಾರಿಗಳ ಕೆಲಸಕ್ಕೆ ಅಡ್ಡಿ ಪಡಿಸಿತ್ತು. ಇದರಿಂದ ಅಳತೆಗೆ ಬಂದಿದ್ದ ಅಧಿಕಾರಿಗಳು ತಮ್ಮಿಂದ ಈ ಕಾರ್ಯ ಸಾಧ್ಯವಿಲ್ಲ ಎಂದು ಬಿಟ್ಟು ಹೋಗಿದ್ದರು. ಅಧಿಕಾರಿ ಸಿಬಂದಿ ತೆರಳಿದ ಬಳಿಕ ಸುರೇಖಾ ಎಂಬ ಮಹಿಳೆ ಧರಿಸಿದ್ದ ನೈಟಿಯನ್ನು ಹಿಡಿದೆಳೆದು ಹಲ್ಲೆ ನಡೆಸಿದ್ದಾಗಿ ದೂರಲಾಗಿದೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
9 booked for stripping and assaulting tribal woman in Dakshina Kannada.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm