ಬ್ರೇಕಿಂಗ್ ನ್ಯೂಸ್
01-05-22 01:33 pm Udupi Correspondent ಕ್ರೈಂ
ಉಡುಪಿ, ಮೇ 1: ಎಸ್ಸಿಡಿಸಿಸಿ ಬ್ಯಾಂಕಿನ ಮಾಜಿ ನಿರ್ದೇಶಕ ಕಿಶನ್ ಹೆಗ್ಡೆ ಕೊಳ್ಕೆಬೈಲ್ ವಿರುದ್ಧ ಅವರ ಖಾಸಗಿ ಆಸ್ತಿ ವಿಚಾರದ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಬ್ಯಾಂಕಿನ ವತಿಯಿಂದ ಪತ್ರಿಕೆಗಳಲ್ಲಿ ಜಾಹೀರಾತು ನೀಡಿದ್ದನ್ನು ಪ್ರಶ್ನಿಸಿ ಉಡುಪಿ ಜೆಎಂಎಫ್ ಕೋರ್ಟಿನಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಾಗಿದೆ. ಇದರಂತೆ ಜಾಹೀರಾತು ಪ್ರಕಟಿಸಿದ್ದ ನಾಲ್ಕು ಪತ್ರಿಕೆಗಳ ಸಂಪಾದಕರು ಮತ್ತು ಬ್ಯಾಂಕಿನ ಆಡಳಿತ ಮಂಡಳಿಯ ಎಲ್ಲ ನಿರ್ದೇಶಕರು, ಅಧ್ಯಕ್ಷ ಹಾಗೂ ಬ್ಯಾಂಕಿನ ಸಿಇಓ ಸೇರಿ ಒಟ್ಟು 23 ಮಂದಿ ಮೇ 27ರಂದು ಉಡುಪಿ ಸಿವಿಲ್ ಮತ್ತು ಜೆಎಂಎಫ್ ನ್ಯಾಯಾಲಯಕ್ಕೆ ಖುದ್ದು ಹಾಜರಾಗಲು ಸಮನ್ಸ್ ಜಾರಿಯಾಗಿದೆ.
ಕಿಶನ್ ಹೆಗ್ಡೆ ಕೊಳ್ಕೆಬೈಲ್ ಹಾಗೂ ಅವರ ತಮ್ಮನ ನಡುವೆ ಕುಟುಂಬದ ಆಸ್ತಿ ವಿಚಾರದಲ್ಲಿ ಕಲಹ ಇತ್ತು. ಇದೇ ನೆಪದಲ್ಲಿ ಎಸ್ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷ ರಾಜೇಂದ್ರ ಕುಮಾರ್ ಮತ್ತು ಆಡಳಿತ ವರ್ಗ ಕಿಶನ್ ಹೆಗ್ಡೆ ಜೊತೆಗಿನ ಹಳೆ ವೈಷಮ್ಯದಿಂದಾಗಿ ಕುಟುಂಬ ಕಲಹದ ವಿಚಾರವನ್ನು ಪತ್ರಿಕೆಗಳಲ್ಲಿ ಜಾಹೀರಾತು ನೀಡಿ ಸೇಡು ತೀರಿಸಿತ್ತು. ಜಾಹೀರಾತು ಪ್ರಕಟಿಸಿದ್ದಕ್ಕಾಗಿ ಉದಯವಾಣಿ, ವಿಜಯಕರ್ನಾಟಕ, ವಿಜಯವಾಣಿ, ಹೊಸದಿಗಂತ ಪತ್ರಿಕೆಗಳ ಸಂಪಾದಕರು ಮತ್ತು ಸಿಇಓಗಳಿಗೆ ಸಮನ್ಸ್ ಜಾರಿ ಮಾಡಲಾಗಿದೆ. ಮೇ 27ರಂದು ಕೋರ್ಟಿಗೆ ಖುದ್ದಾಗಿ ಅಥವಾ ವಕೀಲರ ಮೂಲಕ ಹಾಜರಾಗಿ ಜಾಹೀರಾತಿಗೆ ಸಂಬಂಧಿಸಿದಂತೆ ದಾಖಲೆಗಳನ್ನು ನೀಡುವಂತೆ ಸೂಚಿಸಲಾಗಿದೆ.

ಇದರ ನಡುವೆ, ಎಸ್ಸಿಡಿಸಿಸಿ ಬ್ಯಾಂಕಿನ ಸಿಇಓ ರವೀಂದ್ರ ಅವರಲ್ಲಿ ಜಾಹೀರಾತು ಬಗ್ಗೆ ವಕೀಲರ ನೋಟೀಸ್ ನೀಡಿ ಸ್ಪಷ್ಟನೆ ಕೇಳಲಾಗಿತ್ತು. ಬ್ಯಾಂಕಿನ ಆಡಳಿತ ಮಂಡಳಿ ನಿರ್ಣಯವೆಂದು ಸ್ಪಷ್ಟನೆ ನೀಡಿದ್ದರಿಂದ ಬ್ಯಾಂಕಿನ ಅಧ್ಯಕ್ಷ ರಾಜೇಂದ್ರ ಕುಮಾರ್ ಸೇರಿದಂತೆ 18 ಮಂದಿ ನಿರ್ದೇಶಕರು ಹಾಗೂ ಸಿಇಓ ರವೀಂದ್ರ ಅವರನ್ನು ಆರೋಪಿಯನ್ನಾಗಿಸಿ ಕ್ರಿಮಿನಲ್ ಕೇಸು ಮಾಡಲಾಗಿದೆ. ಪತ್ರಿಕೆಯ ಸಂಪಾದಕರನ್ನು ಮೊದಲ ನಾಲ್ಕು ಆರೋಪಿಗಳೆಂದು ಹೆಸರಿಸಿದ್ದು 5ನೇ ಆರೋಪಿಯಾಗಿ ಬ್ಯಾಂಕಿನ ಅಧ್ಯಕ್ಷರನ್ನು ಹಾಗೂ ಉಳಿದ ಎಲ್ಲ ನಿರ್ದೇಶಕರನ್ನು ಆನಂತರದ ಆರೋಪಿಗಳಾಗಿ ತೋರಿಸಲಾಗಿದೆ. ಎಲ್ಲ 23 ಮಂದಿಯ ವಿರುದ್ಧವೂ ಸೆಕ್ಷನ್ 499 ಮತ್ತು 500 ಅಡಿ ಉದ್ದೇಶಪೂರ್ವಕ ತೇಜೋವಧೆ ಎಸಗಿದ್ದಾಗಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ.
Udupi Criminal case lodged against SCDCC Bank Rajendra Kumar and 4 editors of Newspapers for deformation article against former SCDCC bank Manager Kishan Hedge. A criminal case has been lodged against 23 persons in connection to this case.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm