ಯುವತಿಗೆ ಡ್ರಗ್ಸ್ ನೀಡಿ ಮುಂಬೈ, ಪುಣೆಗೆ ಒಯ್ದು ಅತ್ಯಾಚಾರ ; ವಿಡಿಯೋ ಮಾಡಿ ಬ್ಲಾಕ್ಮೇಲ್, ಹಣ ಕಿತ್ತುಕೊಂಡು ವಂಚನೆ, ಉಳ್ಳಾಲದ ಖದೀಮ ಸೆರೆ 

13-05-22 10:13 pm       Mangalore Correspondent   ಕ್ರೈಂ

ಮೂಡುಬಿದ್ರಿ ನಿವಾಸಿ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ವಿವಿಧೆಡೆ ಕರೆದೊಯ್ದು ಅತ್ಯಾಚಾರ ನಡೆಸಿದ್ದಲ್ಲದೆ, ಆಕೆಯಿಂದ ಹಣ ಸುಲಿಗೆ ಮಾಡಿದ ಪ್ರಕರಣದಲ್ಲಿ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. 

ಮಂಗಳೂರು, ಮೇ 13 : ಮೂಡುಬಿದ್ರಿ ನಿವಾಸಿ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ವಿವಿಧೆಡೆ ಕರೆದೊಯ್ದು ಅತ್ಯಾಚಾರ ನಡೆಸಿದ್ದಲ್ಲದೆ, ಆಕೆಯಿಂದ ಹಣ ಸುಲಿಗೆ ಮಾಡಿದ ಪ್ರಕರಣದಲ್ಲಿ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. 

ತೊಕ್ಕೊಟ್ಟು ಸಮೀಪದ ಪೆರ್ಮನ್ನೂರು ಗ್ರಾಮದ ನಿವಾಸಿ ಶಾನ್ ನವಾಸ್(36) ಬಂಧಿತ. ಆರೋಪಿ ಯುವತಿಗೆ ಮಾದಕ ವಸ್ತುಗಳನ್ನು ಕೊಟ್ಟು ಲೈಂಗಿಕವಾಗಿ ಬಳಸಿಕೊಂಡಿದ್ದಲ್ಲದೆ, ಆಕೆಯ ನಗ್ನ ಚಿತ್ರಗಳನ್ನು ಮೊಬೈಲ್ ನಲ್ಲಿ ಚಿತ್ರೀಕರಿಸಿ ನಂತರ ಹಣಕ್ಕಾಗಿ ಬೆದರಿಸಿ ರೂ.1,50,000 ಸುಲಿಗೆ ಮಾಡಿದ್ದನು. ಈ ವೇಳೆ, ಯುವತಿಯನ್ನು ಪುಣೆ, ಮುಂಬೈನ ವಿವಿಧ ಲಾಡ್ಜ್ ಗಳಿಗೆ ಕರೆದುಕೊಂಡು ಹೋಗಿ ಅತ್ಯಾಚಾರ ನಡೆಸಿದ್ದಾನೆಂದು ಯುವತಿ ನೀಡಿದ ದೂರಿನಂತೆ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿ ಪತ್ತೆಗಾಗಿ ಪ್ರಕರಣವನ್ನು ಮಂಗಳೂರು ನಗರ ಅಪರಾಧ ವಿಭಾಗ(ಸಿಸಿಬಿ) ಕ್ಕೆ ವರ್ಗಾಯಿಸಲಾಗಿತ್ತು.

ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಹೆಚ್ಚಿನ ತನಿಖೆಗಾಗಿ 7 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ಆರೋಪಿ ಈ ಹಿಂದೆ 2019 ಹಾಗೂ 2020 ರಲ್ಲಿ ಮಂಗಳೂರು ನಗರದ ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾದ ಎರಡು ಮಾದಕ ವಸ್ತು ಮಾರಾಟದ ಪ್ರಕರಣದಲ್ಲಿ ಭಾಗಿಯಾಗಿದ್ದ.

Mangalore One arrested from ullal for rape by giving drugs to girl and blackmailing.