ಬ್ರೇಕಿಂಗ್ ನ್ಯೂಸ್
26-09-20 11:50 am Udupi Correspondent ಕ್ರೈಂ
ಉಡುಪಿ, ಸೆಪ್ಟಂಬರ್ 26: ಹಿರಿಯಡ್ಕದಲ್ಲಿ ಎರಡು ದಿನಗಳ ಹಿಂದೆ ನಡೆದ ಕಿಶನ್ ಹೆಗ್ಡೆ ಕೊಲೆ ಪ್ರಕರಣದಲ್ಲಿ ಮಂಗಳೂರಿನ ರೌಡಿಶೀಟರ್ ಕೋಡಿಕೆರೆ ಮನೋಜ್ ಮತ್ತಾತನ ತಂಡ ನಡೆಸಿದ್ದಾಗಿ ಪೊಲೀಸರು ಖಚಿತಪಡಿಸಿದ್ದಾರೆ.
ಆರೋಪಿಗಳು ಕೃತ್ಯ ನಡೆಸಿ, ಪರಾರಿಯಾಗಿದ್ದ ಇನೋವಾ ಕಾರು ಕಾರ್ಕಳ ಸಮೀಪದ ಇರ್ವತ್ತೂರಿನಲ್ಲಿ ಪತ್ತೆಯಾಗಿತ್ತು. ಈ ಮಾಹಿತಿ ಆಧರಿಸಿ ಬೆನ್ನತ್ತಿದ ಪೊಲೀಸರು ಕೋಡಿಕೆರೆ ಟೀಮಿನ ಬಗ್ಗೆ ಸುಳಿವು ಪಡೆದಿದ್ದಾರೆ.
ಕಿಶನ್ ಹೆಗ್ಡೆ ಅಂದು ಮಂಗಳೂರಿನ ದಿವ್ಯರಾಜ್ ಶೆಟ್ಟಿ ಹಾಗೂ ಹರಿಪ್ರಸಾದ್ ಶೆಟ್ಟಿ ಅವರ ಜೊತೆ ಹಿರಿಯಡ್ಕ ವೀರಭದ್ರ ದೇವಸ್ಥಾನಕ್ಕೆಂದು ತೆರಳಿದ್ದ. ಆದರೆ, ಕಾರಿನಿಂದ ಇಳಿಯುವ ವೇಳೆ ಬೆನ್ನಟ್ಟಿ ಬಂದಿದ್ದ ರೌಡಿಗಳ ತಂಡ ಅಡ್ಡಗಟ್ಟಿದೆ. ಮಾರಕಾಯುಧಗಳ ಜೊತೆ ಬಂದಿದ್ದ ತಂಡ, ಕಿಶನ್ ಹೆಗ್ಡೆ ಜೊತೆ ವಾಗ್ವಾದ ನಡೆಸಿದ್ದಾರೆ. ಬಳಿಕ 4-5 ಮಂದಿ ಸೇರಿ ಕಿಶನ್ ಹೆಗ್ಡೆ ಕಾರಿನಿಂದ ಇಳಿಯುತ್ತಿದ್ದಾಗಲೇ ತಲವಾರಿನಿಂದ ಕಡಿದಿದ್ದಾರೆ. ಕಿಶನ್ ಹೆಗ್ಡೆ ಜತೆಯಲ್ಲಿದ್ದ ಹರಿಪ್ರಸಾದ್ ತಲೆಗೂ ಏಟು ಬಿದ್ದಿತ್ತು.

ರೌಡಿಶೀಟರ್‌ಗಳಾದ ಕಿಶನ್ ಹೆಗ್ಡೆ ಹಾಗೂ ಮನೋಜ್ ಕೋಡಿಕೆರೆ ನಡುವೆ ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಇತ್ತು. ಇದೇ ವೈಷಮ್ಯದಲ್ಲಿ ಮನೋಜ್ ಕೋಡಿಕೆರೆ ಇತರರೊಂದಿಗೆ ಸೇರಿ ಈ ಕೃತ್ಯ ಎಸಗಿದ್ದಾನೆ ಎನ್ನಲಾಗ್ತಿದೆ. ಕೊಲೆಯ ಬಳಿಕ ರೌಡಿಗಳು ತಾವು ಬಂದಿದ್ದ ರಿಡ್ಜ್ ಹಾಗೂ ಇನೋವಾದಲ್ಲಿ ಪಲಾಯನ ಆಗಿದ್ದರು. ರಿಡ್ಜ್ ಕಾರು ಗುರುವಾರವೇ ಕಣಂಜಾರು ಬಳಿ ಪತ್ತೆಯಾಗಿತ್ತು. ಇನೋವಾ ಕಾರು ಪತ್ತೆಯಾಗಿದ್ದರಿಂದ ಆರೋಪಿಗಳು, ತಮ್ಮ ಕಾರು ನಿಲ್ಲಿಸಿ ಬೇರೆ ವಾಹನಗಳಲ್ಲಿ ಪರಾರಿಯಾಗಿರುವ ಶಂಕೆಯಿದೆ. ಆರೋಪಿಗಳ ಪತ್ತೆಗೆ ಪೊಲೀಸರು ವಿಶೇಷ ತಂಡ ರಚಿಸಿದ್ದಾರೆ.
25-09-26 04:49 pm
HK News Staffer
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
27-09-26 10:59 am
HK News Desk
ಸರ್ವಕಾಲೇಜು ವಿದ್ಯಾರ್ಥಿ ಸಂಘದ ಪದಗ್ರಹಣ ; ವಿದ್ಯಾರ್...
26-09-26 08:05 pm
ಸೌಜನ್ಯ ಪ್ರಕರಣದ ಮರು ತನಿಖೆ ; ಹಿಂದಿನ ತನಿಖಾ ಲೋಪಗಳ...
26-09-26 03:35 pm
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ವಿಚಾರಣೆ ; ಪ...
26-09-26 11:04 am
ಮೈಸೂರು ದಸರಾಕ್ಕೆ ಕರಾವಳಿಯ ಕಂಬಳದ ಮೆರುಗು ; ಅ.18-1...
25-09-26 07:31 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm