ಬ್ರೇಕಿಂಗ್ ನ್ಯೂಸ್
06-08-22 07:44 pm Source: Vijayakarnataka ಡಿಜಿಟಲ್ ಟೆಕ್
ವಿಶ್ವ ಟೆಕ್ ದೈತ್ಯ ಕಂಪೆನಿ ಆಪಲ್ ತನ್ನ ಮುಂದಿನ ಐಫೋನ್ 14 ಸರಣಿ ಸ್ಮಾರ್ಟ್‌ಫೋನ್‌ಗಳನ್ನು ಈ ವರ್ಷದ ಕೊನೆಯಲ್ಲಿ ಸೆಪ್ಟೆಂಬರ್‌ನಲ್ಲಿ ಪ್ರಾರಂಭವಾಗುವ ನಿರೀಕ್ಷೆಯಿದೆ. ಬಹುನಿರೀಕ್ಷಿತ ಐಫೋನ್ 14 ಸರಣಿಯಲ್ಲಿ ಐಫೋನ್ 14, ಐಫೋನ್ 14, ಐಫೋನ್ ಮ್ಯಾಕ್ಸ್ ಮತ್ತು ಐಫೋನ್ 14 ಪ್ರೊ ಮ್ಯಾಕ್ಸ್ ಸ್ಮಾರ್ಟ್‌ಫೋನ್‌ಗಳು ಒಳಗೊಂಡಿರುತ್ತವೆ ಎಂಬ ಸುದ್ದಿಗಳು ಇತ್ತೀಚಿಗಷ್ಟೆ ದೊರೆತಿದ್ದವು. ಇದೀಗ ಬಂದಿರುವ ಹೊಸ ಸುದ್ದಿ ಏನೆಂದರೆ, ಐಫೋನ್ 14 ಸರಣಿ ಸ್ಮಾರ್ಟ್‌ಫೋನ್‌ಗಳನ್ನು ಭಾರತದಲ್ಲೇ ತಯಾರಿಸಲಾಗುತ್ತದೆ ಎನ್ನಲಾಗಿದೆ. ಜನಪ್ರಿಯ ಉದ್ಯಮ ವಿಶ್ಲೇಷಕ ಮಿಂಗ್-ಚಿ ಕುವೊ ಅವರು ಹಂಚಿಕೊಂಡಿರುವ ಮಾಹಿತಿಯಂತೆ, ಭಾರತದಲ್ಲಿ ಐಫೋನ್ 14 ಸರಣಿಯ ಕೆಲವು ಸ್ಮಾರ್ಟ್‌ಫೋನ್‌ಗಳನ್ನು ಸೆಂಬಲ್ ಮಾಡುವ ಮತ್ತು ರವಾನಿಸುವ ಗುರಿಯನ್ನು ಆಪಲ್ ಕಂಪೆನಿ ಹೊಂದಿದೆ ಎಂದು ಹೇಳಿದ್ದಾರೆ.
ಹೌದು, ಭಾರತದಲ್ಲಿ ಆಪಲ್ ಹೊಂದಿರುವ ಫಾಕ್ಸ್‌ಕಾನ್‌ನ ಐಫೋನ್ ಉತ್ಪಾದನಾ ಕೇಂದ್ರದಲ್ಲಿ ಐಫೋನ್ 14 ಸರಣಿ ಸ್ಮಾರ್ಟ್‌ಫೋನ್‌ಗಳನ್ನು ಅಸೆಂಬಲ್ ಮಾಡಲು ಮತ್ತು ವಿಶ್ವದಾದ್ಯಂತ ರಪ್ತು ಮಾಡುವ ಗುರಿಯನ್ನು ಆಪಲ್ ಹೊಂದಿದೆ. ಇದಲ್ಲದೇ, ಚೀನಾ ಮೇಲಿನ ತನ್ನ ಅವಲಂಬನೆಯನ್ನು ತಗ್ಗಿಸುವ ಸಲುವಾಗಿ ಆಪಲ್ ಭಾರತದಲ್ಲಿ ಕೆಲವು ಐಫೋನ್ 14 ಸರಣಿ ಸ್ಮಾರ್ಟ್‌ಫೋನ್‌ಗಳನ್ನು ಅಸೆಂಬಲ್ ಮಾಡಲಿದೆ ಎಂದು ಕುವೊ ತಮ್ಮ ಟ್ವೀಟ್‌ಗಳಲ್ಲಿ ಉಲ್ಲೇಖಿಸಿದ್ದಾರೆ. ಇತ್ತೀಚಿನ ಭೌಗೋಳಿಕ ರಾಜಕೀಯ ವಿಷಯಗಳ ಹಿನ್ನೆಲೆಯಲ್ಲಿ ಆಪಲ್ ಈ ತೀರ್ಮಾನಕ್ಕೆ ಬಂದಿದೆ ಎಂದು ಮಿಂಗ್-ಚಿ ಕುವೊ ಅವರು ಹೇಳಿದ್ದು, ಕೆಲವು ಐಫೋನ್ 14 ಫೋನ್‌ಗಳನ್ನು ಭಾರತದಲ್ಲಿ ತಯಾರಿಸುವ ಮೂಲಕ ಚೀನಾ ಅಲ್ಲದ ಉತ್ಪಾದನಾ ತಾಣವನ್ನು ಸ್ಥಾಪಿಸುವುದು ಆಪಲ್‌ನ 'ಪ್ರಮುಖ ಮೈಲಿಗಲ್ಲು' ಆಗಿರಬಹುದು ಎಂದು ಹೇಳಿದ್ದಾರೆ.
ವಿಶ್ವದ ಅತಿದೊಡ್ಡ ಮಾರುಕಟ್ಟೆಗಳಲ್ಲಿ ಒಂದಾಗಿರುವ ಭಾರತದಲ್ಲಿ ಆಪಲ್ ತನ್ನ ಬೆಳವಣಿಗೆಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ. ಚೀನಾದಲ್ಲಿ ನಡೆಯುತ್ತಿರುವ ಇತ್ತೀಚಿನ ಬೆಳವಣಿಗೆಗಳು ಭಾರತೀದ ಮಾರುಕಟ್ಟೆಯಲ್ಲಿ ಆಪಲ್ ನೆಲೆಯೂರುವಂತಹ ವಾತಾವರಣವನ್ನು ಸೃಷ್ಟಿಸುತ್ತಿದೆ. ಚೀನಾ ಅಲ್ಲದ ಐಫೋನ್ ಉತ್ಪಾದನಾ ತಾಣವನ್ನು ಸ್ಥಾಪಿಸುವುದು ಆಪಲ್ ಕಂಪೆನಿಯ ಪ್ರಮುಖ ಗುರಿಗಳಲ್ಲಿ ಒಂದು. ಇದಕ್ಕಾಗಿಯೇ ಜನಸಂಪನ್ಮೂಲ ಮತ್ತು ಸುಸ್ಥಿರ ಮಾರುಕಟ್ಟೆ ಬೆಳವಣಿಗೆಯನ್ನು ಕಾಣುತ್ತಿರುವ ಭಾರತವನ್ನು ಆಯ್ದುಕೊಳ್ಳಲು ಬಯಸುತ್ತಿದೆ ಎಂದು ಇತ್ತೀಚಿಗಷ್ಟೇ ಹೇಳಲಾಗಿತ್ತು. ಇದೀಗ ಉದ್ಯಮ ವಿಶ್ಲೇಷಕ ಮಿಂಗ್-ಚಿ ಕುವೊ ಅವರು ಹಂಚಿಕೊಂಡಿರುವ ಸುದ್ದಿಯಿಂದ ಇದು ನಿಜವಾದಂತಿದೆ. ಆದರೆ, ಈ ಬಗ್ಗೆ ಆಪಲ್ ಕಂಪೆನಿಯಿಂದ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ ಎಂಬುದನ್ನು ಸಹ ಗಮನಿಸಬೇಕು.
2022ರ ಸೆಪ್ಟೆಂಬರ್ ತಿಂಗಳಿನಲ್ಲಿ ಐಫೋನ್ 14 ಸರಣಿ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡಲು ಆಪಲ್ ಮುಂದಾಗಿದೆ. ಈ ಹೊಸ ಸರಣಿಯು ಚಿಪ್‌ಸೆಟ್, ಕ್ಯಾಮೆರಾ ಮತ್ತು ಇತರ ವಿಷಯಗಳ ವಿಷಯದಲ್ಲಿ ಪ್ರಮುಖ ನವೀಕರಣಗಳನ್ನು ಪಡೆಯುತ್ತಿರುವ ಬಗ್ಗೆ ಸಾಕಷ್ಟು ಮಾಹಿತಿಗಳು ಹೊರಬಿದ್ದಿವೆ. ಫೇಸ್‌ಐಡಿ ಕಟೌಟ್‌ನೊಂದಿಗೆ ಪಂಚ್ ಹೋಲ್ ಡಿಸ್‌ಪ್ಲೇ ವಿನ್ಯಾಸಲ್ಲಿ ಐಫೋನ್ 14 ಸರಣಿಯ ಸ್ಮಾರ್ಟ್‌ಫೋನ್‌ಗಳು ಬಿಡುಗಡೆಯಾಗುತ್ತಿವೆ. ಇದರ ಪ್ರೊ ಮಾದರಿ ಸ್ಮಾರ್ಟ್‌ಫೋನ್‌ಗಳು ಎ 16 ಬಯೋನಿಕ್ ಚಿಪ್‌ಸೆಟ್ ಅನ್ನು ಹೊಂದಿರಲಿವೆ. ಹಾಗೂ ಸುಮಾರು 30 ನಿಮಿಷಗಳಲ್ಲಿ 0 ರಿಂದ 100 ಪ್ರತಿಶತದವರೆಗೆ ಚಾರ್ಜ್ ಆಗುತ್ತದೆ ಎಂದು ಹೇಳಲಾಗುತ್ತಿದೆ. ಇವೆಲ್ಲವಕ್ಕಿಂತ ಹೆಚ್ಚಾಗಿ, ಐಫೋನ್ 14 ಸರಣಿ ಸ್ಮಾರ್ಟ್‌ಫೋನ್‌ಗಳು 30-ವ್ಯಾಟ್ ಚಾರ್ಜಿಂಗ್ ಬೆಂಬಲವನ್ನು ನೀಡಬಹುದು. ಎಂದು ಹೇಳಲಾಗಿದೆ.
Iphone 14 To Be Made In India Simultaneously With China At Launch.
18-09-25 05:34 pm
Bangalore Correspondent
Ksrtc Bus, Driver, Heart Attack: ಬಸ್ ಓಡಿಸುವಾಗ...
17-09-25 06:02 pm
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
18-09-25 08:14 pm
HK News Desk
ಎರಡು ಬಾರಿ ಕಚ್ಚಿದ್ರೆ ಬೀದಿ ನಾಯಿಗೆ ಜೀವಾವಧಿ ಶಿಕ್ಷ...
16-09-25 10:11 pm
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
18-09-25 07:40 pm
Mangalore Correspondent
Ajith Kumar Rai, Mangalore: ಬಂಟ- ನಾಡವರು ಒಂದೇ,...
18-09-25 06:11 pm
ಪೊಲೀಸರಿಂದ ಅಧಿಕಾರ ದುರುಪಯೋಗ, ದಬ್ಬಾಳಿಕೆ ; ಬೆನ್ನು...
18-09-25 04:31 pm
Mangalore, Traffic Police: ನಂಗೆ ಕೈಮಾಡಲು ನಿಂಗೇ...
18-09-25 02:42 pm
ಜಾತಿ ಗಣತಿ ಮೊದಲೇ ಮನೆಗಳಿಗೆ ಸ್ಟಿಕ್ಕರ್ ಅಂಟಿಸಿ ಗೊಂ...
18-09-25 02:19 pm
18-09-25 11:44 am
HK News Desk
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm