ಬ್ರೇಕಿಂಗ್ ನ್ಯೂಸ್
10-08-22 07:54 pm Source: Vijayakarnataka ಡಿಜಿಟಲ್ ಟೆಕ್
ವಿಶ್ವದ ಪ್ರೀಮಿಯಂ ಮೊಬೈಲ್ ಮಾರುಕಟ್ಟೆಯ ದಿಗ್ಗಜ ಕಂಪೆನಿಗಳಲ್ಲಿ ಒಂದಾದ OnePlus ತನ್ನ OnePlus Ace ಸರಣಿಯಲ್ಲಿ ಮತ್ತೊಂದು ಸ್ಮಾರ್ಟ್‌ಫೋನ್ ಅನ್ನು ಚೀನಾ ಮಾರುಕಟ್ಟೆಗೆ ಪರಿಚಯಿಸಿದೆ. ಕಳೆದ OnePlus Ace ಸ್ಮಾರ್ಟ್‌ಫೋನಿನ ಜನಪ್ರಿಯತೆಯನ್ನು ಮುಂದುವರೆಸುವ ಸಲುವಾಗಿ Qualcomm Snapdragon 8+ Gen 1 ಪ್ರೊಸೆಸರ್ ಜೊತೆಗೆ OnePlus Ace Pro ಸ್ಮಾರ್ಟ್‌ಫೋನ್ ಅನ್ನು ಚೀನಾದಲ್ಲಿ ಬಿಡುಗಡೆ ಮಾಡಲಾಗಿದ್ದು, 120Hz ರಿಫ್ರೆಶ್ ರೇಟ್ ಡಿಸ್‌ಪ್ಲೇ, ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಮತ್ತು 150W ಫಾಸ್ಟ್ ಚಾರ್ಜಿಂಗ್ ಬೆಂಬಲವಿರುವ 4,800mAh ಸಾಮರ್ಥ್ಯದ ಬ್ಯಾಟರಿ ವೈಶಿಷ್ಟ್ಯಗಳನ್ನು ಈ ಸ್ಮಾರ್ಟ್‌ಫೋನ್ ಹೊಂದಿದೆ ಹಾಗಾದರೆ, ನೂತನ OnePlus Ace Pro ಸ್ಮಾರ್ಟ್‌ಫೋನ್ ಹೇಗಿದೆ ಮತ್ತು ಬೆಲೆಗಳು ಎಷ್ಟು ಎಂಬ ಮಾಹಿತಿಯನ್ನು ತಿಳಿಯೋಣ ಬನ್ನಿ.
ವಿಶ್ವದ ಪ್ರೀಮಿಯಂ ಮೊಬೈಲ್ ಮಾರುಕಟ್ಟೆಯ ದಿಗ್ಗಜ ಕಂಪೆನಿಗಳಲ್ಲಿ ಒಂದಾದ OnePlus ತನ್ನ OnePlus Ace ಸರಣಿಯಲ್ಲಿ ಮತ್ತೊಂದು ಸ್ಮಾರ್ಟ್‌ಫೋನ್ ಅನ್ನು ಚೀನಾ ಮಾರುಕಟ್ಟೆಗೆ ಪರಿಚಯಿಸಿದೆ. ಕಳೆದ OnePlus Ace ಸ್ಮಾರ್ಟ್‌ಫೋನಿನ ಜನಪ್ರಿಯತೆಯನ್ನು ಮುಂದುವರೆಸುವ ಸಲುವಾಗಿ Qualcomm Snapdragon 8+ Gen 1 ಪ್ರೊಸೆಸರ್ ಜೊತೆಗೆ OnePlus Ace Pro ಸ್ಮಾರ್ಟ್‌ಫೋನ್ ಅನ್ನು ಚೀನಾದಲ್ಲಿ ಬಿಡುಗಡೆ ಮಾಡಲಾಗಿದ್ದು, 120Hz ರಿಫ್ರೆಶ್ ರೇಟ್ ಡಿಸ್‌ಪ್ಲೇ, ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಮತ್ತು 150W ಫಾಸ್ಟ್ ಚಾರ್ಜಿಂಗ್ ಬೆಂಬಲವಿರುವ 4,800mAh ಸಾಮರ್ಥ್ಯದ ಬ್ಯಾಟರಿ ವೈಶಿಷ್ಟ್ಯಗಳನ್ನು ಈ ಸ್ಮಾರ್ಟ್‌ಫೋನ್ ಹೊಂದಿದೆ ಹಾಗಾದರೆ, ನೂತನ OnePlus Ace Pro ಸ್ಮಾರ್ಟ್‌ಫೋನ್ ಹೇಗಿದೆ ಮತ್ತು ಬೆಲೆಗಳು ಎಷ್ಟು ಎಂಬ ಮಾಹಿತಿಯನ್ನು ತಿಳಿಯೋಣ ಬನ್ನಿ.
ಕ್ಯಾಮೆರಾ ವಿಭಾಗದಲ್ಲಿ, OnePlus Ace Pro ಸ್ಮಾರ್ಟ್‌ಫೋನ್ ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ ಅನ್ನು ಬೆಂಬಲಿಸುವ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದೆ. ಇದರಲ್ಲಿ 50 ಮೆಗಾಪಿಕ್ಸೆಲ್ ಸೋನಿ IMX766 ಮುಖ್ಯ ಕ್ಯಾಮೆರಾ, f/2.2 ಅಪಾರ್ಚರ್‌ನೊಂದಿಗೆ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್ ಲೆನ್ಸ್ ಮತ್ತು f/2.4 ಅಪಾರ್ಚರ್‌ನೊಂದಿಗೆ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್‌ಗಳನ್ನು ನೀಡಲಾಗಿದ್ದು, ಈ ಹಿಂಬದಿಯ ಕ್ಯಾಮೆರಾವು 60fps ಮತ್ತು 30fps ನಲ್ಲಿ 4K ವೀಡಿಯೊವನ್ನು ರೆಕಾರ್ಡ್ ಮಾಡಬಹುದು ಎಂದು ಕಂಪೆನಿ ತಿಳಿಸಿದೆ. ಸೆಲ್ಫಿ ಮತ್ತು ವಿಡಿಯೋಗಳಿಗಾಗಿ f/2.4 ಅಪರ್ಚರ್ ಲೆನ್ಸ್‌ನೊಂದಿಗೆ 16-ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು OnePlus Ace Pro ಸ್ಮಾರ್ಟ್‌ಫೋನಿನಲ್ಲಿ ಅಳವಡಿಸಿರುವುದನ್ನು ಸೂಚಿಸಲಾಗಿದೆ.
OnePlus Ace Pro 5G ಸ್ಮಾರ್ಟ್‌ಫೋನ್ 150W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುವ 4,800mAh ಸಾಮರ್ಥ್ಯದ ಬ್ಯಾಟರಿಯಯನ್ನು ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ WiFi 6, Bluetooth v5.2, NFC ಮತ್ತು USB ಟೈಪ್-C ಪೋರ್ಟ್ ವೈಶಿಷ್ಟ್ಯಗಳನ್ನು ಒಳಗೊಂಡಿರುವ OnePlus Ace Pro 5G ಸ್ಮಾರ್ಟ್‌ಫೋನ್ Dolby Atmos ಬೆಂಬಲದೊಂದಿಗೆ ಡ್ಯುಯಲ್-ಸ್ಟಿರಿಯೊ ಸ್ಪೀಕರ್ ಸೆಟಪ್ ಮತ್ತು ಡ್ಯುಯಲ್-ಮೈಕ್ರೊಫೋನ್ ಸೆಟಪ್, ಬಯೋಮೆಟ್ರಿಕ್ ದೃಢೀಕರಣಕ್ಕಾಗಿ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಮತ್ತು ಮುಖ ಗುರುತಿಸುವಿಕೆ ವೈಶಿಷ್ಟ್ಯಗಳನ್ನು ಹೊಂದಿರುವುದನ್ನು ನಾವು ನೋಡಬಹುದು.
OnePlus Ace Pro ಸ್ಮಾರ್ಟ್‌ಫೋನಿನ ಬೆಲೆಗಳು!
ನೂತನ OnePlus Ace Pro ಸ್ಮಾರ್ಟ್‌ಫೋನ್ ಇದೀಗ ಚೀನಾ ಮಾರುಕಟ್ಟೆಯಲ್ಲಷ್ಟೇ ಬಿಡುಗಡೆಗೊಂಡಿದ್ದು, 16GB + 256GB ಸ್ಟೋರೇಜ್ ಆಯ್ಕೆಗೆ CNY 3,799 (ಅಂದಾಜು 44,800 ರೂ.), 12GB RAM + 256GB ಸ್ಟೋರೇಜ್ ಆಯ್ಕೆಗೆ CNY 3,499 (ಅಂದಾಜು 41,200 ರೂ.) ಮತ್ತು 16GB RAM + 512GB ಸ್ಟೋರೇಜ್ ಆಯ್ಕೆಯು CNY 4,299 (ಸುಮಾರು 50,700 ರೂ.) ಬೆಲೆಗಳಲ್ಲಿ ಬಿಡುಗಡೆಗೊಂಡಿವೆ. ಇದೇ ಆಗಸ್ಟ್ 15 ರಿಂದ ಚೀನಾದಲ್ಲಿ OnePlus Ace Pro ಸ್ಮಾರ್ಟ್‌ಫೋನ್ ಅನ್ನು ಮಾರಾಟಕ್ಕೆ ಇಡಲಾಗಿದ್ದು, ಜೇಡ್ ಗ್ರೀನ್ ಮತ್ತು ಮೂನ್‌ಸ್ಟೋನ್ ಕಪ್ಪು ಬಣ್ಣದ ಆಯ್ಕೆಗಳಲ್ಲಿ ಮಾರಾಟವಾಗಲಿದೆ.
Oneplus Ace Pro Smartphone Launched Price, Specifications.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm