ಬ್ರೇಕಿಂಗ್ ನ್ಯೂಸ್
24-08-22 07:41 pm Source: GIZBOT ಡಿಜಿಟಲ್ ಟೆಕ್
ಮುಂದಿನ ತಿಂಗಳು (ಸೆಪ್ಟೆಂಬರ್) ಬಹುನಿರೀಕ್ಷಿತ ಆಪಲ್ ಐಫೋನ್ 14 ಸರಣಿ ಬಿಡುಗಡೆ ಆಗಲಿದ್ದು, ಅಧಿಕೃತ ದಿನಾಂಕ ಪ್ರಕಟವಾಗಬೇಕಿದೆ. ಆಪಲ್ ಪ್ರಿಯರಲ್ಲಿ ಐಫೋನ್ 14 ಸರಣಿಯ ಫೋನ್‌ಗಳ ಬಗ್ಗೆ ಈಗಾಗಲೇ ಸಾಕಷ್ಟು ಕುತೂಹಲ ಮನೆಮಾಡಿವೆ. ಐಫೋನ್ 14 ಸರಣಿ ಲಾಂಚ್ ಮುನ್ನವೇ ಜನಪ್ರಿಯ ದೈತ್ಯ ಇ ಕಾಮರ್ಸ್ ತಾಣ ಅಮೆಜಾನ್ ಐಫೋನ್ ಪ್ರಿಯರಿಗೆ ಗುಡ್‌ನ್ಯೂಸ್ ನೀಡಿದೆ.
ಹೌದು, ಅಮೆಜಾನ್ ಇ ಕಾಮರ್ಸ್ ತಾಣವು ಐಫೋನ್ 13 ಮತ್ತು ಐಫೋನ್ 12 ಫೋನ್‌ಗಳಿಗೆ ಭರ್ಜರಿ ಡಿಸ್ಕೌಂಟ್ ತಿಳಿಸಿದೆ. ಐಫೋನ್ 13, 128 GB ಸ್ಟೋರೇಜ್ ವೇರಿಯಂಟ್ ಬೆಲೆಯು 70,900ರೂ. ಆಗಿದ್ದು, ಕೊಡುಗೆಯಲ್ಲಿ 69,900ರೂ.ಗಳಿಗೆ ಲಭ್ಯವಾಗಲಿದೆ. ಹಾಗೆಯೇ ಕಂಪನಿಯು 24,400ರೂ. ಗಳ ವರಗೆ ಎಕ್ಸ್‌ಚೇಂಜ್ ಕೊಡುಗೆಯನ್ನು ಘೋಷಿಸಿದೆ. ಅದೇ ರೀತಿ ಆಪಲ್ ಐಫೋನ್ 12 (64 GB) ಫೋನ್ ಸಹ 53,999ರೂ. ಗಳ ರಿಯಾಯಿತಿ ದರದಲ್ಲಿ ಸಿಗಲಿದೆ.
ಐಫೋನ್ 12 ಫೋನ್ (64 GB) ಬೆಲೆಯು 65,900ರೂ. ಗಳು ಆಗಿದ್ದು, ಅಮೆಜಾನ್ 18% ವರೆಗೂ ರಿಯಾಯಿತಿ ತಿಳಿಸಿದೆ. ಇದರೊಂದಿಗೆ 24,400ರೂ. ಗಳ ವರೆಗೂ ವಿನಿಮಯ ರಿಯಾಯಿತಿ ಸಹ ಲಭ್ಯ ಮಾಡಿದೆ. ಹಾಗಾದರೆ ಆಪಲ್ ಐಫೋನ್ 13 ಮತ್ತು ಐಫೋನ್ 12 ಫೋನ್‌ಗಳ ಫೀಚರ್ಸ್‌ಗಳೆನು ಹಾಗೂ ಲೀಕ್ ಮಾಹಿತಿ ಪ್ರಕಾರ ಸದ್ಯದಲ್ಲೇ ಎಂಟ್ರಿ ಕೊಡಲಿರುವ ಐಫೋನ್ 14 ಫೋನಿನ ಫೀಚರ್ಸ್‌ಗಳೆನು ಎಂಬುದನ್ನು ಮುಂದೆ ತಿಳಿಯೋಣ.
ಐಫೋನ್ 13 ಫೋನ್ ಫೀಚರ್ಸ್
ಐಫೋನ್ 13 ಫೋನ್ 6.1 ಇಂಚಿನ ಡಿಸ್‌ಪ್ಲೇ ಹೊಂದಿದ್ದು, ಅತ್ಯುತ್ತುಮ ಪಿಕ್ಸಲ್ ರೆಸಲ್ಯೂಶನ್ ಪಡೆದಿದೆ. 1200nits ಬ್ರೈಟ್ನೆಸ್ ಹೊಂದಿದೆ. ಹಾಗೆಯೇ ಈ ಫೋನ್ A15 ಬಯೋನಿಕ್ ಸೋಕ್ ಕ್ವಾಡ್ ಕೋರ್ ಪ್ರೊಸೆಸರ್ ಅನ್ನು ಹೊಂದಿದೆ. 5G ಅನ್ನು ಬೆಂಬಲಿಸುತ್ತದೆ. ಐಫೋನ್ 13 ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಹೊಂದಿದ್ದು, ಅವುಗಳು ಕ್ರಮವಾಗಿ 12 ಮೆಗಾ ಪಿಕ್ಸೆಲ್ ಅಲ್ಟ್ರಾ ಕ್ಯಾಮೆರಾ ಸೆನ್ಸಾರ್ ಹೊಂದಿದ್ದು, ಇನ್ನೊಂದು ಕ್ಯಾಮೆರಾವು 12 ಮೆಗಾ ಪಿಕ್ಸಲ್ ವೈಲ್ಡ್ ಆಂಗಲ್ ಲೆನ್ಸ್ ಪಡೆದಿದೆ.
ಯಾವುದೇ ಸಂದರ್ಭದಲ್ಲಿಯೂ ಅತ್ಯುತ್ತಮ ಫೋಟೊ ಸೆರೆಹಿಡಿಯಲು ನೆರವಾಗಲಿದೆ. ಸಿನಿಮ್ಯಾಟಿಕ್ ಮೋಡ್ ಆಯ್ಕೆ ಪಡೆದಿದೆ. ಇನ್ನು ಈ ಫೋನ್ ಪಿಂಕ್, ರೆಡ್, ಬ್ಲ್ಯಾಕ್, ವೈಟ್ ಸೇರಿದಂತೆ ಐದು ಬಣ್ಣಗಳಲ್ಲಿ ಲಭ್ಯವಾಗಲಿದೆ. ಹಾಗೆಯೇ ಈ ಫೋನ್ ಬ್ಯಾಟರಿ ಹಿಂದಿನ ಐಫೋನ್ 12 ಗಿಂತ ಉತ್ತಮವಾಗಿದೆ.
ಐಫೋನ್ 12 ಫೋನ್ ಫೀಚರ್ಸ್
ಐಫೋನ್ 12 ಫೋನ್ 6.1 ಇಂಚಿನ ಡಿಸ್‌ಪ್ಲೇ ಹೊಂದಿದ್ದು, OLED ಡಿಸ್‌ಪ್ಲೇ ಹೊಂದಿದೆ. ಈ ಫೋನ್ A14 ಬಯೋನಿಕ್ ಸೋಕ್ ಕ್ವಾಡ್ ಕೋರ್ ಪ್ರೊಸೆಸರ್ ಅನ್ನು ಹೊಂದಿದೆ. 5G ಅನ್ನು ಬೆಂಬಲಿಸುತ್ತದೆ. ಐಫೋನ್ 12 ಫೋನ್ ಎರಡು ಕ್ಯಾಮೆರಾ ಹೊಂದಿದ್ದು, ಅವುಗಳು ಕ್ರಮವಾಗಿ 12 ಮೆಗಾ ಪಿಕ್ಸೆಲ್ ವೈಡ್-ಆಂಗಲ್ ಸಂವೇದಕಗಳನ್ನು ಹೊಂದಿವೆ. ಮುಂಭಾಗದಲ್ಲಿ ಸೆಲ್ಫಿ ಕ್ಯಾಮೆರಾವು ಸಹ 12 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ನೈಟ್ ಮೋಡ್ ಆಯ್ಕೆ ಇದ್ದು ಕಡಿಮೆ ಬೆಳಕಿನಲ್ಲಿಯೂ ಅತ್ಯುತ್ತಮ ಫೋಟೊ ಸೆರೆಹಿಡಿಯಲು ನೆರವಾಗಲಿದೆ. ಇದು 64GB + 4GB RAM, 128GB + 4GB RAM ಮತ್ತು 256GB + 4GB RAM ವೇರಿಯಂಟ್ ಆಯ್ಕೆಗಳನ್ನು ಒಳಗೊಂಡಿದೆ. ಈ ಫೋನ್ IP68 ಧೂಳು ಹಾಗೂ ನೀರಿನ ರೆಸಿಸ್ಟೆನ್ಸ್ ಪಡೆದಿದೆ.
ಆಪಲ್ ಐಫೋನ್ 14 ಸರಣಿ
ಆಪಲ್ ಸಂಸ್ಥೆಯು ಇದೇ ಸೆಪ್ಟೆಂಬರ್‌ನಲ್ಲಿ ತನ್ನ ಐಫೋನ್ 14 ಸರಣಿಯನ್ನು ಬಿಡುಗಡೆ ಮಾಡಲಿದೆ. ಈ ಸರಣಿಯು ಐಫೋನ್ 14, ಐಫೋನ್ 14 ಪ್ರೊ, ಐಫೋನ್ 14 ಪ್ರೊ ಮ್ಯಾಕ್ಸ್ ಮಾದರಿಗಳನ್ನು ಒಳಗೊಂಡಿರಲಿದೆ ಎಂದು ಹೇಳಲಾಗುತ್ತಿದೆ. ಅವುಗಳ ಪೈಕಿ ಐಫೋನ್ 14 ಫೋನ್ 6.1 ಇಂಚಿನ ಡಿಸ್‌ಪ್ಲೇ ಒಳಗೊಂಡಿರಲಿದೆ. ಐಫೋನ್ 14 ಪ್ರೊ ಮತ್ತು ಐಫೋನ್ 14 ಪ್ರೊ ಮ್ಯಾಕ್ಸ್ ಫೋನ್‌ಗಳು 6.7 ಇಂಚಿನ ಡಿಸ್‌ಪ್ಲೇ ಹೊಂದಿರಲಿವೆ. ಈ ಹಿಂದಿನ ಸರಣಿಗೆ ಹೋಲಿಸಿದರೆ ಐಫೋನ್ 14 ಸರಣಿಯ ಬೆಲೆಗಳು ಹೆಚ್ಚಿರಲಿವೆ ಎಂದು ಎಂದು ಆಪಲ್ ವಿಶ್ಲೇಷಕ ಮಿಂಗ್-ಚಿ ಕುವೊ ಹೇಳಿದ್ದಾರೆ.
A huge discount for this iPhone from Amazon before the release of iPhone 14.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm