ಬ್ರೇಕಿಂಗ್ ನ್ಯೂಸ್
18-05-22 10:28 pm Mangaluru Correspondent ಕ್ರೈಂ
Photo credits : Representational Image
ಬೆಳ್ತಂಗಡಿ, ಮೇ 18: ಅನ್ನಭಾಗ್ಯ ಅಕ್ಕಿಯನ್ನು ಅಕ್ರಮವಾಗಿ ತುಂಬಿಸಿಕೊಂಡು ಚಿಕ್ಕಮಗಳೂರಿನ ಕಡೆಗೆ ಒಯ್ಯುತ್ತಿದ್ದಾಗ ಧರ್ಮಸ್ಥಳ ಪೊಲೀಸರು ತಡೆದು ವಶಕ್ಕೆ ಪಡೆದಿರುವ ಘಟನೆ ಚಾರ್ಮಾಡಿಯಲ್ಲಿ ನಡೆದಿದೆ.
ಚಾರ್ಮಾಡಿ ಚೆಕ್ ಪೋಸ್ಟ್ ನಲ್ಲಿ ಧರ್ಮಸ್ಥಳ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದಾಗ, ಉಜಿರೆ ಕಡೆಯಿಂದ ತೆರಳುತ್ತಿದ್ದ ಕೆಎ 19ಸಿ 5086 ಸಂಖ್ಯೆಯ ಬೊಲೆರೋ ವಾಹನದಲ್ಲಿ ಅನ್ನಭಾಗ್ಯ ಅಕ್ಕಿ ಪತ್ತೆಯಾಗಿದೆ. ಯಾವುದೇ ದಾಖಲಾತಿ ಇಲ್ಲದೆ 50 ಕೆಜಿ ಅಕ್ಕಿಯ 59 ಚೀಲಗಳು, 25 ಕೇಜಿಯ 14 ಗೋಣಿ ಚೀಲಗಳಲ್ಲಿ ಅಕ್ಕಿ ಪತ್ತೆಯಾಗಿದೆ. ಒಟ್ಟು 33 ಕ್ವಿಂಟಾಲ್ ಅಕ್ಕಿಯನ್ನು ವಶಕ್ಕೆ ಪಡೆದಿದ್ದು, ಇದರ ಅಂದಾಜು ಮೌಲ್ಯ 49,500 ರೂ. ಆಗಿರುತ್ತದೆ.
ಈ ಬಗ್ಗೆ ಪೊಲೀಸರು ಬೆಳ್ತಂಗಡಿ ವಿಭಾಗದ ಆಹಾರ ನಿರೀಕ್ಷಕ ವಿಶ್ವ .ಕೆ , ಸಿಬಂದಿಯನ್ನು ಸ್ಥಳಕ್ಕೆ ಕರೆಸಿದ್ದು ಪಂಚನಾಮೆ ನಡೆಸಿದ್ದಾರೆ. ಆಹಾರ ನಿರೀಕ್ಷಕರ ದೂರಿನಂತೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಬೊಲೆರೊ ವಾಹನ ಚಾಲಕ ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಮುತ್ತಿಗೆಪುರ ಗ್ರಾಮದ ನಿವಾಸಿ ವಿನಯ್ (23) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಸದ್ರಿ ಅಕ್ಕಿಯು ಮೇ ತಿಂಗಳಲ್ಲಿ ಪಡಿತರ ಅಂಗಡಿಗಳಿಗೆ ಪೂರೈಸಿದ ಅಕ್ಕಿಯೆಂದು ಆಹಾರ ಇಲಾಖೆಯ ಅಧಿಕಾರಿಗಳು ಗುರುತಿಸಿದ್ದಾರೆ.
ಅಕ್ಕಿಯನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ಒಯ್ಯುತ್ತಿರುವ ಮಾಹಿತಿಯಿದ್ದು, ಚಾಲಕನಿಗೆ ಸಹಾಯ ಮಾಡಿದವರ ಪತ್ತೆಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಅಕ್ಕಿ ಮತ್ತು ಬೊಲೆರೋ ವಾಹನವನ್ನು ವಶಕ್ಕೆ ಪಡೆದಿದ್ದಾರೆ.
Mangalore Police seize 33 quintals of PDS rice at Charmadi Check Post
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm