ಪಂಚಾಯತ್ ರಾಜ್ ಇಲಾಖೆಯಲ್ಲಿ ಮತ್ತೊಂದು ಭ್ರಷ್ಟಾಚಾರ ! ಕೇಂದ್ರದ ಸಾವಿರಾರು ಕೋಟಿ ಲೂಟಿಗೈದ ಐಎಎಸ್‌ ಅಧಿಕಾರಿಗಳು ! ನಿವೃತ್ತ ಮುಖ್ಯ ಕಾರ್ಯದರ್ಶಿ ವಿಜಯಭಾಸ್ಕರ್, ಅಮಿತ್ ಪ್ರಸಾದ್ ಸೇರಿ ನಾಲ್ವರ ವಿರುದ್ಧ ತನಿಖೆಗೆ ಆದೇಶ 

27-04-22 11:15 pm       Bangalore Correspondent   ಕ್ರೈಂ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಮತ್ತೊಂದು ಭಾರೀ ಭ್ರಷ್ಟಾಚಾರ ಬೆಳಕಿಗೆ ಬಂದಿದೆ. ರಾಜ್ಯದ ನಾಲ್ವರು ಹಿರಿಯ ಐಎಎಸ್ ಅಧಿಕಾರಿಗಳ ಅವ್ಯವಹಾರದಲ್ಲಿ ಭಾಗಿಯಾಗಿದ್ದು ಪ್ರಕರಣದಲ್ಲಿ ಎಫ್ಐಆರ್ ದಾಖಲಿಸಿ ತನಿಖೆ ನಡೆಸಲು ವಿಶೇಷ ಸಿವಿಲ್ ನ್ಯಾಯಾಲಯ ಭ್ರಷ್ಟಾಚಾರ ನಿಗ್ರಹ ದಳಕ್ಕೆ ಆದೇಶ ಮಾಡಿದೆ. 

ಬೆಂಗಳೂರು, ಎ.28 : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಮತ್ತೊಂದು ಭಾರೀ ಭ್ರಷ್ಟಾಚಾರ ಬೆಳಕಿಗೆ ಬಂದಿದೆ. ರಾಜ್ಯದ ನಾಲ್ವರು ಹಿರಿಯ ಐಎಎಸ್ ಅಧಿಕಾರಿಗಳ ಅವ್ಯವಹಾರದಲ್ಲಿ ಭಾಗಿಯಾಗಿದ್ದು ಪ್ರಕರಣದಲ್ಲಿ ಎಫ್ಐಆರ್ ದಾಖಲಿಸಿ ತನಿಖೆ ನಡೆಸಲು ವಿಶೇಷ ಸಿವಿಲ್ ನ್ಯಾಯಾಲಯ ಭ್ರಷ್ಟಾಚಾರ ನಿಗ್ರಹ ದಳಕ್ಕೆ ಆದೇಶ ಮಾಡಿದೆ. 

ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಭಾಗಿತ್ವದಡಿ ನಡೆಯುವ ಮಹತ್ವದ ಯೋಜನೆಯಲ್ಲಿ ಗೋಲ್ಮಾಲ್ ನಡೆದಿದ್ದು ಬರೋಬ್ಬರಿ 3405 ಕೋಟಿ ರೂಪಾಯಿ ದುರುಪಯೋಗ ಆಗಿರುವ ಬಗ್ಗೆ ಆರೋಪ ಕೇಳಿಬಂದಿದೆ.‌ ಗ್ರಾಮೀಣ ಭಾಗದ ಜನರ ಕುಡಿಯುವ ನೀರು ಪೂರೈಸುವ ಯೋಜನೆ ಇದಾಗಿದ್ದು ಪ್ರತಿ ವರ್ಷ ಸಾವಿರಾರು ಕೋಟಿ ರೂಪಾಯಿ ಅನುದಾನ ಕೇಂದ್ರ ಸರ್ಕಾರದಿಂದ ಬಿಡುಗಡೆಯಾಗುತ್ತದೆ. ಕೇಂದ್ರ ಸರಕಾರದ ಶೇ. 75 ಮತ್ತು ರಾಜ್ಯ ಸರ್ಕಾರದ ಶೇ. 25ರ ಅನುದಾನದ ಯೋಜನೆ ಇದಾಗಿದೆ. ಕೇಂದ್ರದಿಂದ ಬಿಡುಗಡೆಯಾದ ಹಣವನ್ನು ಐಎಎಸ್ ಅಧಿಕಾರಿಗಳು ಸೇರಿ ಲೂಟಿ ಹೊಡೆದಿದ್ದಾರೆಂಬ ಗಂಭೀರ ಆರೋಪದ ಬಗ್ಗೆ ಎಸಿಬಿ ತನಿಖೆಗೆ ಆದೇಶ ನೀಡಲಾಗಿದೆ.‌ ಈಮೂಲಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳ ಬಂಡವಾಳ ಮತ್ತೊಮ್ಮೆ ಬೆಳಕಿಗೆ ಬಂದಿದೆ.

RDPR Karnataka Recruitment | Recruitment 2020 | Karnataka

ಆರು ಮಂದಿ ಐಎಎಸ್ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಿ, ನಾಲ್ಕು ತಿಂಗಳಲ್ಲಿ ಕೋರ್ಟಿಗೆ ವರದಿ ಸಲ್ಲಿಸಬೇಕು ಎಂದು ಭ್ರಷ್ಟಾಚಾರ ನಿಗ್ರಹ ದಳಕ್ಕೆ ಕೋರ್ಟ್ ಖಡಕ್ ಸೂಚನೆ ನೀಡಿದೆ.‌ ಬೆಂಗಳೂರಿನ 23ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ವಿಶೇಷ ನ್ಯಾಯಾಲಯ ನ್ಯಾಯಮೂರ್ತಿ ಕೆ. ಲಕ್ಷ್ಮಿನಾರಾಯಣ ಭಟ್ ಆದೇಶ ನೀಡಿದ್ದಾರೆ. 

Finally, ACB registers FIR against three police officers facing bribery  charges - News Karnataka

ಸಿಆರ್ ಪಿಸಿ ಸೆಕ್ಷನ್ 202 (1)ರ ಅಡಿ ಎಫ್ಐಆರ್ ದಾಖಲಿಸಿ ತನಿಖೆ ನಡೆಸಬೇಕು. ಡಿವೈಎಸ್ಪಿಗಿಂತ ಹೆಚ್ಚಿನ ದರ್ಜೆಯ ಅಧಿಕಾರಿಯಿಂದ ತನಿಖೆ ನಡೆಸಬೇಕು ಎಂದು ಕೋರ್ಟ್ ಆದೇಶದಲ್ಲಿ ತಿಳಿಸಿದೆ. 

ಆರೋಪಿ 1 ರಾಜ್ಯ ಸರಕಾರದ ಹೆಚ್ಚುವರಿ ಕಾರ್ಯದರ್ಶಿ ಅಮಿತ್ ಪ್ರಸಾದ್, ಆರೋಪಿ ಎರಡು - ಡಾ. ಇ.ವಿ ರಮಣರೆಡ್ಡಿ, ಎಸಿಎಸ್, ಇಂಡಸ್ಟ್ರೀಸ್ & ಕಾಮರ್ಸ್, ಆರೋಪಿ ಮೂರನೇ ಹೆಸರಾಗಿ ರಾಜ್ಯ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ನಾಲ್ಕನೇ ಆರೋಪಿ ಆರ್ ಡಿಪಿಆರ್ ಪದನಿಮಿತ್ತ ಅಧಿಕಾರಿ ಡಾ.ಬೋರೇಗೌಡ, ಐದನೇ ಆರೋಪಿ ಆರ್ ಡಿಪಿಆರ್ ಇಲಾಖೆಯ ಡೆಪ್ಯೂಟಿ ಸೆಕ್ರೆಟರಿ ರಾಮಕೃಷ್ಣ , ಆರನೇ ಆರೋಪಿ ಆರ್ ಡಿಪಿಆರ್ ಅಧಿಕಾರಿ ಸೀಲಮ್ ಗಿರಿ ಅವರನ್ನು ಹೆಸರಿಸಲಾಗಿದೆ.

Bengaluru Big corruption of thousand of crores exposed in which IAS officials are found involved in Panchyath Raj department.